Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರಿನಲ್ಲಿ ರಾಜ್ಯದ ಮೊದಲ...

ಪುತ್ತೂರಿನಲ್ಲಿ ರಾಜ್ಯದ ಮೊದಲ ಪಿಡಬ್ಲ್ಯೂಡಿ ಕಾಂಪ್ಲೆಕ್ಸ್: ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ18 Feb 2025 10:09 PM IST
share
ಪುತ್ತೂರಿನಲ್ಲಿ ರಾಜ್ಯದ ಮೊದಲ ಪಿಡಬ್ಲ್ಯೂಡಿ ಕಾಂಪ್ಲೆಕ್ಸ್: ಸಚಿವ ಸತೀಶ್ ಜಾರಕಿಹೊಳಿ

ಮಂಗಳೂರು: ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ರಾಜ್ಯದ ಮೊದಲ ಬೃಹತ್ ಪಿಡಬ್ಲ್ಯುಡಿ ವಾಣಿಜ್ಯ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಒಪ್ಪಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದ ನಡೆದ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮನವಿಗೆ ಸಚಿವರು ಸ್ಪಂದಿಸಿದರು.

ಪುತ್ತೂರಿನ ಬಸ್ ನಿಲ್ದಾಣದ ಬಳಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗವಿದ್ದು, ಅದು ಬಹಳ ವರ್ಷದಿಂದ ಹಾಗೇ ಉಳಿದುಕೊಂಡಿದೆ. ಇದರಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಿರ್ಮಾಣವಾದಲ್ಲಿ ಇಲಾಖೆಗೂ ಹಣಕಾಸಿನ ನೆರವು ಆಗಲಿದ್ದು, ಸರಕಾರಕ್ಕೂ ಪ್ರಯೋಜನವಾಗಲಿದೆ ಎಂದು ಶಾಸಕರು ಗಮನಕ್ಕೆ ತಂದರು. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಸಚಿವರು ಇಲಾಖೆ ಎಂಜಿನಿಯರ್‌ಗೆ ಸೂಚನೆ ನೀಡಿದರು.

ಆಯಾ ಜಿಲ್ಲೆಗಳಲ್ಲಿ ಸ್ಥಳ ಲಭ್ಯತೆಯ ಪ್ರದೇಶಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದಲೇ ವಾಣಿಜ್ಯ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಪಿಡಬ್ಲ್ಯೂಡಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಇದೇ ಪ್ರಥಮವಾಗಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಿದ್ದು, ಆರು ತಿಂಗಳಲ್ಲಿ ಕಾಮಗಾರಿಗೆ ಸಂಬಂಧಿಸಿ ಅನುಮತಿ ನೀಡಲಾಗುವುದು. ಬಳಿಕ ತ್ವರಿತವಾಗಿ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಮರಳುಗಾರಿಕೆ ಬಗ್ಗೆ ಸಮನ್ವತೆಯಿಂದ ಕ್ರಮಕ್ಕೆ ಸೂಚನೆ

ದ.ಕ. ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಸೇರಿದಂತೆ ಮರಳುಗಾರಿಕೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟರ ಮಟ್ಟಿಗೆ ಮರಳುಗಾರಿಕೆ ವಿಚಾರ ಜಟಿಲವಾಗಿದೆ. ಸೇತುವೆಗಳ ಕೆಳಗೂ ಮರಳುಗಾರಿಕೆ ನಡೆಸುವ ಮೂಲಕ ಅವ್ಯಾಹತ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ವ್ಯಕ್ತವಾಗಿವೆ. ಈ ಬಗ್ಗೆ ಕಂದಾಯ, ಲೋಕೋಪಯೋಗಿ ಇಲಾಖೆ, ಗಣಿ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಗುತ್ತಿಗೆದಾರ ಬದಲಾವಣೆಗೆ ಸೂಚನೆ

ಚಾರ್ಮಾಡಿ ಘಾಟ್ ಹೆದ್ದಾರಿ ಕಾಮಗಾರಿಗೆ ಟೆಂಡರ್ ಆಗಿದೆ. ಆದರೆ ಕಾಮಗಾರಿ ಬೇಗನೆ ಆರಂಭವಾಗಿ ಪೂರ್ಣಗೊಳ್ಳಲಿ ದ್ದರೆ ಮಳೆಗಾಲದಲ್ಲಿ ಸಂಚಾರಕ್ಕೆ ಸಮಸ್ಯೆಯಾಗಲಿದೆ. ಗುತ್ತಿಗೆದಾರರು ಈಗಾಗಲೇ ಹೊರನಾಡಿನಲ್ಲಿ 10 ವರ್ಷದಿಂದ ಕಾಮಗಾರಿ ನಡೆಸುತ್ತಿದ್ದರೂ ಇನ್ನೂ ಮುಕ್ತಾಯವಾಗಿಲ್ಲ. ಆದ್ದರಿಂದ ಅವರನ್ನು ಬದಲಾಯಿಸಿ ಬೇರೊಬ್ಬರಿಗೆ ಟೆಂಡರ್ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ಗುತ್ತಿಗೆದಾರರ ಬದಲಾಯಿಸಿ, ಪರ್ಯಾಯ ಟೆಂಡರ್ ಕಲ್ಪಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರಿಗೆ ಇನ್ನೊಂದು ಸರ್ಕ್ಯೂಟ್ ಹೌಸ್

ಮಂಗಳೂರಿನಲ್ಲಿ ಇನ್ನೊಂದು ಸರ್ಕ್ಯೂಟ್ ಹೌಸ್ ನಿರ್ಮಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ವಿನಂತಿಸಿದರು. ಕದ್ರಿಯಲ್ಲಿರುವ ಹೊಸ ಸರ್ಕ್ಯೂಟ್ ಹೌಸ್‌ನಲ್ಲಿ ವಿಐಪಿಗಳು ಯಾವಾಗಲೂ ಬರುತ್ತಿರುತ್ತಾರೆ. ಹಾಗಾಗಿ ಅಲ್ಲಿ ಹಳೆ ಬಂಗಲೆಯನ್ನು ದುರಸ್ತಿಪಡಿಸಬೇಕು. ಹೊಸ ಬಂಗಲೆಯನ್ನು ಪ್ರಧಾನಿ ಅಥವಾ ರಾಷ್ಟ್ರಪತಿ ಮೊದಲಾದ ಅತಿ ಗಣ್ಯರಿಗಾಗಿ ಮೀಸಲಿಡಬೇಕು ಎಂದು ಶಾಸಕರು ಆಗ್ರಹಿಸಿದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

ಕುಕ್ಕೆ ಸುಬ್ರಹ್ಮಣ್ಯ ಮೂಲಕ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಸಕಲೇಶಪುರ ಹಾಗೂ ಮಡಿಕೇರಿ ನಡುವೆ ೬೦ ಕಿ.ಮೀ. ದೂರದ ರಸ್ತೆಯನ್ನು ಅಗಲೀಕರಣಗೊಳಿಸುವ ಅಗತ್ಯತೆಯನ್ನು ಸಂಸದ ಬ್ರಿಜೇಶ್ ಚೌಟ ಪ್ರಸ್ತಾಪಿಸಿದರು. ಕೇಂದ್ರ ಮೀಸಲು ನಿಧಿಯಡಿ ಹೆಚ್ಚುವರಿಯಾಗಿ ರಾಜ್ಯದ ಪಾಲನ್ನು ನೀಡುವಂತೆ ಕೋರಿದ ಸಂಸದರು, ಮಾಣಿ-ಸಂಪಾಜೆ ಹೆದ್ದಾರಿ ಕಾಮಗಾರಿ ಬಗ್ಗೆ ಪ್ರಸ್ತಾಪಿಸಿದರು.

ಲೋಕೋಪಯೋಗಿ ಇಲಾಖೆಯ ಬೊಂದೇಲ್ ಆಟದ ಮೈದಾನಗಳಲ್ಲಿ ಕ್ರಿಕೆಟ್ ಆಟಗಳಿಗೆ ಶುಲ್ಕ ವಸೂಲಿ ಮಾಡದಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೇರಿಹಿಲ್ ಹೆಲಿಪ್ಯಾಡ್ ಅಭಿವೃದ್ಧಿಗೆ ಅನುದಾನ, ಮುಲ್ಕಿ, ಮೂಡುಬಿದಿರೆ, ಉಳ್ಳಾಲ ಹಾಗೂ ಸುಳ್ಯಕ್ಕೆ ಸುಬ್ರಹ್ಮಣ್ಯವನ್ನು ಸೇರಿಸಿ ಪ್ರತ್ಯೇಕ ಉಪವಿಭಾಗ ರಚಿಸುವ ಬೇಡಿಕೆ ವ್ಯಕ್ತಗೊಂಡಿತು.

ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತಿತರರಿದ್ದರು.

ಫೆ.21ರಂದು ಬೆಂಗಳೂರಲ್ಲಿ ಸಭೆ

ದ.ಕ. ಜಿಲ್ಲೆಯಲ್ಲಿ ಸೇತುವೆಗಳ ಪರಿಶೀಲನೆ ನಡೆಸಿದ್ದು, ಸೇತುವೆಗಳ ದುರಸ್ತಿ ಹಾಗೂ ಹೊಸ ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿ ಅನುದಾನ ಬಿಡುಗಡೆಗೊಳಿಸಲಾಗುವುದು. ಶಿರಾಡಿ ಘಾಟ್ ಹೆದ್ದಾರಿ ಕಾಮಗಾರಿ ಜೂನ್ ವೇಳೆಗೆ ಮುಕ್ತಾಯ ಗೊಳ್ಳಲಿದೆ. ಒಟ್ಟು ಹೆದ್ದಾರಿ ಯೋಜನೆಗೆ ಸಂಬಂಧಿಸಿ ಫೆ.21ರಂದು ಬೆಂಗಳೂರಿನಲ್ಲಿ ಅಧಿಕಾರಿ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ತುರ್ತು ಕಾಮಗಾರಿ ಹಾಗೂ ಅನುದಾನ ಬಿಡುಗಡೆಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X