Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೆಲಮೂಲ ಸಂಸ್ಕೃತಿಗೆ ಒತ್ತು ನೀಡಲು...

ನೆಲಮೂಲ ಸಂಸ್ಕೃತಿಗೆ ಒತ್ತು ನೀಡಲು ಭಾಸ್ಕರ ರೈ ಕುಕ್ಕುವಳ್ಳಿ ಕರೆ

ಒಡಿಯೂರು: ತುಳು ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ11 Feb 2025 7:43 PM IST
share
ನೆಲಮೂಲ ಸಂಸ್ಕೃತಿಗೆ ಒತ್ತು ನೀಡಲು ಭಾಸ್ಕರ ರೈ ಕುಕ್ಕುವಳ್ಳಿ ಕರೆ

ಒಡಿಯೂರು, ಫೆ.11: ಱತುಳುನಾಡಿನಲ್ಲಿ ಧಾರ್ಮಿಕ, ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಭಾಷೆಯ ಜಾಗೃತಿ ಮೂಡಿಸ ಲಾಗುತ್ತದೆ. ನಾಲ್ಕು ಕಾಲ ಬದುಕುವ, ಉಳಿಯುವಂತಹ ಸಾಹಿತ್ಯ ರಚನೆಯಾಗಬೇಕು. ನೆಲಮೂಲದ ಗ್ರಾಮ ಸಂಸ್ಕೃತಿ ಯತ್ತ ಬರಹಗಾರರು ಗಮನಿಸಬೇಕು. ತುಳುವರನ್ನು ಓದಿನೆಡೆಗೆ ಆಕರ್ಷಿಸುವಂತಹ ರಚನಾತ್ಮಕ ಕೆಲಸಗಳು ಸಾಹಿತ್ಯ ದಲ್ಲಿ ನಡೆಯಬೇಕು ಎಂದು ತುಳು - ಕನ್ನಡ ಸಾಹಿತಿ, ಕರ್ನಾಟಕ ಜಾನಪದ-ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡ ಮಿಯ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಕರೆ ನೀಡಿದ್ದಾರೆ.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ರಥೋತ್ಸವ ಹಾಗೂ ತುಳುನಾಡು ಜಾತ್ರೆಯ ಸಂದರ್ಭದಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಂಗಾರದ ಬಟ್ಟಲಾಗಿದ್ದ ತುಳುನಾಡು ಈಗ ಬರಡು ನೆಲವಾಗುತ್ತಿದೆ. ಯುವಕರು ಕೃಷಿ ತ್ಯಜಿಸಿ ಪೇಟೆ ಕಡೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ವಿಚಾರ. ಇಂದು ತುಳು ಸಾಹಿತ್ಯ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಆಗುತ್ತಿದೆ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ತುಳು ಭಾಷೆಗೆ ಮಾನ್ಯತೆ ಸಿಗುತ್ತಿಲ್ಲ ಎಂದು ಭಾಸ್ಕರ ರೈ ಕುಕ್ಕುವಳ್ಳಿ ವಿಷಾದಿಸಿದರು.

ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಡಿಯೂರು ಗುರುದೇವಾನಂದ ಸ್ವಾಮೀಜಿ ತುಳುಲಿಪಿಯಲ್ಲಿ ಬರೆದ ಱಶ್ರೀಮದ್ಭಗವದ್ಗೀತೊ’ ಮತ್ತು ಡಾ. ವಸಂತ ಕುಮಾರ ಪೆರ್ಲ ಅವರ ’ಮಾಯಿಪ್ಪಾಡಿ ವೀರ ಪುಳ್ಕೂರ ಬಾಚೆ’ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಮತ್ತು ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅತಿಥಿ ಗಳಾಗಿದ್ದರು. ತುಳು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಕದ್ರಿ ನವನೀತ ಶೆಟ್ಟಿ ಸಮ್ಮೇಳನಾ ಧ್ಯಕ್ಷರನ್ನು ಪರಿಚಯಿಸಿದರು.

ʼತುಳು ಬಾಸೆ-ಸಂಸ್ಕೃತಿದ ಜಾಗೃತಿಗಾದ್’ ಎಂಬ ಧ್ಯೇಯವಾಕ್ಯದೊಂದಿಗೆ ಜರುಗಿದ ಸಮ್ಮೇಳದ ವಿಚಾರಗೋಷ್ಠಿ, ತುಲಿಪು ಕಾರ್ಯಕ್ರಮದಲ್ಲಿ ಡಾ.ಎಸ್.ಆರ್.ಅರುಣ್‌ಕುಮಾರ್ (ತುಳುನಾಡ್ದ ಸಂತ ಪರಂಪರೆ), ಡಾ.ನವೀನ್ ಕುಮಾರ್ ಮರಿಕೆ (ತುಳುನಾಡ್ದ ಜಾನಪದ ಪರಂಪರೆ), ಮಲ್ಲಿಕಾ ಜೆ. ರೈ ಗುಂಡ್ಯಡ್ಕ (ತುಳುನಾಡ್ದ ಸಾಹಿತ್ಯ ಪರಂಪರೆ) ಪ್ರಬಂಧಗಳನ್ನು ಮಂಡಿಸಿದರು.

ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರಾದ ಪಾಡ್ದನ ಕಲಾವಿದೆ ಕರ್ಗಿ ಶೆಡ್ತಿ, ತುಳು-ಕನ್ನಡ ಸಿನಿಮಾ ನಿರ್ಮಾಪಕ ಪುಷ್ಪರಾಜ ರೈ ಮಲಾರುಬೀಡು, ಸಮಾಜ ಸೇವಕ ಹರೀಶ ಶೆಟ್ಟಿ ಮಾಡ, ಸಾವಯವ ಕೃಷಿಕ ಕೃಷ್ಣಪ್ಪಪುರುಷ ಕೇಪು ಮತ್ತು ಆರಕ್ಷಕ ಪ್ರವೀಣ್ ರೈ ನಡುಕೂಟೇಲು ಅವರಿಗೆ ’ತುಳುಸಿರಿ ಮಾನಾದಿಗೆ’ ನೀಡಿ ಸನ್ಮಾನಿಸಲಾಯಿತು.

ನಿತ್ಯಶ್ರೀ ರೈ ಪ್ರಾರ್ಥಿಸಿದರು. ತುಳು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಡಾ.ವಸಂತ ಕುಮಾರ್ ಪೆರ್ಲ ಸ್ವಾಗತಿಸಿದರು. ರಥೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ ತುಳುಸಿರಿ ಪುರಸ್ಕೃತರನ್ನು ಪರಿಚಯಿಸಿದರು.

ದೇವಿಪ್ರಸಾದ್ ಶೆಟ್ಟಿ ಬೆಜ್ಜ ಕಾರ್ಯಕ್ರಮ ನಿರೂಪಿಸಿದರು. ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾದೇಶ್ ಭಂಡಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X