‘ಮಂಗಳೂರಿನಿಂದ ಹಜ್ ಯಾತ್ರೆಗೆ ನೇರ ವಿಮಾನಕ್ಕೆ ಕೇಂದ್ರಕ್ಕೆ ಮನವಿ’
ಮಂಗಳೂರು ಫೆ.18 : ಹಿಂದೆ ಮಂಗಳೂರಿನಿಂದಲೇ ಹಜ್ ಯಾತ್ರಿಕರಿಗೆ ನೇರ ವಿಮಾನ ಯಾನ ಸೌಲಭ್ಯ ಇತ್ತು. ಕೋವಿಡ್ ಬಳಿಕ ಇಂತಹ ವ್ಯವಸ್ಥೆ ಸ್ಥಗಿತಗೊಂಡಿದೆ. ಇದನ್ನು ಪುನರಾರಂಭಿಸಲು ಕೇಂದ್ರ ಸರಕಾರಕ್ಕೆ ನಿರಂತರ ಮನವಿ ಮಾಡಲಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡಿನ 5 ಜಿಲ್ಲೆಗಳ ಹಜ್ ಯಾತ್ರಿಗಳಿಗೆ ಇದರಿಂದ ಬಹಳಷ್ಟು ನೆರವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹೇಳಿದ್ದಾರೆ.
ಪವಿತ್ರ ಹಜ್ ಯಾತ್ರೆ ಕೈಗೊಳ್ಳುವವರಿಗೆ ಎಕ್ಕೂರಿನ ಇಂಡಿಯಾನ ಕನ್ವೆನ್ಶನ್ ಸೆಂಟರ್‌ನಲ್ಲಿ ಆಯೋಜಿಸಲಾದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಹಜ್ ಭವನ ನಿರ್ಮಿಸಲು ಈಗಾಗಲೇ ಜಮೀನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.
Next Story