Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ| ಶಿವರಾತ್ರಿ ಹೆಸರಲ್ಲಿ...

ಉಪ್ಪಿನಂಗಡಿ| ಶಿವರಾತ್ರಿ ಹೆಸರಲ್ಲಿ ಕಿಡಿಗೇಡಿಗಳಿಂದ ವಿಕೃತಿ: ರಸ್ತೆಗೆ ಅಡ್ಡವಾಗಿಟ್ಟ ಮೋರಿ ಢಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ27 Feb 2025 10:05 PM IST
share
ಉಪ್ಪಿನಂಗಡಿ| ಶಿವರಾತ್ರಿ ಹೆಸರಲ್ಲಿ ಕಿಡಿಗೇಡಿಗಳಿಂದ ವಿಕೃತಿ: ರಸ್ತೆಗೆ ಅಡ್ಡವಾಗಿಟ್ಟ ಮೋರಿ ಢಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ

ಉಪ್ಪಿನಂಗಡಿ: ಶಿವರಾತ್ರಿ ದಿನವಾದ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ಇದ್ದ ಬೃಹತ್ ಗಾತ್ರದ ಸಿಮೆಂಟ್ ಮೋರಿಯೊಂದನ್ನು ಕಿಡಿಗೇಡಿಗಳು ರಸ್ತೆಗೆ ಅಡ್ಡವಾಗಿ ಇರಿಸಿದ್ದು, ಮುಂಜಾನೆ ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಇದರ ಅರಿವಾಗದೆ ಬೈಕ್ ನೇರವಾಗಿ ಮೋರಿಗೆ ಢಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹಿರೇಬಂಡಾಡಿಯಲ್ಲಿ ನಡೆದಿದೆ.

ರಸ್ತೆಯಲ್ಲಿ ಅಡ್ಡವಾಗಿ ಇರಿಸಿದ್ದ ಮೋರಿಗೆ ಢಿಕ್ಕಿಯಾಗಿ ಗಾಯಗೊಂಡಿರುವ ವ್ಯಕ್ತಿ ಹಿರೇಬಂಡಾಡಿ ಗ್ರಾಮದ ಸರೋಳಿ ನಿವಾಸಿ, ಪತ್ರಿಕಾ ವಿತರಕ ರೋಹಿತಾಕ್ಷ ಎಂದು ಗುರುತಿಸಲಾಗಿದೆ.

ಮೋರಿಗೆ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ರೋಹಿತಾಕ್ಷ ಅವರ ಕೈ, ಕಾಲು, ಬುಜಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ರಿಕೆ ವಿತರಕರಾಗಿರುವ ರೋಹಿತಾಕ್ಷ ಎಂದಿನಂತೆ ಬೆಳಗ್ಗೆ 5 ಗಂಟೆಯ ಹೊತ್ತಿಗೆ ತನ್ನ ಮನೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದಾಗ ಹಿರೇಬಂಡಾಡಿ ಗ್ರಾಮದ ಪಟಾರ್ತಿ ಎಂಬಲ್ಲಿ ಕಿಡಿಗೇಡಿಗಳು ರಸ್ತೆ ಬದಿ ಇದ್ದ ಬೃಹತ್ ಸಿಮೆಂಟ್ ಮೋರಿಯನ್ನು ರಸ್ತೆಗೆ ಅಡ್ಡವಾಗಿ ಇರಿಸಿದ್ದು, ಇದು ಅವರ ಅರಿವಿಗೆ ಬಾರದೆ ಬೈಕ್ ನೇರವಾಗಿ ಮೋರಿಗೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ-ಹಿರೇಬಂಡಾಡಿ-ಕೊಯಿಲ ಸಂಪರ್ಕ ರಸ್ತೆಯಲ್ಲಿ ಹಿರೇಬಂಡಾಡಿ ಗ್ರಾಮದ ದಾಸರಮೂಲೆ ಬಳಿಯಿಂದ ಶಾಖೆಪುರದ ತನಕ ಅಲ್ಲಲ್ಲಿ ರಸ್ತೆಯಲ್ಲಿ ಬೃಹತ್ ಕಲ್ಲು, ಸೀಯಾಳದ ತೊಪ್ಪೆ, ಮರದ ಗೆಲ್ಲುಗಳನ್ನು ಇರಿಸಿ ಕುಕೃತ್ಯ ಎಸೆದಿದ್ದು, ಬೆಳಗ್ಗೆ ಬೇಗನೇ ರಸ್ತೆಯಲ್ಲಿ ಓಡಾಟ ನಡೆಸಿದ ಬಹಳಷ್ಟು ವಾಹನ ಚಾಲಕರು ತೊಂದರೆ ಅನುಭವಿಸುವಂತಾಗಿದೆ ಎಂಬ ದೂರು ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X