ಗುರುವಾಯನಕೆರೆ: ಅಕ್ರಮ ಕಸಾಯಿಖಾನೆ ಅರೋಪದಲ್ಲಿ ಇಬ್ಬರ ಬಂಧನ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಅಕ್ರಮ ಕಸಾಯಿ ನಡೆಸುತ್ತಿರುವ ಆರೋಪದಲ್ಲಿ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.
ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ವೇಳೆ ಬೊಲೆರೋ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಪೊಲೋಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story