Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಬಳ ನಡೆಸುವವರಿಂದ ಕೃಷಿಭೂಮಿ ಉಳಿಸಲು...

ಕಂಬಳ ನಡೆಸುವವರಿಂದ ಕೃಷಿಭೂಮಿ ಉಳಿಸಲು ಸಾಧ್ಯವೇ? : ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ11 Feb 2025 7:13 PM IST
share
ಕಂಬಳ ನಡೆಸುವವರಿಂದ ಕೃಷಿಭೂಮಿ ಉಳಿಸಲು ಸಾಧ್ಯವೇ? : ಮುನೀರ್ ಕಾಟಿಪಳ್ಳ

ಮಂಗಳೂರು: ಬಡ ರೈತರ ಅಮಾಯಕತೆಯನ್ನು ಬಂಡವಾಳ ಮಾಡಿಕೊಂಡು ಗೂಂಡಾ ಪ್ರವೃತ್ತಿಯ ಏಜಂಟರನ್ನು ಮುಂದಿಟ್ಟು ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಮುನ್ನೂರು, ಬೆಳ್ಮ, ಮಂಜನಾಡಿ ಗ್ರಾಮಗಳಲ್ಲಿ ಅತಿ ಕಡಿಮೆ ದರ ನೀಡಿ ಕೃಷಿ ಭೂಮಿ ಸ್ವಾಧೀನ ಪಡಿಸಲಾಗುತ್ತಿದೆ. ಸುತ್ತಲಿನ ಜಮೀನು ಖರೀದಿ ಮಾಡಿ ಮಧ್ಯದಲ್ಲಿರುವ ಕೃಷಿ ಭೂಮಿಯ ಸಂಪರ್ಕ ರಸ್ತೆಗಳನ್ನು ಮುಚ್ಚಿ, ನಕಲಿ ದಾಖಲೆಗಳನ್ನು ಸೃಷ್ಟಿಸಲಾಗುತ್ತಿದೆ. ಜಿಲ್ಲಾಧಿಕಾರಿಯನ್ನೂ ತಾಳಕ್ಕೆ ತಕ್ಕಂತೆ ಕುಣಿಸುವ ಭೂಮಾಫಿಯಾಗಳು ಹೊಸ ಸಾಮ್ರಾಜ್ಯವನ್ನು ಕಟ್ಟಿದೆ. ಜನಪ್ರತಿನಿಧಿಗಳು ಕೃಷಿ ಪರಂಪರೆಯ ಉಳಿವಿನ ಹೆಸರಿನಲ್ಲಿ ಕಂಬಳ ಆಯೋಜಿಸುವ ಸಂಭ್ರಮದಲ್ಲಿ ಮುಳುಗಿದ್ದಾರೆ. ಇವರಿಂದ ಕೃಷಿಭೂಮಿ ಉಳಿಸಲು ಸಾಧ್ಯವೇ?ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.

ಅಂಬ್ಲಮೊಗರು ಗ್ರಾಮದ ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಮಂಗಳವಾರ ನಡೆದ ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಮೀನ್ದಾರಿಕೆ ಪದ್ಧತಿಯ ವಿರುದ್ಧ ಗೇಣಿದಾರ ರೈತರು ದಶಕಗಳ ಕಾಲ ಸಂಘರ್ಷ ನಡೆಸಿ ಭೂಮಿಯ ಹಕ್ಕು ಪಡೆದ ಉಳ್ಳಾಲ ತಾಲೂಕಿನಲ್ಲಿ ನವ ಭೂಮಾಲಕ ಪದ್ಧತಿ ತಲೆ ಎತ್ತಿದೆ. ರೈತರ ನೂರಾರು ಎಕರೆ ಜಮೀನು ಸದ್ದಿಲ್ಲದೆ ಬಲಾಢ್ಯ ವರ್ಗದ ಪಾಲಾಗುತ್ತಿದೆ. ಅತ್ತ ನರಿಂಗಾನದಲ್ಲಿ ಕಾಂಗ್ರೆಸಿಗರು, ಇತ್ತ ಜಪ್ಪಿನಮೊಗರಿನಲ್ಲಿ ಬಿಜೆಪಿಗರು ಆಡಂಬರದ ಕಂಬಳಗಳನ್ನು ಆಯೋಜಿಸಿದ್ದಾರೆ. ಆದರೆ ಈ ಎರಡು ಕಂಬಳ ಕೇಂದ್ರಗಳ ನಡುವಿನ ಗ್ರಾಮಗಳಲ್ಲಿ ನೈಜ ರೈತಾಪಿಗಳು ಭೂಮಿ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದರೂ, ಈ ಜನಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಬದಲಿಗೆ ಭೂಮಾಫಿಯಾಗಳಿಂದಲೇ ಕಂಬಳದ ಪ್ರಾಯೋಜಕತ್ವ ಪಡೆಯುತ್ತಿದ್ದಾರೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದರು.

ಕಂಬಳದ ಕುರಿತಾದ ಕಾಳಜಿ ನೈಜ ರೈತರು, ಕೃಷಿ ಭೂಮಿಯ ಉಳಿವಿನ ಕುರಿತು ಶಾಸಕರುಗಳಿಗೆ ಇರದಿರುವುದು ವಿಷಾದನೀಯ, ಇಂತಹ ಬೂಟಾಟಿಕೆಯ ಜನಪ್ರತಿನಿಧಿಗಳನ್ನು ನಂಬಿ ಕೂರದೆ, ಬಲಿಷ್ಟ ಹೋರಾಟಕ್ಕೆ ಜನತೆ ಮುಂದಾಗಬೇಕು ಎಂದು ಇಐ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳರವರು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟ ಸಮಿತಿಯ ಗೌರವ ಸಲಹೆಗಾರ ಸುನಿಲ್ ಕುಮಾರ್ ಬಜಾಲ್, ರೈತ ಸಂಘಟನೆಯ ಜಿಲ್ಲಾ ನಾಯಕರಾದ ಕೃಷ್ಣಪ್ಪಸಾಲ್ಯಾನ್, ಕೆ. ಯಾದವ ಶೆಟ್ಟಿ ಮಾತನಾಡಿದರು.

ಜಿಲ್ಲೆಯ ರೈತ ಸಂಘಟನೆಯ ಮುಖಂಡರಾದ ಶೇಖರ್ ಕುಂದರ್, ವಿಶ್ವನಾಥ್ ತೇವುಲ, ಕಾರ್ಮಿಕ ಮುಖಂಡರಾದ ಸುಂದರ ಕುಂಪಲ, ವಿಲಾಸಿನಿ, ಪ್ರಮೋದಿನಿ, ಜನಾರ್ದನ ಕುತ್ತಾರ್, ರಫೀಕ್ ಹರೇಕಳ, ಅನ್ಸಾರ್ ಬಜಾಲ್, ಜಯರಾಮ ತೇವುಲ, ಲೋಕೇಶ್ ಅಳಪೆ, ಯುವಜನ ನಾಯಕರಾದ ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ, ವಿದ್ಯಾರ್ಥಿ ನಾಯಕರಾದ ವಿನುಷ ರಮಣ, ಕೋಶಿನ್, ನಾಯಕಿಯರಾದ ಪ್ರಮಿಳಾ ಶಕ್ತಿನಗರ, ಶಶಿಕಲಾ ಕುತ್ತಾರ್, ಪ್ರಮೀಳಾ ದೇವಾಡಿಗ, ನಳಿನಾಕ್ಷಿ ಶೆಟ್ಟಿ, ಮಾಜಿ ತಾಪಂ ಸದಸ್ಯರಾದ ಶಾಲಿನಿ ಪೂಜಾರಿ, ಮುನ್ನೂರು ಗ್ರಾಪಂ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಗ್ರಾಪಂ ಸದಸ್ಯೆ ರಾಜೇಶ್ವರಿ ಪಾಲ್ಗೊಂಡಿದ್ದರು.

ಹೋರಾಟದ ನೇತೃತ್ವವನ್ನು ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನಾಯಕರಾದ ಇಬ್ರಾಹಿಂ ಮದಕ, ಸುಂದರ, ಹಿತೇಶ್, ಅಬ್ಬಾಸ್ ಮದಕ, ರವಿಕುಮಾರ್, ಕಿಶೋರ್ ಗಟ್ಟಿ, ಕೂಸಪ್ಪ, ಕಮರುನ್ನೀಸಾ, ಭಾರತಿ, ಹಸನ್‌ಕುಂಞಿ, ಇಸುಬು, ಅಬ್ಬಾಸ್, ಜಯ ಕುಮಾರ್ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X