Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ...

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಠಾಣೆಗಳಿಗೆ ಮೂಲಸೌಕರ್ಯ ಒದಗಿಸಿ: ಪರಿಶಿಷ್ಟರ ಸಂಘ- ಸಂಸ್ಥೆಗಳ ಮಹಾ ಒಕ್ಕೂಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 March 2025 2:41 PM IST
share

ಮಂಗಳೂರು, ಮಾ.8: ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರಕಾರಕ್ಕೆ ನೆರವಾಗಲು, ರಾಜ್ಯದಲ್ಲಿ 1974 ರಲ್ಲಿ ಸ್ಥಾಪಿಸಲಾಗಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿ ಸಿ ಆರ್ ಇ) ವನ್ನು 33 ವಿಶೇಷ ಪೊಲೀಸ್ ಠಾಣೆಗಳನ್ನಾಗಿ ಪರಿವರ್ತಿಸಲು ಸರಕಾರ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಾರ್ಹ. ಈ ಯೋಜನೆ ಕಾನೂನುಗಳ ಆಶಯದಂತೆ ಅನುಷ್ಠಾನಗೊಳ್ಳಲು ಈ ಎಲ್ಲ ವಿಶೇಷ ಪೊಲೀಸ್ ಠಾಣೆಗಳಿಗೆ ಅಗತ್ಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ - ಸಂಸ್ಥೆಗಳ ಮಹಾಒಕ್ಕೂಟವು ಆಗ್ರಹಿಸಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ, ಬಜೆಟ್ ಮಂಡನೆ ವೇಳೆ ಈ ವಿಷಯವನ್ನು ಪ್ರಕಟಿಸಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಇದಕ್ಕೆ ಕಾರಣ ಕರ್ತರಾದ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಡಿಸಿಆರ್‌ಇಯ ಹೆಚ್ಚುವರಿ ಮಹಾನಿರ್ದೇಶಕರನ್ನು ಅಭನಂದಿಸಿದರು.

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ವಿರುದ್ಧ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ದೂರು ದಾಖಲಿಸಿ, ನಿಗದಿತ ಅವಧಿಯಲ್ಲಿ ಸೂಕ್ತ ತನಿಖೆ ನಡೆಸಿ, ನ್ಯಾಯಾಲಯಗಳಿಗೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲು ಪ್ರತಿ ಜಿಲ್ಲೆಗೆ ಒಂದರಂತೆ ಹಾಗೂ ಬೆಂಗಳೂರು ನಗರಕ್ಕೆ 02 ರಂತೆ ರಾಜ್ಯದಲ್ಲಿ ಒಟ್ಟು 33 ಡಿ ಸಿ ಆರ್‌ಇ ವಿಶೇಷ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಮತ್ತು ಸದರಿ ಠಾಣೆಗಳ ನಿರ್ವಹಣೆಗಾಗಿ ರಾಜ್ಯದ ಡಿಸಿಆರ್ ಇ ಘಟಕದಲ್ಲಿ ಹಾಲಿ ಇರುವ 340 ಹುದ್ದೆಗಳ ಜೊತೆಗೆ ಹೆಚ್ಚುವರಿಯಾಗಿ 450 ವಿವಿಧ ವೃಂದದ ಹುದ್ದೆಗಳನ್ನು ಮಂಜೂರು ಮಾಡುವಂತೆ ಡಿಸಿಆರ್‌ಇಯ ಎಡಿಜಿಪಿ 2023ರ ಆಗಸ್ಟ್‌ನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯ ಬಗ್ಗೆ ರಾಜ್ಯ ಸಚಿವ ಸಂಪುಟ ಚರ್ಚೆ ನಡೆಸಿ ಅನುಮೋದನೆ ನೀಡಿದೆ.

ರಾಜ್ಯದ ಈ 33 ವಿಶೇಷ ಪೊಲೀಸ್ ಠಾಣೆಗಳಲ್ಲಿ ಡಿವೈಎಸ್‌ಪಿಗಳು ಠಾಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಲಿದ್ದು, ಗೃಹ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮೇಲ್ಪಟ್ಟ ಅಧಿಕಾರಿಗಳನ್ನು ಈ ಠಾಣೆಗಳಿಗೆ ನಿಯುಕ್ತಿಗೊಳಿಸುವ ಮುನ್ನ ಸಮಾಜ ಕಲ್ಯಾಣ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿದೆ.

ದೌರ್ಜನ್ಯಕ್ಕೊಳಗಾದ ಸಂತ್ರಸ್ತರು ತಮ್ಮ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬಹುದು, ಅಥವಾ ಜಿಲ್ಲಾ ಕೇಂದ್ರ ದಲ್ಲಿರುವ ಈ ವಿಶೇಷ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸ ಬಹುದು. ಸ್ಥಳೀಯ ಠಾಣೆಯಲ್ಲಿ ಎಫ್‌ಐಆರ್ ದಾಖಲು ಆಗಿದ್ದಲ್ಲಿ, ಅಲ್ಲಿನ ಪೊಲೀಸರು ಅದನ್ನು ತಕ್ಷಣವೇ ಈ ವಿಶೇಷ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಬೇಕು.

ಡಿಸಿಆರ್‌ಇ ಘಟಕಗಳನ್ನು ಪೊಲೀಸ್ ಠಾಣೆಗಳನ್ನಾಗಿ ಪರಿವರ್ತನೆ ಮಾಡುವ ಆಶಯ ಉತ್ತಮವಾದರೂ, ಅನುಷ್ಠಾನದಲ್ಲಿ ಯಾವುದೇ ಲೋಪವಾದರೆ, ಅದು ಪರಿಶಿಷ್ಟ ಜನ ಸಮುದಾಯಗಳ ಬದುಕಿನ ಮೇಲೆ ಅತ್ಯಂತ ಅಪಾಯಕಾರಿ ಪ್ರತಿಕೂಲ ಪರಿಣಾಮಗಳಿಗೆ ಕಾರಣವಾದೀತು. ಮಂಗಳೂರು ಕಮಿಷನರೇಟ್ ಠಾಣೆಯಲ್ಲಿ 2020ರಿಂದ 2025ರ ಅವಧಿಗೆ 127 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 91 ಚಾರ್ಜ್‌ಶೀಟ್‌ಗೊಳಪಟ್ಟಿವೆ. 24 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಆಗಿದ್ದು, ಒಂದು ಪ್ರಕರಣದಲ್ಲಿ ಮಾತ್ರವೇ ಶಿಕ್ಷೆಯಾಗಿದೆ. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯ ಬಂಟ್ವಾಳ ಮತ್ತು ಪುತ್ತೂರು ಉಪ ವಿಭಾಗಗಳಲ್ಲಿ ಒಟ್ಟು 213 ದೌರ್ಜನ್ಯ ಪ್ರಕರಣಗಳಲ್ಲಿ 141 ಚಾರ್ಚ್‌ಶೀಟ್‌ಗೊಳಪಟ್ಟಿವೆ. 55 ಬಿ ರಿಪೋರ್ಟ್‌ಗೊಂಡಿವೆ ಎಂದು ಅವರು ವಿವರಿಸಿದರು.

ಈ ದೌರ್ಜನ್ಯ ಪ್ರಕರಣಗಳು ಅಲ್ಲದೆ, ಸುಳ್ಳು ಜಾತಿ ಸರ್ಟಿಫಿಕೇಟ್ ಪಡೆದ ಪ್ರಕರಣಗಳು, ಸರಕಾರಿ ಸೇವೆಗಳ ನೇಮಕಾತಿ ಮತ್ತು ಭಡ್ತಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳ ಸೇರ್ಪಡೆಯಲ್ಲಿ ಮೀಸಲಾತಿ ನೀತಿ ಉಲ್ಲಂಘನೆಯ ಪ್ರಕರಣಗಳು, ಪರಿಶಿಷ್ಟರಿಗೆ ಮೀಸಲಾದ ಅನುದಾನಗಳ ದುರ್ಬಳಕೆ ಪ್ರಕರಣಗಳು, ಪರಿಶಿಷ್ಟರ ಜಮೀನುಗಳ ಅಕ್ರಮ ಮಾರಾಟ, ಅತಿಕ್ರಮಣ ಪ್ರಕರಣಗಳು ಹೀಗೆ ಹಲವು ಗಂಭೀರ ಸ್ವರೂಪದ ಅಪರಾಧಗಳ ಬಗ್ಗೆ ದೂರು ದಾಖಲಿಸಿ, ತನಿಖೆ ನಡೆಸಿ, ಸಕಾಲದಲ್ಲಿ, ಎರಡು ತಿಂಗಳ ಒಳಗೆ, ನ್ಯಾಯಾಲಯಗಳಿಗೆ ಆರೋಪ ಪಟ್ಟಿಗಳನ್ನು ಸಲ್ಲಿಸಿ, ಅಪರಾಧಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸುವಂತೆ ಕಾರ್ಯ ನಿರ್ವಹಿಸುವುದು ಈ ವಿಶೇಷ ಪೊಲೀಸ್ ಠಾಣೆಗಳ ಹೊಣೆಗಾರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ 26 ಪೊಲೀಸ್ ಠಾಣಾವ್ಯಾಪ್ತಿಯ ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ಸ್ವರೂಪದ ಪ್ರಕರಣಗಳನ್ನು ನಿರ್ವಹಿಸಬೇಕಾದ ಡಿಸಿಆರ್‌ಇ ವಿಶೇಷ ಪೊಲೀಸ್ ಠಾಣೆಗೆ ತಲಾ ಒಬ್ಬರಂತೆ ಡಿವೈ ಎಸ್ ಪಿ, ಇನ್ಸ್‌ಪೆಕ್ಟರ್, ಸಬ್ ಇನ್ಸ್ ಪೆಕ್ಟರ್‌ಗಳು, ಮೂವರು ಹೆಡ್ ಕಾನ್‌ಸ್ಟೇಬಲ್, ಏಳು ಮಂದಿ ಕಾನ್ ಸ್ಟೇಬಲ್‌ಗಳ ನಿಯೋಜನೆಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಪ್ರಸ್ತಾಪಿಸಿದ್ದಾರೆ. ಆದರೆ ಇಷ್ಟು ಮಂದಿ ಅಧಿಕಾರಿಗಳಿಂದ ಪರಿಣಾಮಕಾರಿ ಕಾರ್ಯ ನಿರ್ವಹಣೆ ಸಾಧ್ಯವಿಲ್ಲ. ಓರ್ವ ಡಿವೈಎಸ್‌ಪಿ ಜೊತೆಗೆ, ಕನಿಷ್ಟ ಇಬ್ಬರು ಇನ್ಸ್‌ಪೆಕ್ಟರ್‌ಗಳು, ನಾಲ್ವರು ಎಸ್‌ಐಗಳು, ಇಬ್ಬರು ಮಹಿಳಾ ಹೆಚ್‌ಸಿ ಸಹಿತ ಆರು ಹೆಚ್ ಸಿ ಗಳು, ಐವರು ಮಹಿಳಾ ಪಿ ಸಿ ಸಹಿತ ಕನಿಷ್ಟ 20 ಪಿಸಿಗಳು, ಅಗತ್ಯ ಕಂಪ್ಯೂಟರ್‌ಗಳು ಮತ್ತು ಕನಿಷ್ಟ ಇಬ್ಬರು ಕಂಪ್ಯೂಟರ್ ಆಪರೇಟರ್ ಗಳು, ಕನಿಷ್ಟ ನಾಲ್ಕು ಜೀಪುಗಳು, ಹಾಗೂ ಪೊಲೀಸ್ ಠಾಣೆಯಾಗಿ ಕರ್ತವ್ಯ ನಿರ್ವಹಿಸಲು ಸಾಕಷ್ಟು ಸ್ಥಳಾವಕಾಶ ಇರುವ ಕಟ್ಟಡ ಅತ್ಯಗತ್ಯ ಎಂದವರು ಆಗ್ರಹಿಸಿದರು.

ಗೋಷ್ಟಿಯಲ್ಲಿ ದಲಿತ ಮುಖಂಡರಾದ ಕಾಂತಪ್ಪ ಅಲಂಗಾರು, ಜನಾರ್ದನ ಬೋಳಂತೂರು, ದಯಾನಂದ್, ರಾಜ ಚೆಂಡ್ತಿಮಾರ್, ಲಕ್ಷ್ಮಣ್ ಕಾಂಚನ್ ಉಪಸ್ಥಿತರಿದ್ದರು.

ದೌರ್ಜನ್ಯ ಜಾಗೃತಿ ಸಮಿತಿ ಬದಲಿಸಿ

ಪರಿಶಿಷ್ಟ ಸಮುದಾಯಗಳ ಮೇಲಿನ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷ ತೆಯಲ್ಲಿ ಕಾರ್ಯ ನಿರ್ವಹಿಸಬೇಕಾದ ಜಿಲ್ಲಾ ದೌರ್ಜನ್ಯ ತಡೆ ಜಾಗೃತೆ ಮತ್ತು ಉಸ್ತುವಾರಿ ಸಮಿತಿಯು, ಕಾನೂನು ನಿಯಮಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸುವ, ಸಾಮಾಜಿಕ ಬದ್ಧತೆ ಮತ್ತು ಕಾಳಜಿ ಇರುವ ವ್ಯಕ್ತಿಗಳನ್ನು ಒಳಗೊಂಡಿರ ಬೇಕು. ಆದರೆ ನಮ್ಮ ಜಿಲ್ಲೆಯಲ್ಲಿ ಪರಿಸ್ಥಿತಿ ಭಿನ್ನ ಇರುವುದರಿಂದ, ಅದನ್ನು ಬದಲಿಸಲು ಜಿಲ್ಲಾಧಿಕಾರಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಲಾಕ್ಷ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X