Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿಗೆ ಹೊರ ವರ್ತುಲ ರಸ್ತೆ...

ಮಂಗಳೂರಿಗೆ ಹೊರ ವರ್ತುಲ ರಸ್ತೆ ನಿರ್ಮಿಸಲು ಪಿಡಬ್ಲ್ಯುಡಿ ಸಚಿವರಿಗೆ ಸಂಸದ ಚೌಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Feb 2025 10:18 PM IST
share
ಮಂಗಳೂರಿಗೆ ಹೊರ ವರ್ತುಲ ರಸ್ತೆ ನಿರ್ಮಿಸಲು ಪಿಡಬ್ಲ್ಯುಡಿ ಸಚಿವರಿಗೆ ಸಂಸದ ಚೌಟ ಆಗ್ರಹ

ಮಂಗಳೂರು: ಶಿರಾಡಿ ಘಾಟಿ ಹೆದ್ದಾರಿ ಅಭಿವೃದ್ಧಿ, ಮಂಗಳೂರು ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದಕ್ಕೆ ಬಾಕಿಯಿರುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಆದಷ್ಟು ಬೇಗ ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳು ವಂತೆ ಸಂಸದ ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಒತ್ತಾಯಿಸಿದ್ದಾರೆ.

ಜಿಲ್ಲೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಕ್ಯಾ. ಚೌಟ ಅವರು, ಹಲವು ಅಭಿವೃದ್ಧಿ ಯೋಜನೆಗಳ ಡಿಪಿಆರ್ ತಯಾರಿ ಬಾಕಿ ವಿಚಾರ ಹಾಗೂ ಹೊಸ ಪ್ರಸ್ತಾಪಿತ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದರು.

ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬರುವ ಶಿರಾಡಿ ಘಾಟಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನು ಕೂಡ ಡಿಪಿಆರ್ ಸಿದ್ಧಗೊಂಡಿಲ್ಲ. ಅಲ್ಲದೆ ಈ ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆಯ ಒಪ್ಪಿಗೆ ಪಡೆಯುವುದು ಕೂಡ ಬಾಕಿಯಿದೆ ಎಂದು ಹೇಳಿದ್ಧಾರೆ.

ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯಾ-ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು. ಈ ಪ್ರಸ್ತಾವಿತ ಯೋಜನೆ ಬಗ್ಗೆ ತಾನು ಹೆದ್ದಾರಿ ಇಲಾಖೆ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಯೋಜನಾ ವರದಿ ಸಿದ್ಧಪಡಿ ಸುವುದು ವಿಳಂಬವಾದಷ್ಟು ಈ ಹೆದ್ದಾರಿ ಅಭಿವೃದ್ಧಿ ಯೋಜನೆ ಜಾರಿಗೂ ಹಿನ್ನಡೆಯಾಗುತ್ತದೆ. ಅಲ್ಲದೆ, ಈ ಯೋಜನೆಗೆ ಅರಣ್ಯ ಇಲಾಖೆಯಿಂದ ಒಪ್ಪಿಗೆ ಪಡೆಯುವುದಕ್ಕೂ ತಮ್ಮ ಪೂರ್ಣ ಸಹಕಾರ ಹಾಗೂ ಮಧ್ಯಪ್ರವೇಶದ ಅಗತ್ಯವಿದೆ. ಆ ಮೂಲಕ ಈ ಹೆದ್ದಾರಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಕ್ಕೆ ಆದಷ್ಟು ಬೇಗ ಪೂರಕ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

* ಮಂಗಳೂರಿಗೆ ಹೊರ ವರ್ತುಲ ರಸ್ತೆ: ರಾಜ್ಯದಲ್ಲೇ 2ನೇ ಅತಿದೊಡ್ಡ ನಗರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸುಗಮ ಸಂಚಾರಕ್ಕೆ ಕೆಲವೆಡೆ ವಾಹನ ದಟ್ಟನೆ ಸಮಸ್ಯೆ ಎದುರಾಗುತ್ತಿದೆ. ಇನ್ನೊಂದೆಡೆ, ಕರಾವಳಿ ತೀರವನ್ನು ಹೊಂದಿರುವ ಕಾರಣ ನಗರೀಕರಣದ ವ್ಯಾಪ್ತಿ ವಿಸ್ತರಣೆಗೂ ನಾನಾ ರೀತಿಯ ಸವಾಲು ಎದುರಾಗುತ್ತಿವೆ. ರಸ್ತೆ, ರೈಲು, ಬಂದರು ಹಾಗೂ ವಿಮಾನ ಸಂಪರ್ಕ ವ್ಯವಸ್ಥೆಯಿಂದ ಈ ನಗರಕ್ಕೆ ಹೆಚ್ಚಿನ ಸಂಖ್ಯೆಯ ಜನರಿಗೂ ಭೇಟಿಗೂ ಅನುಕೂಲ ಕಲ್ಪಿಸಿದೆ. ಆದರೆ, ನಗರೀಕರಣದ ದೃಷ್ಟಿಯಿಂದ ಮಂಗಳೂರು ಹೃದಯಭಾಗದ ಜನದಟ್ಟನೆ ಹಾಗೂ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಹೊರ ವರ್ತುಲ ರಸ್ತೆ(ಔಟರ್ ರಿಂಗ್ ರೋಡ್) ನಿರ್ಮಿಸುವ ಅಗತ್ಯತೆಯಿದೆ. ಈ ಹಿನ್ನಲೆ ಭವಿಷ್ಯದ ಮಂಗಳೂರು ನಗರದ ಸಮಗ್ರ ಬೆಳವಣಿಗೆಗೆ ಪೂರಕವಾಗಿ ಸೂಕ್ತ ಹೊರ ವರ್ತುಲ ರಸ್ತೆ ನಿರ್ಮಿಸುವುದಕ್ಕೆ ವಿಸ್ತೃತ ಯೋಜನಾ ವರದಿಯನ್ನು ಶೀಘ್ರ ತಯಾರಿಸುವಂತೆ ಕ್ಯಾ. ಚೌಟ ಅವರು ಸಚಿವ ಜಾರಕಿಹೊಳಿಗೆ ಸಲಹೆ ನೀಡಿದ್ದಾರೆ.

ಮಾಣಿ-ಸಂಪಾಜೆ ಡಿಪಿಆರ್ ತಯಾರಿ ಚುರುಕುಗೊಳಿಸಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪ್ರಮುಖ ಯಾತ್ರಾ ಸ್ಥಳಗಳಾಗಿರುವ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್-275ನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ. ಸುಮಾರು 71.60 ಕಿಮೀ. ಉದ್ದದ ಈ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವುದಕ್ಕೆ ಡಿಪಿಆರ್ ಸಿದ್ಧಪಡಿಸುವ ಕಾರ್ಯಕ್ಕೆ ಚುರುಕು ನೀಡಬೇಕಾಗಿದೆ. ಹೀಗಾಗಿ, ಈ ಡಿಪಿಆರ್ ವರದಿಯನ್ನು ತಯಾರಿಸಲು ತಮ್ಮ ಇಲಾಖೆಯಿಂದ ಸೂಕ್ತ ನಿರ್ದೇಶನ ನೀಡಬೇಕೆಂದು ಕ್ಯಾ. ಚೌಟ ಅವರು ಸಚಿವರನ್ನು ವಿನಂತಿಸಿದ್ದಾರೆ.

ಇನ್ನೊಂದೆಡೆ, ಕೇರಳ ಹಾಗೂ ಬೆಂಗಳೂರು ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವುದಕ್ಕೆ ಪೆರಿಯಶಾಂತಿ-ಪೈಚಾರ್ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಆ ಮೂಲಕ ಎನ್.ಎಚ್ 75ನ್ನು ಎನ್.ಎಚ್ 275 ಹೆದ್ದಾರಿ ಜತೆ ಸಂಪರ್ಕಿಸಲು ಸ್ಪರ್ ರಸ್ತೆ ನಿರ್ಮಿಸಬೇಕೆಂದು ಕ್ಯಾ. ಚೌಟ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X