ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಪೊಲೀಸ್ ಚೆಕ್‌ಪೋಸ್ಟ್

ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೊಸ ಪೊಲೀಸ್ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.
ಮಂಗಳೂರು ನಗರ ಪೊಲೀಸರ ಸಹಯೋಗದೊಂದಿಗೆ ಈ ಚೆಕ್‌ಪೋಸ್ಟ್ ಕಾರ್ಯರಂಭಿಸಿದ್ದು, ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಚೆಕ್‌ಪೋಸ್ಟ್‌ನ್ನು ಶನಿವಾರ ಉದ್ಘಾಟಿಸಿದರು.
ತರಬೇತಿ ಪಡೆದ ಸಿಬ್ಬಂದಿ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯೂ ಕಾರ್ಯನಿರತರಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.
Next Story







