ಛಾಯಾಚಿತ್ರ ಸ್ಪರ್ಧೆ: ಅವಧಿ ವಿಸ್ತರಣೆ

ಮಂಗಳೂರು, ಫೆ.15: ಕರ್ನಾಟಕ ಮಾಧ್ಯಮ ಅಕಾಡಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ದಿನಾಂಕವನ್ನು ಫೆ.20ರವರೆಗೆ ವಿಸ್ತರಿಸಲಾಗಿದೆ.
ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ನಲ್ಲಿ ಅಕಾಡಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.
ಸ್ಪರ್ಧೆಗೆ ಪ್ರವೇಶ ಉಚಿತವಾಗಿದೆ. 2024ರ ಜನವರಿ 1ರಿಂದ 2025ರ ಜನವರಿ 31ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರ ಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ ಮಾನ್ಯತಾ ಕಾರ್ಡ್ ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು. ಹೆಚ್ಚಿನ ಮಾಹಿತಿಗೆ ಮೊ.ಸಂ: 9448227768/9449245980ನ್ನು ಸಂಪರ್ಕಿಸಬಹುದು ಎಂದು ಕಾರ್ಯದರ್ಶಿ ಸಹನಾ ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.





