Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡೂರು-ಪಡೂರು “ಬಂಟ್ವಾಳ ಕಂಬಳೋತ್ಸವ”...

ಮೂಡೂರು-ಪಡೂರು “ಬಂಟ್ವಾಳ ಕಂಬಳೋತ್ಸವ” ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ8 March 2025 9:50 PM IST
share
ಮೂಡೂರು-ಪಡೂರು “ಬಂಟ್ವಾಳ ಕಂಬಳೋತ್ಸವ” ಉದ್ಘಾಟನೆ

ಬಂಟ್ವಾಳ : ನಾವೂರು ಗ್ರಾಮದ ಕೂಡಿಬೈಲಿನಲ್ಲಿ 14ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳೋತ್ಸವ” ಶನಿವಾರ ಉದ್ಘಾಟನೆಗೊಂಡಿತು.

ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ನ ಧರ್ಮಗುರು ರೆ.ಫಾ. ರಾಬರ್ಟ್ ಡಿಸೋಜ ಹಾಗೂ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅವರುಗಳು ಜಂಟಿಯಾಗಿ ಕಂಬಳೋತ್ಸವ ಉದ್ಘಾಟಿಸಿದರು.

ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಚಾಲನೆ ನೀಡಿದರು. ಪುರೋಹಿತ ಹರಿಪ್ರಸಾದ್ ಬೊಳ್ಳುಲಾಯ ಅವರು ಪೂಜಾ ಕಾರ್ಯ ನೆರವೇರಿಸಿದರು.

ಕಂಬಳೋತ್ಸವದಲ್ಲಿ ಘನ ಉಪಸ್ಥಿತರಿದ್ದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿ, ಕಂಬಳ ಎಂಬುದು ತುಳುನಾಡಿನ ಮಣ್ಣಿನ ಕ್ರೀಡೆ. ಇದರಲ್ಲಿ ದೊಡ್ಡ ಮಟ್ಟದ ಸೌಹಾರ್ದತೆ ಇದೆ. ಇದನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಸುಪ್ರೀಂ ಕೋರ್ಟ್ ಕಂಬಳ ಕ್ರೀಡೆಯನ್ನು ನಿಷೇಧಿಸಿದ ಸಂದರ್ಭ ಅದನ್ನು ಪುನರಾರಂಭಿಸಲು ಅಂದಿನ ಉಸ್ತುವಾರಿ ಮಂತ್ರಿ, ಕಂಬಳ ಪ್ರೇಮಿಯಾದ ರಮಾನಾಥ ರೈ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ಪ್ರಮುಖ ಕಾರಣರಾಗಿದ್ದಾರೆ ಎಂದ ಖಾದರ್ ಸಮಾಜವನ್ನು ವಿಭಜಿಸಲು ಬಹಳ ಸುಲಭ ಇದೆ. ಆದರೆ ಸೌಹಾರ್ದಯುತವಾಗಿ ಪೋಣಿಸಲು ಕಷ್ಟ ಇದೆ. ಈ ಸೌಹಾರ್ದ ಪರಂಪರೆ ಕಂಬಳ ಕ್ರೀಡೋತ್ಸವದಲ್ಲಿ ಕಂಡು ಬರುತ್ತಿದೆ ಎಂದರು.

ಈ ಸಂದರ್ಭ ಮಾತನಾಡಿದ ರಮಾನಾಥ ರೈ ಅವರು, ಎಲ್ಲ ಕಂಬಳಕೂಟಗಳಿಗಿಂತ ಬಂಟ್ವಾಳ ಕಂಬ ಳೋತ್ಸವ ಹಲವು ವೈಶಿಷ್ಟ್ಯಗಳಿಂದ ನಡೆದುಕೊಂಡು ಬಂದಿದೆ. ವರ್ಷದಿಂದ ವರ್ಷಕ್ಕೆ ಕೆಲವು ಪ್ರಥಮ ಪ್ರಯೋಗಗಳನ್ನು ಬಂಟ್ವಾಳ ಕಂಬಳದಲ್ಲಿ ಮಾಡಲಾಗಿದೆ. ಈ ಬಾರಿ ಕಂಬಳ ಮೈದಾನಕ್ಕೆ ಶಾಶ್ವತ ಹೈಮಾಸ್ಟ್ ದೀಪದ ಕಂಬಗಳನ್ನು ಅಳವಡಿಸಲಾಗಿದೆ. ಪ್ರತೀ ಬಾರಿಯೂ ಸಿನಿಮಾ ನಟರನ್ನು ಆಹ್ವಾನಿಸಿ ಗೌರವಿಸಲಾಗುತ್ತಿದೆ ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ, ಫರ್ಲಾ ಚರ್ಚ್ ಧರ್ಮಗುರು ಫಾ| ಮಾರ್ಕ್ ಅರುಣ್ ಡಿಸೋಜ, ಮಾಜಿ ಶಾಸಕ ಜೆ ಆರ್ ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೋ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಮನಪಾ ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಕೆ. ಅಶ್ರಫ್, ನಮ್ಮ ಕುಡ್ಲ ವ್ಯವಸ್ಥಾಪಕ ನಿರ್ದೇಶಕ ಲೀಲಾಕ್ಷ ಕರ್ಕೇರ, ಹೆದ್ದಾರಿ ಇಲಾಖೆಯ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ಆರ್ ಕೆ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಆಲ್ವಿನ್ ಡಿಸೋಜ, ಜಿ.ಪಂ. ಮಾಜಿ ಸದಸ್ಯ ಧರಣೇಂದ್ರಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕ ಬೈಲು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಕಂಬಳ ಸಮಿತಿ ಸಂಚಾಲಕ ಬಿ ಪದ್ಮ ಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಬಿ.ಎಂ. ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಭಂಡಾರಿ, ಬಿ.ಆರ್.ಅಂಚನ್, ಶಬೀರ್ ಎಸ್, ಭುವನೇಶ್ ಪಚ್ಚಿನಡ್ಕ, ಮೊದಲಾದವರು ಭಾಗವಹಿಸಿದ್ದರು.

ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X