Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹುದ್ದೆಗಿಂತ ಜವಾಬ್ದಾರಿ ಅರಿತು ಕೆಲಸ...

ಹುದ್ದೆಗಿಂತ ಜವಾಬ್ದಾರಿ ಅರಿತು ಕೆಲಸ ಮಾಡಿ: ಸ್ಪೀಕರ್ ಯು.ಟಿ.ಖಾದರ್ ಸಲಹೆ

ಅಖಿಲ ಭಾರತ ಬ್ಯಾರಿ ಪರಿಷತ್‌ನ ಮಹಿಳಾ ಘಟಕದ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ12 Feb 2025 5:42 PM IST
share
ಹುದ್ದೆಗಿಂತ ಜವಾಬ್ದಾರಿ ಅರಿತು ಕೆಲಸ ಮಾಡಿ: ಸ್ಪೀಕರ್ ಯು.ಟಿ.ಖಾದರ್ ಸಲಹೆ

ಮಂಗಳೂರು, ಫೆ.12: ಸಂಘಟನೆಗಳನ್ನು ಸ್ಥಾಪಿಸುವುದು ಸುಲಭ. ಆದರೆ ಅದನ್ನು ನಿರ್ವಹಿಸಿಕೊಂಡು ಹೋಗುವುದು ಕಷ್ಟದಾಯಕ. ಹಾಗಾಗಿ ಯಾವ ವ್ಯಕ್ತಿಗೆ ಯಾವತ್ತೂ ಕೂಡ ಹುದ್ದೆ ಮುಖ್ಯ ಆಗಬಾರದು. ಜವಾಬ್ದಾರಿ ಅರಿತುಕೊಂಡು ಕೆಲಸ ಮಾಡುವುದೇ ಮುಖ್ಯ ಗುರಿಯಾಗಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಅಖಿಲ ಭಾರತ ಬ್ಯಾರಿ ಪರಿಷತ್ ಆಶ್ರಯದಲ್ಲಿ ನಗರದ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಬುಧವಾರ ನಡೆದ ಬ್ಯಾರಿ ಮಹಿಳಾ ಸಮಾವೇಶದಲ್ಲಿ ನೂತನ ಮಹಿಳಾ ಘಟಕದ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.

ಧಾರ್ಮಿಕ ಹಾಗೂ ಶೈಕ್ಷಣಿಕ, ಔದ್ಯೋಗಿಕ ಅಭಿವೃದ್ಧಿಗಾಗಿ ಮಹಿಳಾ ಘಟಕದ ಅಗತ್ಯ ಇದೆ. ಸಮಾಜದಲ್ಲಿ ಶೇ.50ರಷ್ಟು ಮಹಿಳೆಯರನ್ನು ಮುಖ್ಯವಾಹಿನಿಗೆ ತಂದಾಗ ಮಾತ್ರ ಅಭಿವೃದ್ಧಿ ಸಾಧ್ಯ ಆಗುತ್ತದೆ. ಇದರಿಂದ ಮಹಿಳಾ ಸಮಾಜದ ಬೆಳವಣಿಗೆ ಸಾಧ್ಯವಿದೆ.ನೂತನ ಬ್ಯಾರಿ ಮಹಿಳಾ ಘಟಕದ ಕಾರ್ಯಚಟುವಟಿಕೆಯು ಎಲ್ಲಾ ವರ್ಗದ ಜನರು ಗೌರವಿಸು ವಂತಹ ರೀತಿಯಲ್ಲಿ ಇರಬೇಕು. ಶಿಕ್ಷಣ ಕ್ಷೇತ್ರದಲ್ಲಿ ಜನಜಾಗೃತಿ ಮೂಡಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯು.ಟಿ.ಖಾದರ್ ಕರೆ ನೀಡಿದರು.

ಹೆಣ್ಣು ಮಕ್ಕಳಿಗೆ ಹುಟ್ಟಿನಿಂದಲೇ ನಾಯಕತ್ವ ಗುಣ ಬರುತ್ತದೆ. ಒಂದು ಹೆಣ್ಣು ಮನೆಯಲ್ಲಿದ್ದರೆ ಆಕೆ, ತಂದೆ ತಾಯಿಗೆ ನೆರವಾ ಗುತ್ತಾಳೆ. ಕುಟುಂಬದಲ್ಲಿ ತನಗಿಂತ ಕಿರಿಯರ ಹೊಣೆ ಹೊತ್ತುಕೊಳ್ಳುತ್ತಾರೆ. ಹೀಗೆ ನಾನಾ ಸವಾಲುಗಳ ಕೆಲಸಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲ ಸಾಮರ್ಥ್ಯ ಮಹಿಳೆಯರಿಗೆ ಇದೆ. ಅವರನ್ನು ಪ್ರೋತ್ಸಾಹಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕಾಗಿದೆ ಎಂದ ಖಾದರ್, ಮಹಿಳಾ ಘಟಕ ಸಮರ್ಪಕವಾಗಿ ಕೆಲಸ ಮಾಡಬೇಕು. ಕುಟುಂಬದ ನಿರ್ವಹಣೆಯ ಜೊತೆಗೆ ಸಮಾಜಮುಖಿ ಕೆಲಸ ಮಾಡಲು ಮಹಿಳೆಯರು ಮುಂದಾಗಬೇಕು. ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರ ಜೊತೆಗೆ ನಾಯಕತ್ವದ ಗುಣವನ್ನು ಸದುಪಯೋಗಿಸಿಕೊಂಡಾಗ ಮಹಿಳಾ ಘಟಕಗಳು ಕ್ರಿಯಾಶೀಲಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.

ಅಖಿಲ ಭಾರತ ಬ್ಯಾರಿ ಪರಿಷತ್ ಗೌರವಾಧ್ಯಕ್ಷ ಯೂಸುಫ್ ವಕ್ತಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಖಾಲೀದ್ ಉಜಿರೆ ಮಾತನಾಡಿ ಸ್ಥಳೀಯಾಡಳಿತ ಸಹಿತ ಸಾರ್ವಜನಿಕವಾಗಿ ನಡೆಯುವ ಜನಸಂಪರ್ಕ ಸಭೆಗಳು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಶಾಂತಿ ಸಭೆಯಲ್ಲಿ ಬ್ಯಾರಿ ಮುಸ್ಲಿಂ ಮಹಿಳೆಯರು ಸಕ್ರಿಯವಾಗಿ ಭಾಗವಹಿಸುವಂತಹ ವಾತಾವರಣ ರೂಪುಗೊಳ್ಳಬೇಕು ಎಂದರು.

ಪರಿಷತ್‌ನ ಪದಾಧಿಕಾರಿಗಳಾದ ಅಬ್ದುಲ್ ಮಜೀದ್ ಸೂರಲ್ಪಾಡಿ, ಟಿ.ಎಂ. ಶಹೀದ್ ಸುಳ್ಯ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಮಾತನಾಡಿದರು. ಅನುಪಮ ಮಾಸಿಕದ ಉಪಸಂಪಾದಕಿ ಸಬೀಹಾ ಫಾತಿಮಾ ಮುಖ್ಯ ಭಾಷಣ ಮಾಡಿದರು.

ಈ ಸಂದರ್ಭ ಬ್ಯಾರಿ ಮಹಿಳಾ ಕವಿಗೋಷ್ಠಿ, ಸಂವಾದ ಕಾರ್ಯಕ್ರಮ ನಡೆಯಿತು. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ರಮೀಝ ಎಂ.ಬಿ. ವರದಿ ವಾಚಿಸಿದರು.

ನೂತನ ಮಹಿಳಾ ಘಟಕದ ಗೌರವ ಅಧ್ಯಕ್ಷರಾಗಿ ಹಪ್ಸಾಬಾನು ಬೆಂಗಳೂರು, ಅಧ್ಯಕ್ಷರಾಗಿ ಶಮೀಮಾ ಕುತ್ತಾರ್, ಉಪಾಧ್ಯಕ್ಷರಾಗಿ ಆಯಿಶಾ ಕಲ್ಲಾಪು, ಅಸ್ಮತ್ ವಗ್ಗ, ಪ್ರಧಾನ ಕಾರ್ಯದರ್ಶಿಯಾಗಿ ರಮೀಝ ಎಂ.ಬಿ., ಕಾರ್ಯದರ್ಶಿ ಯಾಗಿ ಸಾರಾ ಮಸ್ಕುರಿನಿಸಾ, ಆಶಿಕಾ ಇಬ್ರಾಹಿಂ, ಕೋಶಾಧಿಕಾರಿಯಾಗಿ ಸೌಧಾ ಹಾಗೂ ಎಂಟು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪದಗ್ರಹಣ ಪಡೆದರು.

ಪದಗ್ರಹಣದ ಬಳಿಕ ಮಾತನಾಡಿದ ಅಧ್ಯಕ್ಷ ಶಮೀಮಾ ಕುತ್ತಾರ್ ಕೆಲವು ಮಹಿಳೆಯರು ನಾವು ಮನೆಯೊಳಗೆ ಇರುವ ವರು. ನಮಗೆ ಸಂಘಟನೆಗಳು ಯಾಕೆ ಎಂದು ಕೇಳುತ್ತಾರೆ. ಮಹಿಳೆಯರ ಸಬಲೀಕರಣಕ್ಕೆ ಸಂಘಟನೆಗಳ ಅಗತ್ಯವಿದೆ. ಹಾಗಾಗಿ ನೂತನ ಮಹಿಳಾ ಘಟಕದಲ್ಲಿ ಮಹಿಳೆಯರು ಕೈ ಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಮೀಯತುಲ್ ಫಲಾಹ್ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಪರಿಷತ್ ಸದಸ್ಯರಾದ ಅಬ್ದುಲ್ ಖಾದರ್ ಇಡ್ಮಾ, ಎಂ.ಎಚ್.ಮೊಯ್ದೀನ್, ಡಾ.ಸಿದ್ದೀಕ್ ಅಡ್ಡೂರು, ಆಲಿಯಬ್ಬ ಜೋಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

ರೈಹಾನ ವಿ.ಕೆ. ಸಚ್ಚರಿಪೇಟೆ ಕಿರಾಅತ್ ಪಠಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು ಸ್ವಾಗತಿಸಿದರು. ಅಸ್ಮತ್ ವಗ್ಗ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ನಿಸಾರ್ ಎಫ್. ಮುಹಮ್ಮದ್ ವಂದಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X