ಗ್ಯಾರಂಟಿ ಯೋಜನೆಗಳ ಅರ್ಜಿ ವಿಲೇವಾರಿ ಶಿಬಿರ
ಮಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಯೋಜನೆಯ ಸಮರ್ಪಕ ಅನುಷ್ಠಾನ ಹಾಗೂ ಸೌಲಭ್ಯಗಳನ್ನು ಪಡೆಯುವಲ್ಲಿ ಫಲಾನುಭವಿಗಳಿಗೆ ಸಮಸ್ಯೆಗಳು ಉಂಟಾಗಿ ದ್ದಲ್ಲಿ ಅವುಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲು ಶಿಬಿರವನ್ನು ಆಯೋಜಿಸಲಾಗಿದೆ.
ಫೆಬ್ರವರಿ 27 ರಂದು ಬೆಳಿಗ್ಗೆ 10:30 ಗಂಟೆಗೆ ಬೋಳಾರ್ ವಾರ್ಡ್‌ನ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬೋಳಾರ್, ಮಾರ್ಚ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗ್ರೆ ವಾರ್ಡ್ನ ಸರಕಾರಿ ಪ್ರೌಢಶಾಲೆ ಬೆಂಗ್ರೆ ಕಸಬಾದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story