Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ;...

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ22 Feb 2025 11:43 PM IST
share
ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ

ಸುರತ್ಕಲ್ : ಪಿಕ್ ಅಪ್ ವಾಹನ‌ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾ.ಹೆದ್ದಾರಿ 66ರ ಕುಳಾಯಿಯಲ್ಲಿ ಶನಿವಾರ ವರದಿಯಾಗಿದೆ.

ಮೃತರನ್ನು ರಾಯಚೂರು ಜಿಲ್ಲೆಯ ಸಿಂದನೂರು ನಿವಾಸಿ ದೀಪು ಗೌಡ ಯಾನೆ ಪೊಂಪನ ಗೌಡ (50) ಎಂದು ತಿಳಿದು ಬಂದಿದೆ. ಇವರ ಸ್ನೇಹಿತರಾದ ಕೊಪ್ಪಳ ಜಿಲ್ಲೆಯ ಕಾರಟಗಿ ನಿವಾಸಿ ಪ್ರದೀಪ್ ಕೊಲ್ಕರ್ (35), ಸುರತ್ಕಲ್ ಕೋಡಿಕೆರೆ ನಿವಾಸಿ ನಾಗರಾಜ ಉಮೇಶ್ ಅಮೀನ್ ( 42) ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗೆಳೆಯರಾದ ದೀಪು ಗೌಡ ಯಾನೆ ಪೊಂಪನ ಗೌಡ, ಪ್ರದೀಪ್ ಮತ್ತು ನಾಗರಾಜ್ ಅವರು ಕುಳಾಯಿಯ ಹೋಟೆಲ್ ನಲ್ಲಿ ಊಟ ಮುಗಿಸಿಕೊಂಡು ರಾ.ಹೆ. 66 ರಸ್ತೆಯನ್ನು ದಾಟಿ ಉಡುಪಿಯಿಂದ ಮಂಗಳೂರಿಗೆ ಹೋಗುವ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಆರೋಪಿ ಸುಕುಮಾರ ಎಂಬಾತ ಅತಿಯಾದ ವೇಗ ಮತ್ತು ಅಜಾಗರೂಕತೆ ನಿರ್ಲಕ್ಷ್ಯದಿಂದ ತನ್ನ ಪಿಕ್ ಅಪ್ ವಾಹನ ಚಲಾಯಿಸಿಕೊಂಡು ಎದುರಿನಲ್ಲಿದ್ದ ಕಾರೊಂದಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಅಪಘಾತದ ಪರಿಣಾಮ ಕಾರು ಮುಂದಕ್ಕೆ ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ ಯಾನೆ ಪೊಂಪನ ಗೌಡ, ಪ್ರದೀಪ್ ಮತ್ತು ನಾಗರಾಜ್ ಅವರಿಗೆ ಢಿಕ್ಕಿ ಹೊಡೆದಿದೆ. ಪ್ರದೀಪ್ ಮತ್ತು ನಾಗರಾಜ್ ಅವರು ರಸ್ತೆಗೆ ಎಸೆಯಲ್ಪಟ್ಟು ದೀಪು ಗೌಡ ಯಾನೆ ಪೊಂಪನ ಗೌಡ ಅವರ ಸಮೇತ ರಸ್ತೆಯ ಎಡಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ದೀಪು ಗೌಡ ಅವರ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದು, ಪ್ರದೀಪ್ ರಿಗೆ ಮುಖಕ್ಕೆ ಮತ್ತು ಹಣೆಗೆ ರಕ್ತಗಾಯವಾಗಿದೆ. ಅಲ್ಲದೆ ನಾಗರಾಜ್ ಅವರ ಸೊಂಟಕ್ಕೆ ಗುದ್ದಿದ ರೀತಿಯ ಗಾಯವಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X