ನೀರುಮಾರ್ಗ ಗ್ರಾಮ ಪಂಚಾಯತ್‌ಗೆ ತಾಲೂಕು ಮಟ್ಟದ ನರೇಗಾ ಪ್ರಶಸ್ತಿ

ಮಂಗಳೂರು: ನಗರ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರುಗಿದ ಸ್ಥಳೀಯಾ ಡಳಿತ ಸಂಭ್ರಮ ‘ಹೊಂಬೆಳಕು-2025’ರಲ್ಲಿ ನೀರುಮಾರ್ಗ ಗ್ರಾಪಂ 2024-25ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅತಿ ಹೆಚ್ಚು ಮಾನವ ದಿನ ಸೃಜನೆಗಾಗಿ ತಾಲೂಕು ಮಟ್ಟದ ಅತ್ಯುತ್ತಮ ಪ್ರಶಸ್ತಿ ಪಡೆಯಿತು.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ, ಪೌರಾಡಳಿತ ಸಚಿವ ರಹೀಂ ಖಾನ್, ವಿಧಾನ ಪರಿಷತ್ತು ಸದಸ್ಯ ಮಂಜುನಾಥ ಭಂಡಾರಿ, ಜಿಪಂ ಸಿಇಒ ಡಾ. ಆನಂದ್, ತಾಪಂ ಇಒ ಮಹೇಶ್ ಹೊಳ್ಳ ಸಮ್ಮುಖ ದಲ್ಲಿ ನೀರುಮಾರ್ಗ ಗ್ರಾಪಂ ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷೆ ಮೋಲಿ ಶಾಂತಿ ಸಲ್ಡಾನ, ಪಿಡಿಒ ಅಬೂಬಕ್ಕರ್ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಗ್ರಾಪಂ ಸಿಬ್ಬಂದಿಗಳಾದ ಉಮಾನಾಥ, ಸುರೇಖಾ, ಪ್ರಶಾಂತಿ, ಸವಿತಾ, ಯಶೋಧಾ, ಸಂದೇಶ್, ಯಮುನಾ ಉಪಸ್ಥಿತರಿದ್ದರು.
Next Story