ತುಳು ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ ಪ್ರಕಟ

ಮಂಗಳೂರು,ಮಾ.7:ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ 2022, 2023, 2024ನೆ ಸಾಲಿನ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
2022ನೇ ಸಾಲಿನ ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಶಸ್ತಿಗೆ ಡಾ. ರಘಪತಿ ಕೆಮ್ತೂರು, ತುಳು ನಾಟಕ ಸಿನಿಮಾ ಕ್ಷೇತ್ರದ ಪ್ರಶಸ್ತಿಗೆ ರತ್ನಮಾಲ ಪುರಂದರ ಬೆಂಗಳೂರು, ಜಾನಪದ ಕ್ಷೇತ್ರದ ಪ್ರಶಸ್ತಿಗೆ ಪ್ರಭಾಕರ ಶೇರಿಗಾರ ಉಡುಪಿ ಆಯ್ಕೆಯಾಗಿದ್ದಾರೆ.
2023ನೇ ಸಾಲಿನ ತುಳು ಸಾಹಿತ್ಯ ಕ್ಷೇತ್ರದ ಪ್ರಶಸ್ತಿಗೆ ಸಿಮಂತೂರು ಚಂದ್ರಹಾಸ ಸುವರ್ಣ ಮುಂಬೈ, ನಾಟಕ ಕ್ಷೇತ್ರದ ಪ್ರಶಸ್ತಿಗೆ ನೆಕ್ಕಿದ ಪುಣಿ ಗೋಪಾಲಕೃಷ್ಣ ಬೆಂಗಳೂರು, ಜಾನಪದ ಕ್ಷೇತ್ರದ ಪ್ರಶಸ್ತಿಗೆ ಲಕ್ಷ್ಮಣ ಕಾಂತ ಕಣಂತೂರು ಆಯ್ಕೆಯಾಗಿದ್ದಾರೆ.
2024ನೇ ಸಾಲಿನ ಸಾಹಿತ್ಯ ಕ್ಷೇತ್ರದ ಪ್ರಶಸ್ತಿಗೆ ಯಶವಂತ ಬೋಳೂರು, ನಾಟಕ, ಸಿನಿಮಾ ಕ್ಷೇತ್ರದ ಪ್ರಶಸ್ತಿಗೆ ಸರೋಜಿನಿ ಎಸ್. ಶೆಟ್ಟಿ, ಕೃಷಿ ಜನಪದ ಕ್ಷೇತ್ರದ ಪ್ರಶಸ್ತಿಗೆ ಬೆಳ್ತಂಗಡಿಯ ಬಿ.ಕೆ. ದೇವರಾವ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿ ರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ.15ರಂದು ನಗರದ ಉರ್ವಾಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







