ದೆಮ್ಮೆಲೆ ಬಳಿ ರಸ್ತೆ ಅಪಘಾತ: ಗಾಯಾಳು ಮೃತ್ಯು

ಮಂಗಳೂರು: ಬಿ.ಸಿ.ರೋಡ್-ಮಲ್ಲೂರು ರಸ್ತೆಯ ದೆಮ್ಮಲೆ ತಾಲೊಂಟು ಬಳಿ ಗುರುವಾರ ಸಂಜೆ ಟಿಪ್ಪರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ೮೪ರ ಹರೆಯದ ಎಂ.ಪಿ.ಮುಹಮ್ಮದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಿಪ್ಪರನ್ನು ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು ದೆಮ್ಮಲೆ ತಾಲೊಂಟು ಕಡೆಗೆ ಸಾಗುವ ಇಳಿಜಾರು ರಸ್ತೆಯ ಒಳರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮುಹಮ್ಮದ್‌ರಿಗೆ ಢಿಕ್ಕಿ ಹೊಡೆ ದಿದ್ದ. ಬಳಿಕ ಪರಾರಿಯಾಗಿದ್ದ. ಈ ಅಪಘಾತದಿಂದ ಮುಹಮ್ಮದ್‌ರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ತಕ್ಷಣ ಅವರನ್ನು ನೀರುಮಾರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story





