ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಸುಳ್ಯ: ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ 17 ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





