ಉಳ್ಳಾಲ: ಉದ್ಯಮಿ ಹಾಜಿ ಯು.ಕೆ. ಖಾದರ್ ನಿಧನ

ಉಳ್ಳಾಲ: ಉದ್ಯಮಿ ಹಾಜಿ ಯು.ಕೆ.ಖಾದರ್ (65) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು.
ಎವರ್ಗ್ರೀನ್ ಸಂಸ್ಥೆಯ ನಿರ್ದೇಶಕರಾಗಿ ಕೆಲವು ಕಾಲ ಕಾರ್ಯ ನಿರ್ವಹಿಸಿದ್ದ ಅವರು ಉಳ್ಳಾಲ ದರ್ಗಾ ಸಮಿತಿ ಸದಸ್ಯರಾಗಿ ಒಂದು ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು.
ಕಾಂಗ್ರೆಸ್ ನ ಹಿರಿಯ ಮುಖಂಡರಾಗಿದ್ದ ಅವರು ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Next Story