Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಮಕ್ಕಳ ರಕ್ಷಣಾ ನೀತಿ...

ರಾಜ್ಯ ಮಕ್ಕಳ ರಕ್ಷಣಾ ನೀತಿ ಅನುಷ್ಠಾನಗೊಳಿಸಲು ತಿಪ್ಪೇಸ್ವಾಮಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Feb 2025 10:21 PM IST
share
ರಾಜ್ಯ ಮಕ್ಕಳ ರಕ್ಷಣಾ ನೀತಿ ಅನುಷ್ಠಾನಗೊಳಿಸಲು ತಿಪ್ಪೇಸ್ವಾಮಿ ಸೂಚನೆ

ಮಂಗಳೂರು, ಫೆ.19: ಮಕ್ಕಳ ರಕ್ಷಣಾ ನೀತಿ-2016ರ ಪ್ರಕಾರ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ಗುಣಮಟ್ಟದ ಕಲಿಕೆಯ ಜೊತೆ ಮಕ್ಕಳ ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ನೀತಿ-2016ನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸಬೇಕು. ಸರಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ. ಕೆ.ಟಿ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ದ.ಕ.ಜಿಲ್ಲಾಡಳಿತ, ಜಿಪಂ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ನಡೆದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ -2009 ರ ಕುರಿತು ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಉಸ್ತುವಾರಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ವರ್ಗಾವಣೆ ಪತ್ರ ನೀಡದೆ ಸತ್ತಾಯಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಆಯೋಗಕ್ಕೆ ಬರುತ್ತಿದೆ. ಈ ಬಗ್ಗೆ ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಖಾಸಗಿ ಶಾಲೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರ ಕೊಠಡಿಯಲ್ಲಿ ಆರ್‌ಟಿಇ ಸೆಲ್‌ನ ಸಂಪೂರ್ಣ ಮಾಹಿತಿಯುಳ್ಳ ಫಲಕವನ್ನು ಕಡ್ದಾಯವಾಗಿ ಅಳವಡಿಸಬೇಕು. ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಪಿಟಿಎ ರಚನೆ ಮಾಡಿ, ಪೋಷಕರು ಮತ್ತು ಆಡಳಿತ ಮಂಡಳಿ ಚರ್ಚಿಸಿ ಶುಲ್ಕ ನಿಗದಿಪಡಿಸಬೇಕು ಎಂದರು.

ಶಾಲೆ ಬಿಟ್ಟ ಮಕ್ಕಳಿಗೆ ಕೇವಲ ಮನವೊಲಿಕೆ ಅಥವಾ ನೋಟಿಸ್ ನೀಡಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಸಾಧ್ಯವಿಲ್ಲ. ಮಕ್ಕಳು ಯಾವ ಕಾರಣಕ್ಕೆ ಶಾಲೆ ಬಿಟ್ಟಿದ್ದಾರೆ ಎಂಬುದರ ಕುರಿತು ನಿರ್ದಿಷ್ಟ ಕಾರಣ ಗುರುತಿಸಿ ರಚನಾತ್ಮಕ ಪರಿಹಾರ ನೀಡಬೇಕು. ಶಾಲೆ ಬಿಟ್ಟ ಮಕ್ಕಳ ತಾಲೂಕುವಾರು ಪಟ್ಟಿ ತಯಾರಿಸಿ ಪ್ರತಿ 3 ತಿಂಗಳಿಗೊಮ್ಮೆ ಸಿಡಬ್ಲ್ಯುಸಿ ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಇಲಾಖೆಯಿಂದ ಸಮಸ್ಯೆ ಮತ್ತು ಸೂಕ್ತ ಪರಿಹಾರ ಒದಗಿಸಲು ಪ್ರಯತ್ನಿಸಿದಾಗ ಶಾಲೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗೋವಿಂದ ಮಡಿವಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ರಾಜಲಕ್ಷ್ಮಿ ಮತ್ತು ಎಲ್ಲಾ ತಾಲೂಕು ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಉಸ್ತುವಾರಿ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X