ಫರಂಗಿಪೇಟೆ| ಬಾಲಕ ನಾಪತ್ತೆ ಪ್ರಕರಣ: ಪತ್ತೆಗಾಗಿ ಗ್ರಾಮಸ್ಥರಿಂದ ಪ್ರತಿಭಟನೆ

ಫರಂಗಿಪೇಟೆ: ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಗ್ರಾಮಸ್ಥರು ಫರಂಗಿಪೇಟೆ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನಾಕಾರರು ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಸಭೆ ನಡೆಸಿ ಬಾಲಕ ಪತ್ತೆಯಾಗದೆ ಇದ್ದಲ್ಲಿ ಮಾ.1 ರಂದು ಫರಂಗಿಪೇಟೆ ಬಂದ್ ಗೆ ಕರೆ ನೀಡಲಾಯಿತು.
ಈ ಸಂದರ್ಭ ಭರತ್ ಕುಮ್ಡೇಲು, ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಮತ್ತಿತರರು ಉಪಸ್ಥಿತರಿದ್ದರು.
Next Story