Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ| ಮಾಡತ್ತಡ್ಕದಲ್ಲಿ ಸ್ಫೋಟ ಪ್ರಕರಣ:...

ವಿಟ್ಲ| ಮಾಡತ್ತಡ್ಕದಲ್ಲಿ ಸ್ಫೋಟ ಪ್ರಕರಣ: ಬಾಂಬ್ ನಿಷ್ಕ್ರಿಯದಳ ತಂಡದಿಂದ ತನಿಖೆ

ವಾರ್ತಾಭಾರತಿವಾರ್ತಾಭಾರತಿ5 March 2025 10:40 PM IST
share
ವಿಟ್ಲ| ಮಾಡತ್ತಡ್ಕದಲ್ಲಿ ಸ್ಫೋಟ ಪ್ರಕರಣ: ಬಾಂಬ್ ನಿಷ್ಕ್ರಿಯದಳ ತಂಡದಿಂದ ತನಿಖೆ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮನೆಗಳು ಹಾನಿಗೊಂಡ ಘಟನೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬುಧವಾರ ಬಾಂಬ್ ನಿಷ್ಕ್ರಿಯ ದಳ ಮತ್ತು ಅಪರಾಧ ಸ್ಥಳ ಪರಿಶೀಲನೆ ತಂಡ ಆಗಮಿಸಿ ತನಿಖೆ ನಡೆಸಿದೆ.

ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿರುವ ಕೋರೆ ಸಮೀಪದ ಕಲ್ಲಿನ ರಾಶಿಯ ನಡುವಿನಲ್ಲಿ ಒಂದು ಬಾಕ್ಸ್ ಡೆಟೋನೇಟರ್ಸ್ ಹಾಗೂ 200 ಜೆಲಿಟಿನ್ ಕಡ್ಡಿಗಳನ್ನು ಒಟ್ಟಿಗೇ ಇಡಲಾಗಿತ್ತೆನ್ನಲಾಗಿದೆ. ಸುಮಾರ್ 1.30ರ ಸುಮಾರಿಗೆ ಏಕಾಏಕಿ ಸ್ಪೋಟಗೊಂಡಿದೆ. ಸ್ಪೋಟ ನಡೆದ ಸ್ಥಳದಿಂದ ಸುಮಾರು ನೂರು ಮೀಟರ್ ದೂರದಲ್ಲಿದ್ದ ಈಶ್ವರ ನಾಯ್ಕ ಹಾಗೂ ಅವರ ಪುತ್ರ ವಸಂತ ಮೋಹನ್ ಅವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. 1ಕಿ. ಮೀ. ಆಸುಪಾಸಿನ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿತ್ತು.

ಘಟನೆ ಸಂಬಂಧಿಸಿ ಬಂಟ್ವಾಳ ಕಾವಳಪಡೂರು ಶ್ರೀರಾಮ ಕನ್ಸ್ಟಕ್ಷನ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಅಪರಾಧ ಸ್ಥಳ ಪರಿಶೀಲನೆ ತಂಡ ಆಗಮಿಸಿ ತನಿಖೆಗೆ ಸಹಕಾರ ನೀಡಿದೆ. ವಿಟ್ಲ ಎಸೈ ವಿದ್ಯಾ ಮತ್ತು ಸಿಬ್ಬಂದಿಗಳು ಕೂಡಾ ತನಿಖೆ ಚುರುಕುಗೊಳಿಸಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿರುವ ಎನ್‌.ಎಸ್‌ ಕೋರೆಯ ಗಣಿಗಾರಿಕೆಗಾಗಿ ಬೇಕಾಗಿರುವ ಅಪಾಯಕಾರಿಯಾದ ಸ್ಪೋಟಕಗಳನ್ನು ಬಂಟ್ವಾಳದ ಶ್ರೀ ರಾಮ್‌ ಕನ್‌ಸ್ಟ್ಟ್ರಕ್ಷನ್‌ ನ ಅಶೋಕ ಮತ್ತು ಅದರ ಬ್ಲಾಸ್ಟರ್‌ ಕೆಲಸ ಮಾಡುತ್ತಿದ್ದಾತ, ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿರುವ ಎನ್‌ ಎಸ್‌ ಕೋರೆಯ ಬಳಿಯಿರುವ ಮೋನಪ್ಪ ಪೂಜಾರಿರವರ ಜಾಗದಲ್ಲಿರುವ ಕಲ್ಲು ಬಂಡೆಗಳ ಮೇಲೆ ಯಾವುದೇ ಮುಂಜಾಗ್ರತಾ ಕ್ರಮ ಹಾಗೂ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಮತ್ತು ಬೇಜವಾಬ್ದಾರಿಯಿಂದ ಇಟ್ಟಿದ್ದು, ಸ್ಪೋಟಕಗಳು ಬಿಸಿಲಿನ ತಾಪದಿಂದ ಸ್ಪೋಟಗೊಂಡು ಸುತ್ತಮುತ್ತಲಿನ ಮರಗಿಡಗಳು ಛಿದ್ರಗೊಂಡಿದ್ದು, ಹಾಗೂ ಪರಿಸರದ ಈಶ್ವರ ನಾಯ್ಕ ಮತ್ತು ವಸಂತ ಮೋಹನ ಎಂಬವರುಗಳ ಮನೆಗಳಿಗೆ ಹಾನಿಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X