Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ವಲಯ ವ್ಯಾಪ್ತಿಯಲ್ಲಿ ಕುಡಿಯುವ...

ಸುರತ್ಕಲ್ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ: ಸಿಪಿಐಎಂ ನಿಂದ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 March 2025 7:35 PM IST
share
ಸುರತ್ಕಲ್ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ: ಸಿಪಿಐಎಂ ನಿಂದ ಪ್ರತಿಭಟನೆಯ ಎಚ್ಚರಿಕೆ

ಸುರತ್ಕಲ್‌: ಮಂಗಳೂರು ನಗರ ಪಾಲಿಕೆಯ ಸುರತ್ಕಲ್‌ ವಲಯ ಇರ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಗಂಭೀರ ವಾಗಿ ಉಲ್ಭಣಗೊಂಡಿದ್ದು, ನಗರ ಪಾಲಿಕೆಯ ಆಡಳಿತ ಬೇಜವಾಬ್ದಾರಿತನ ತೊರೆದು ತಕ್ಷಣವೆ ಸಮಸ್ಯೆ ಪರಿಹರಿಸಬೇಕು ಇಲ್ಲವಾದಲ್ಲಿ ಸಂತ್ರಸ್ತ ನಾಗರಿಕರನ್ನು ಸೇರಿಸಿ ನಗರ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಿಪಿಐಎಂ ಸುರತ್ಕಲ್ ವಿಭಾಗ ಸಮಿತಿ ಎಚ್ಚರಿಸಿದೆ.

ಮಹಾನಗರ ಪಾಲಿಕೆಯ ಕಾಟಿಪಳ್ಳ, ಕೃಷ್ಣಾಪುರ, ಕಾನ, ಕುಳಾಯಿ ಸೇರಿದಂತೆ ಸುರತ್ಕಲ್ ವಲಯ ವ್ಯಾಪ್ತಿಯ ಪ್ರದೇಶ ಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಗಂಭೀರ ಸಮಸ್ಯೆ ಉದ್ಭವವಾಗಿದೆ. ಕೆಲವು ವಾರ್ಡ್ ಗಳಲ್ಲಿ ವಾರಗಳ ಕಾಲ ನೀರು ಪೂರೈಕೆಯಾಗದಿರುವ, ಮೂರು ದಿನಗಳಿಗೊಮ್ಮೆ ಕೆಲವು ಗಂಟೆಗಳ ಕಾಲ ಮಾತ್ರ ನೀರು ಪೂರೈಕೆಯಾಗುವ ಸ್ಥಿತಿ ಇದೆ. ಇದರಿಂದ ಜನ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಈ ಕುರಿತು ಹಲವು ದೂರುಗಳು ಮನಪಾಕ್ಕೆ ಸಲ್ಲಿಸಿದ್ದರೂ ನಗರ ಪಾಲಿಕೆ ಅಧಿಕಾರಿಗಳು ಸಮಸ್ಯೆ ಬಗೆಹರಿಸುತ್ತಿಲ್ಲ.

ಸುರತ್ಕಲ್ ವಲಯದ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಅನಧಿಕೃತ ರೇಷನಿಂಗ್ ಪದ್ಧತಿ ಜಾರಿಯಲ್ಲಿದೆ. ಕಳೆದ ಮಳೆಗಾಲದಲ್ಲಿ ಡ್ಯಾಂಗಳಲ್ಲಿ ನೀರು ಶೇಖರಣೆಗೊಂಡ ತರುವಾಯ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮೂರು ದಿನಕ್ಕೊಮ್ಮೆ ನೀರು ಪೂರೈಸುವ ರೇಷನಿಂಗ್ ಪದ್ಧತಿ ಕೈ ಬಿಡಲಾಗಿತ್ತು‌. ಪ್ರತಿದಿನ ನೀರು ಪೂರೈಕೆಯ ನೀತಿ ಜಾರಿಗೆ ಬಂದಿತ್ತು. ಆದರೆ, ಸುರತ್ಕಲ್ ವಲಯದಲ್ಲಿ ಮಾತ್ರ ಮೂರು ದಿನಕ್ಕೊಮ್ಮೆ ನೀರು ಪೂರೈಸುವ ರೇಷನಿಂಗ್ ಪದ್ಧತಿ ಅನಧಿಕೃತವಾಗಿ ಈವರೆಗೂ ಮುಂದುವರಿದಿದೆ.

ಜೊತೆಗೆ ಕೆಲವು ವಾರ್ಡ್ ಗಳಲ್ಲಿ ನಾಲ್ಕೈದು ದಿನಗಳಿಗೊಮ್ಮೆ ನೀರು ಪೂರೈಸುವ, ಹಲವು ಪ್ರದೇಶಗಳಲ್ಲಿ ವಾರಗಳ ಕಾಲ ನೀರು ಪೂರೈಕೆ ಆಗದಿರುವುದೂ ನಡೆಯುತ್ತಿದೆ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದರೆ ಪ್ರತಿಕ್ರಿಯಿಸದಿರುವುದು, ಹಾರಿಕೆಯ ಉತ್ತರ ನೀಡುವುದು, ಜಲಸಿರಿ ಕಾಮಗಾರಿಯ ನೆಪ ಹೇಳಿ ಜಾರಿಕೊಳ್ಳುವುದೂ ನಡೆಯುತ್ತಿದೆ‌. ನೀರು ಸರಬರಾಜಿನ ಪೈಪ್‌ ಗಳು ಒಡೆದಲ್ಲಿ ಗಂಟೆಗಳಲ್ಲಿ ಮಾಡಬೇಕಾದ ರಿಪೇರಿಗಳಿಗೆ ಮೂರ್ನಾಲ್ಕು ದಿನಗಳ ದೀರ್ಘ ಅವಧಿ ಪಡೆದು ಸತಾಯಿಸಲಾಗುತ್ತಿದೆ. ಕುಡಿಯುವ ನೀರು ಪೂರೈಸುವ ಡ್ಯಾಂಗಳು ಭರ್ತಿ ಆಗಿರುವ ಈ ಅವಧಿಯಲ್ಲಿ ಈ ರೀತಿ ನೀರಿಗೆ ಕೃತಕ ಅಭಾವ ಉಂಟಾಗಿರುವುದು ಜನ ಬೇಸತ್ತು ಹೋಗಿದ್ದಾರೆ‌. ಜನಪ್ರತಿನಿಧಿಗಳೂ ಈ ಕುರಿತು ತಮ್ಮ ಜವಾಬ್ದಾರಿ ಮರೆತಿರುವುದು ಕುಡಿಯುವ ನೀರಿನ ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ. ಅದರಲ್ಲೂ ಕಾಟಿಪಳ್ಳ, ಕೃಷ್ಣಾಪುರ, ಕುಳಾಯಿ, ಕಾನ ಮುಂತಾದ ವಾರ್ಡ್ ಗಳಲ್ಲಿ ಸಮಸ್ಯೆ ಅತೀ ಹೆಚ್ಚಾಗಿದೆ.

ನಗರ ಪಾಲಿಕೆಯ ಆಡಳಿತ ಬೇಜವಾಬ್ದಾರಿತನ ತೊರೆದು ತಕ್ಷಣವೇ ಈ ಭಾಗದ ಕುಡಿಯುವ ನೀರು ಸರಬರಾಜಿನ ಸಮಸ್ಯೆಗಳನ್ನು ಬಗೆಹರಿಸಬೇಕು. ಮೂರು ದಿನಗಳಿಗೊಮ್ಮೆ ನೀರು ಪೂರೈಸುವ ಅನಧಿಕೃತ, ಅನ್ಯಾಯದ ರೇಷನಿಂಗ್ ಪದ್ಧತಿಯನ್ನು ಕೈ ಬಿಟ್ಟು ನಿಯಮದಂತೆ ಪ್ರತಿ ದಿನ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದದಲ್ಲಿ ಇಲ್ಲದಿದ್ದಲ್ಲಿ ಸಂತ್ರಸ್ತ ನಾಗರಿಕರನ್ನು ಸೇರಿಸಿ ನಗರ ಪಾಲಿಕೆಗೆ ಮುತ್ತಿಗೆ ಹಾಕು ಪ್ರತಿಭಟನೆ ನಡೆಸಲಾಗುವುದು ಎಂದು ಸಿಪಿಐಎಂ ಸುರತ್ಕಲ್ ವಿಭಾಗ ಸಮಿತಿಯ ಕಾರ್ಯದರ್ಶಿ ಶ್ರೀನಾಥ್ ಕುಲಾಲ್ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X