ಮಂಗಳೂರು: ಕಲಾ ಜಾಥಾಕ್ಕೆ ಚಾಲನೆ

ಮಂಗಳೂರು,ಫೆ.11: ರಾಜ್ಯ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಏರ್ಪಡಿಸಿರುವ ಕಲಾ ಜಾಥಾಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಕಲಾ ಜಾಥಾದ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸಹಿತ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಿದೆ.
ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಕಲಾ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಯಕ್ಷಗಾನ ಕಲಾವಿದ ಗಿರೀಶ್ ನಾವಡ ಮತ್ತಿತರರು ಉಪಸ್ಥಿತರಿದ್ದರು.
Next Story





