Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ...

ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ ವೇತನ ತಾರತಮ್ಯ ನಿವಾರಣೆಗೆ ಬ್ರಿಜೇಶ್ ಚೌಟ ಮನವಿ

ಕೇಂದ್ರ ಪೆಟ್ರೋಲಿಯಂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ

ವಾರ್ತಾಭಾರತಿವಾರ್ತಾಭಾರತಿ10 March 2025 9:33 PM IST
share
ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ ವೇತನ ತಾರತಮ್ಯ  ನಿವಾರಣೆಗೆ ಬ್ರಿಜೇಶ್ ಚೌಟ ಮನವಿ

ಮಂಗಳೂರು: ಮಂಗಳೂರಿನಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ಐಎಸ್‌ಪಿಆರ್‌ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರಲ್ಲಿ ಮನವಿ ಮಾಡಿದ್ದಾರೆ.

ಹೊಸದಿಲ್ಲಿಯಲ್ಲಿ ಸೋಮವಾರ ಪಂಕಜ್ ಅವರನ್ನು ಭೇಟಿಯಾದ ಸಂಸದರು, ಸುಮಾರು 8 ವರ್ಷ ಗಳಿಂದ ಬಗೆಹರಿಯದೆ ತೊಂದರೆ ಅನುಭವಿಸುತ್ತಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್ ಘಟಕದ ಉದ್ಯೋಗಿಗಳ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಕೋರಿದ್ದಾರೆ. ಜತೆಗೆ, ಈ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುವ ಉದ್ಯೋಗಿಗಳಿಗೆ ವ್ಯವಸ್ಥಿತ ಮಾನವ ಸಂಪನ್ಮೂಲ ನೀತಿ ಯಿಲ್ಲದೆ ಏನೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದರ ಬಗ್ಗೆ ಸುಧೀರ್ಘವಾಗಿ ಚರ್ಚಿಸಿ, ಇಲ್ಲಿನ ನೌಕರರು ಎದುರಿಸುತ್ತಿರುವ ಗಂಭೀರ ಔದ್ಯೋಗಿಕ ಸಮಸ್ಯೆಗಳನ್ನು ಕಾರ್ಯದರ್ಶಿಯವರಿಗೆ ಮನವರಿಕೆ ಮಾಡಿದ್ದಾರೆ.

ಸಾರ್ವಜನಿಕ ವಲಯದ ತೈಲ ಸಂಸ್ಥೆಗಳಿಂದ ನಿಯೋಜನೆಗೊಳ್ಳುವ ಅಧಿಕಾರಿಗಳಿಗೆ ಹೋಲಿಸಿದರೆ ಈ ಐಎಸ್‌ಪಿಆರ್‌ಎಲ್ ಘಟಕಕ್ಕೆ ನೇರ ನೇಮಕವಾಗುವ ಉದ್ಯೋಗಿಗಳ ವೇತನ ಪಾವತಿ ಹಾಗೂ ಭತ್ಯೆ ನೀಡುವಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ಐಎಸ್‌ಪಿಆರ್‌ಎಲ್‌ನಲ್ಲಿ ಹಲವರು ಸುಮಾರು 5 ವರ್ಷಗಳಿಂದ ಯಾವುದೇ ಭಡ್ತಿ ದೊರೆಯದೆ ಒಂದೇ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸದ ಅವಧಿ ಯಲ್ಲಿಯೂ ತಾರತಮ್ಯವಿದ್ದು, ಮಂಗಳೂರಿನ ಐಎಸ್‌ಪಿಆರ್‌ಎಲ್‌ನಲ್ಲಿರುವ ಉದ್ಯೋಗಿಗಳು ವಾರಕ್ಕೆ 6 ದಿನ ಕೆಲಸ ಮಾಡಬೇಕು. ಅದೇ ನೋಯ್ಡಾದ ಐಎಸ್‌ಪಿಆರ್‌ಎಲ್ ಕೇಂದ್ರ ಕಚೇರಿ ಅಧಿಕಾರಿಗಳಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಸೌಲಭ್ಯವಿದೆ ಎಂದು ಕ್ಯಾ. ಚೌಟ ಅವರು ಕಾರ್ಯದರ್ಶಿಗಳ ಗಮನ ಸೆಳೆದಿದ್ದಾರೆ.

ಅತ್ಯಂತ ಅಪಾಯಕಾರಿ ಉದ್ಯೋಗದ ಸವಾಲುಗಳಿರುವ ಸ್ಥಳವಾಗಿದ್ದರೂ, ಇಲ್ಲಿನ ಉದ್ಯೋಗಿಗಳಿಗೆ ಸರಿಯಾದ ವೈದ್ಯ ಸೌಲಭ್ಯ, ವಿಮಾ ವ್ಯವಸ್ಥೆ, ಪಿಂಚಣಿ, ಗ್ರಾಚ್ಯುಟಿ, ಶಿಫ್ಟ್ ಭತ್ಯೆ, ಅಪಘಾತ ಪರಿಹಾರ ಸೇರಿ ಯಾವುದೇ ಕಾರ್ಮಿಕ ಸವಲತ್ತುಗಳಿಲ್ಲ. ಬೇರೆ ಕೈಗಾರಿಕೆಗಳಿಗೆ ಹೋಲಿಸಿದರೆ ಐಎಸ್‌ಪಿಆರ್‌ಎಲ್‌ನಲ್ಲಿ ಪಿಡಿಎಫ್ ತರಬೇತಿ ಅವಧಿಯು ಒಂದರ ಬದಲಿಗೆ 2 ವರ್ಷಗಳಾಗಿದೆ. ಇದರಿಂದ ಅವರ ವೃತ್ತಿ ಭವಿಷ್ಯಕ್ಕೂ ತೊಂದರೆಯಾಗುತ್ತಿದೆ ಎಂದು ಕ್ಯಾ. ಚೌಟ ಅವರು ಇದೇವೇಳೆ ಪಂಕಜ್ ಜೈನ್ ಅವರ ಗಮನಕ್ಕೆ ತಂದಿದ್ದಾರೆ.

ದೇಶದ ಇಂಧನ ರಕ್ಷಣೆ ಹಾಗೂ ಭವಿಷ್ಯದ ದೃಷ್ಟಿಯಿಂದ ಐಎಸ್‌ಪಿಆರ್‌ಎಲ್‌ನಲ್ಲಿ ದುಡಿಯುವ ಉದ್ಯೋಗಿ ಗಳು-ಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹೀಗಿರುವಾಗ, ಈ ಐಎಸ್‌ಪಿಆರ್‌ಎಲ್ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗೆ ಸಮಗ್ರ ಎಚ್‌ಆರ್(ಮಾನವ ಸಂಪನ್ಮೂಲ) ನೀತಿ ರೂಪಿಸಬೇಕು. ಜತೆಗೆ ವೇತನ ಆದ್ಯತೆ, ಉತ್ತಮ ಸೌಲಭ್ಯ, ಸೇವಾ ಭದ್ರತೆಗಾಗಿ ಈ ಕೂಡಲೇ ಮಧ್ಯಂತರ ಪರಿಹಾರ ವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕ್ಯಾ. ಚೌಟ ಅವರು ಕೋರಿದ್ದಾರೆ.

ತಮ್ಮ ಮನವಿ ಆಲಿಸಿದ ಪಂಕಜ್ ಜೈನ್ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಆದಷ್ಟು ಬೇಗ ಮಂಗಳೂರಿನ ಐಎಸ್‌ಪಿಆರ್‌ಎಲ್ ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.ಹಲವು ವರ್ಷಗಳಿಂದ ಬಗೆಹರಿಯದೆ ಬಾಕಿಯಾಗಿದ್ದ ಮಂಗಳೂರಿನ ಜಿಎಂಪಿಎಲ್ ಸಮಸ್ಯೆಯನ್ನು ಕೂಡ ಕೆಲವು ತಿಂಗಳ ಹಿಂದೆಯಷ್ಟೇ ಶೀಘ್ರವಾಗಿ ಪರಿಶೀಲಿಸಿ ಬಗೆಹರಿಸಿ ದ್ದಾರೆ. ಹೀಗಿರುವಾಗ, 8 ವರ್ಷಗಳಿಂದ ಬಗೆಹರಿಯದೆ ಬಾಕಿಯಾಗಿರುವ ಐಎಸ್‌ಪಿಆರ್‌ಎಲ್‌ನ ಉದ್ಯೋಗಿಗಳ ಸಮಸ್ಯೆಗೂ ಶೀಘ್ರ ಪರಿಹಾರ ದೊರೆಯುವ ಪೂರ್ಣ ವಿಶ್ವಾಸವಿದೆ ಎಂದು ಸಂಸದ ಚೌಟ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X