ಸಮಾಜಕ್ಕೆ ನೆರವಾಗುವ ಕಾರ್ಯಕ್ರಮಗಳಿಗೆ ಬೆಂಬಲ: ಡಾ.ಎಂ.ಎನ್.ರಾಜೇಂದ್ರ ಕುಮಾರ್
ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮದ ಲಾಂಛನ ಅನಾವರಣ

ಮಂಗಳೂರು; ಸಮಾಜಕ್ಕೆ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಪತ್ರಕರ್ತರಿಗೆ ನನ್ನ ನಿರಂತರ ಬೆಂಬಲವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವರು ಬುಧವಾರ ನಗರದ ಖಾಸಗಿ ಹೋಟೆಲ್ ಸಭಾಂಗ ಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ“ ಲೋಗೋ ಅನಾವರಣಗೊಳಿಸಿ ಮಾತನಾಡುತ್ತಿದ್ದರು.
ಸದಾ ಚಟುವಟಿಕೆಯಲ್ಲಿ ತೊಡಗಿ ಕೊಂಡಿರುವ ದ.ಕ ಜಿಲ್ಲೆಯ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರು ತ್ತೇನೆ“ ಎಂದು ರಾಜೇಂದ್ರ ಕುಮಾರ್ ಭರವಸೆ ನೀಡಿದರು.
ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಮಾತಾಡಿ, ”ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಸಮಾಜಕ್ಕೆ ನೆರವಾಗುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ವರ್ಷಪೂರ್ತಿ ಏನಾದರೊಂದು ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಜನಪರ ಕಾಳಜಿಯನ್ನು ಇಲ್ಲಿನ ಪತ್ರಕರ್ತರು ತೋರಿಸುತ್ತಿದ್ದಾರೆ. ಇಂದಿನ ಪತ್ರಕರ್ತ ವಿದ್ಯಾರ್ಥಿಗಳು ಹಿರಿಯ ಪತ್ರಕರ್ತರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಇತರರಿಗೆ ಮಾದರಿಯಾ ಗಬೇಕು. ಸುವರ್ಣ ಸಂಭ್ರಮದಲ್ಲಿರುವ ಜಿಲ್ಲೆಯ ಪತ್ರಕರ್ತರ ಸಂಘಕ್ಕೆ ಒಳ್ಳೇದಾಗಲಿ“ ಎಂದರು.
ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಸಿ.ಎ.ಶಾಂತಾರಾಮ್ ಶೆಟ್ಟಿ ಮಾತನಾಡುತ್ತಾ, ”ಪತ್ರಿಕೆಗಳು ಸಮಾಜದ ಮೇಲೆ ಬೀರುವ ಪರಿಣಾಮ ಮಹತ್ವ ದ್ದಾಗಿದೆ.ಈ ಬಗ್ಗೆ ನನಗೆ ಅರಿವಿದೆ.ಜಿಲ್ಲೆಯ ಪತ್ರಕರ್ತರ ಬಗ್ಗೆ ಕಾಳಜಿ ಮತ್ತು ಹೆಮ್ಮೆ ಯಿದೆ. ಪತ್ರಕರ್ತರ ಸಮಾಜಮುಖಿ ಕೆಲಸ, ಪತ್ರಕರ್ತರು ಪ್ರೀತಿ ಮತ್ತು ವಿಶ್ವಾಸದಿಂದ ನಮಗೆ ಆಪ್ತರಾಗುತ್ತಾರೆ“ ಎಂದರು.
ವೇದಿಕೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷರಾದ ರಘುರಾಮ್, ಆನಂದ ಶೆಟ್ಟಿ, ರವೀಂದ್ರ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ,ಹರ್ಷ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಧನ್ಯವಾದ ಸಮರ್ಪಿಸಿದರು. ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಾಮಾಗ್ರಿ ಹಾಗೂ ವೆನ್ಲಾಕ್ ಸಮುದಾಯ ವಾಚನಾಲಯಕ್ಕೆ ಪುಸ್ತಕ ಗಳನ್ನು ಅತಿಥಿಗಳು ವಿತರಿಸುವ ಮೂಲಕ ಸುವರ್ಣ ಸಂಭ್ರಮ ಚಟು ವಟಿಕೆ ಗಳಿಗೆ ಸಾಂಕೇತಿಕ ವಾಗಿ ಚಾಲನೆ ನೀಡಲಾಯಿತು ಲೋಗೊ ರಚಿಸಿದ ಕಲಾವಿದ ಜಾನ್ ಚಂದ್ರ ಅವರನ್ನು ಗೌರವಿಸಲಾಯಿತು.