Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾಣಿ-ಸಂಪಾಜೆ ಚತುಷ್ಪಥ ರಸ್ತೆಗೆ ಡಿಪಿಆರ್...

ಮಾಣಿ-ಸಂಪಾಜೆ ಚತುಷ್ಪಥ ರಸ್ತೆಗೆ ಡಿಪಿಆರ್ ತಯಾರಿಸಲು ಸರಕಾರದ ಅನುಮೋದನೆ : ಸಂಸದ ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ24 Feb 2025 9:43 PM IST
share
ಮಾಣಿ-ಸಂಪಾಜೆ ಚತುಷ್ಪಥ ರಸ್ತೆಗೆ ಡಿಪಿಆರ್ ತಯಾರಿಸಲು ಸರಕಾರದ ಅನುಮೋದನೆ : ಸಂಸದ ಬ್ರಿಜೇಶ್ ಚೌಟ

ಮಂಗಳೂರು, ಫೆ.24: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತ್ರತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ರಾಜ್ಯ ಸರಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಇದೀಗ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್ ಸಿದ್ಧಪಡಿ ಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ. ಜತೆಗೆ ಇದಕ್ಕೆ ತಗಲುವ ವೆಚ್ಚವಾದ 3.19 ಕೋಟಿ ರೂ.ವನ್ನು ಏಜೆನ್ಸಿ ವೆಚ್ಚದಡಿ ಭರಿಸುವುದಕ್ಕೆ ಅನುಮೋದನೆಯನ್ನು ಕೂಡ ನೀಡಿ ಆದೇಶ ಹೊರಡಿಸಿದೆ. ಹೀಗಿರುವಾಗ, ಶೀಘ್ರದಲ್ಲೇ ಮಾಣಿ-ಸಂಪಾಜೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸುವುದಕ್ಕೆ ಏಜೆನ್ಸಿ ಆಯ್ಕೆ ಮಾಡಲು ಟೆಂಡರ್ ಪ್ರಕ್ರಿಯೆ ನಡೆಯಲಿದೆ.

ಲೋಕೋಪಯೋಗಿ ಇಲಾಖೆಯ ತುರ್ತು ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಚೌಟ ಅವರು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬಿ.ಸಿ. ರೋಡ್-ಅಡ್ಡಹೊಳೆ, ಪುಂಜಾಲಕಟ್ಟೆ-ಚಾರ್ಮಾಡಿ ಸೇರಿ ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಇದೀಗ ಜಿಲ್ಲೆಯ ಮತ್ತೊಂದು ಹೆದ್ದಾರಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಖ್ಯ ಎಂಜಿನಿಯರ್‌ಗೆ ಅನುಮತಿಯನ್ನು ನೀಡಿ ಆದೇಶ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡವನ್ನು ಮಡಿಕೇರಿ-ಮೈಸೂರು ಕಡೆಯಿಂದ ಸಂಪರ್ಕಿಸುವಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿದೆ. ಈ ಹೆದ್ದಾರಿ ಅಭಿವೃದ್ಧಿಯಾದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರು ಬಂದರು ಅಥವಾ ಮಂಗಳೂರು ಏರ್‌ಪೋರ್ಟ್‌ನ್ನು ಸಂಪರ್ಕಿಸುವುದಕ್ಕೆ ಮತ್ತಷ್ಟು ಸುಲಭವಾಗಲಿದ್ದು, ಜಿಲ್ಲೆಯ ವಾಣಿಜ್ಯೋದ್ಯಮ ಚಟುವಟಿಕೆಗಳ ಅಭಿವೃದ್ಧಿಗೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿನ್ನಲೆ ಲೋಕೋಪಯೋಗಿ ಇಲಾಖೆಯಿಂದ ಡಿಪಿಆರ್ ತಯಾರಿಕೆಗೆ ಅನುಮತಿ ಲಭಿಸಿರುವುದು ಈ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸುವುದಕ್ಕೆ ಎದುರಾಗಿದ್ದ ಅಡ್ಡಿ ದೂರವಾಗಿದ್ದು, ಆದಷ್ಟು ಬೇಗ ಹೆದ್ದಾರಿ ಇಲಾಖೆಗಳಿಂದ ಮುಂದಿನ ಪ್ರಕ್ರಿಯೆ ಪೂರ್ಣಗೊಂಡು ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಾಣಿ-ಸಂಪಾಜೆ ಹೆದ್ದಾರಿ ಅಭಿವೃದ್ಧಿ ಯೋಜನೆಯನ್ನು ಇದಕ್ಕೆ ಸಂಬಂಧಪಟ್ಟ ಸ್ಥಳೀಯ ಶಾಸಕರು ಗಳ ಸಹಕಾರದೊಂದಿಗೆ ಆದಷ್ಟು ಬೇಗ ಕಾರ್ಯರೂಪಕ್ಕೆ ತರುವ ವಿಶ್ವಾಸವಿದೆ ಎಂದು ಚೌಟ ಹೇಳಿದ್ದಾರೆ.

ನೆನೆಗುದಿಗೆ ಬಿದ್ದಿದ್ದ ಪ್ರಸ್ತಾವನೆಗೆ ಮರುಜೀವ

ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗದ ವ್ಯಾಪ್ತಿಯ ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ಹೆದ್ದಾರಿ ಯನ್ನು ಕೂಡ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಡಿಪಿಆರ್‌ಗೆ ಸಂಬಂಧಿಸಿದಂತೆ 2022 ರಲ್ಲಿ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯು ನಾನಾ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಅಲ್ಲದೇ ಹಿಂದಿನ ಪ್ರಸ್ತಾವನೆಯಲ್ಲಿ ಯಾವುದೇ ಪ್ರಗತಿಯನ್ನು ಕಾಣದ ಕಾರಣ ಹಿಂದಿನದನ್ನು ಹೊರತುಪಡಿಸಿ ಸಂಸದ ಕ್ಯಾ. ಚೌಟ ಹೆಚ್ಚಿನ ಮುತುವರ್ಜಿ ವಹಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಇದೇ ವರುಷದ ಜನವರಿ ತಿಂಗಳಿನಲ್ಲಿ ಹೊಸದಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಅಲ್ಲದೆ, ಇತ್ತೀಚೆಗೆ ಲೋಕೋಪಯೋಗಿ ಸಚಿವರು ಜಿಲ್ಲೆಗೆ ಬಂದ ವೇಳೆ ಆದಷ್ಟು ಬೇಗ ಡಿಪಿಆರ್‌ಗೆ ಅನುಮತಿಸಲು ಕ್ರಮ ಜರುಗಿಸುವಂತೆ ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X