ಡಿಸಿ ಮನ್ನಾ ಜಮೀನು ಹಂಚಲು ದಸಂಸ ಮನವಿ

ಮಂಗಳೂರು : ದ.ಕ. ಹಾಗೂ ಉಡುಪಿ ಜಿಲ್ಲೆಯ ದಲಿತ ಸಮುದಾಯಗಳಿಗೆ ಮೀಸಲಿಟ್ಟ ಡಿ.ಸಿ.ಮನ್ನಾ ಭೂಮಿಯನ್ನು ಸಮುದಾಯದ ಭೂರಹಿತ ಫಲಾನುಭವಿಗಳಿಗೆ ಹಂಚುವಲ್ಲಿರುವ ಕಾನೂನು ತೊಡಕನ್ನು ನಿವಾರಿಸಲು ಸರಕಾರದ ಮೇಲೆ ಒತ್ತಡ ಹೇರುವಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ನರೇಂದ್ರಸ್ವಾಮಿ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪಬಣದ ದ.ಕ. ಜಿಲ್ಲಾ ಸಮಿತಿಯ ನಿಯೋಗವು ಶನಿವಾರ ನಗರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ, ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಸಂಘಟನಾ ಸಂಚಾಲಕ ರಾದ ರಘು. ಕೆ. ಎಕ್ಕಾರು, ಕೃಷ್ಣಾನಂದ. ಡಿ. ರಾಜಯ್ಯ ಮಂಗಳೂರು, ತಾಲೂಕು ಸಂಘಟನಾ ಸಂಚಾಲಕ ರುಕ್ಕಯ್ಯ ಕರಂಬಾರು, ಉಡುಪಿ ಜಿಲ್ಲಾ ಸಂಚಾಲಕ ರಮೇಶ್ ಕೋಟ್ಯಾನ್ ನಿಯೋಗದಲ್ಲಿದ್ದರು.
Next Story





