Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಪತ್ನಿಗೆ ವಿಷ ಪದಾರ್ಥ ನೀಡಿ...

ಮಂಗಳೂರು| ಪತ್ನಿಗೆ ವಿಷ ಪದಾರ್ಥ ನೀಡಿ ಕೊಲೆ ಪ್ರಕರಣ: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

► ವ್ಯತಿರಿಕ್ತ ಸಾಕ್ಷಿ ನುಡಿದಿದ್ದ ಮಕ್ಕಳು ► ವೈದ್ಯಕೀಯ ಸಾಕ್ಷಿಯನ್ನು ಪರಿಗಣಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ12 March 2025 6:32 PM IST
share
ಮಂಗಳೂರು| ಪತ್ನಿಗೆ ವಿಷ ಪದಾರ್ಥ ನೀಡಿ ಕೊಲೆ ಪ್ರಕರಣ: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು, ಮಾ.12: ಪತ್ನಿಗೆ ಹಲ್ಲೆಗೈದು ಬಳಿಕ ಬಲವಂತವಾಗಿ ವಿಷ ಪದಾರ್ಥ ನೀಡಿ ಕೊಲೆಗೈದ ಆರೋಪಿ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ ನಗರದ ಜೋಸೆಫ್ ಫ್ರಾನ್ಸಿನ್ ರೆನ್ಸನ್ ಯಾನೆ ರೆನ್ಸನ್ (53) ಶಿಕ್ಷೆಗೊಳಗಾದ ಆರೋಪಿ.

2022ರ ಮೇ 11ರಂದು ಮಧ್ಯಾಹ್ನ 2:30ಕ್ಕೆ ಆರೋಪಿಯು ತನ್ನ ಪತ್ನಿ ಶೈಮಾರಿಗೆ ಹಲ್ಲೆಗೈದು ವಿಷ ಪದಾರ್ಥ ನೀಡಿ ಕೊಲೆಗೈದ ಆರೋಪ ಎದುರಿಸುತ್ತಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

ಶೈಮಾ ತನ್ನ ಗಂಡನ ಬಳಿ ದುಶ್ಚಟಗಳನ್ನು ಬಿಡುವಂತೆ ಹೇಳುತ್ತಲಿದ್ದು, ಮೇ 11ರಂದು ಶೈಮಾ ಮತ್ತೆ ಬುದ್ಧಿವಾದ ಹೇಳಿದಾಗ ಕುಪಿತಗೊಂಡ ಆರೋಪಿ ಜೋಸೆಫನು ತನ್ನ ಪತ್ನಿಯನ್ನು ಕೊಲೆ ಮಾಡುವ ದುರುದ್ದೇಶದಿಂದ ಗೋಡೆಗೆ ದೂಡಿ ಹಾಕಿ ಚಪಾತಿಯ ಲಟ್ಟಣಿಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿತ್ತು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶೈಮಾರಿಗೆ ವಿಷ ಪದಾರ್ಥ ನೀಡಿ ಆತ್ಮಹತ್ಯೆಗೆ ಯತ್ನ ಎಂದು ಬಿಂಬಿಸಲು ಆರೋಪಿಯು ಯತ್ನಿಸಿದ್ದ. ಮಾಹಿತಿ ತಿಳಿದ ಶೈಮಾರ ಇಬ್ಬರು ಗಂಡು ಮಕ್ಕಳು ರಿಕ್ಷಾದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ದಿನ ರಾತ್ರಿ 9:59ಕ್ಕೆ ಶೈಮಾ ಮೃತಪಟ್ಟಿದ್ದರು.

ಈ ಬಗ್ಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಆರೋಪಿಗೆ ಐಪಿಸಿ ಕಲಂ: 498 (ಎ)ರಡಿ 3 ವರ್ಷಗಳ ಶಿಕ್ಷೆ ವಾಸ ಮತ್ತು 10,000 ರೂ.ದಂಡ, ಐಪಿಸಿ ಕಲಂ: 302ರಡಿ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ ಮತ್ತು ಐಪಿಸಿ ಕಲಂ: 201ರಡಿ 3 ವರ್ಷಗಳ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಅಲ್ಲದೆ ಮೃತರ ವಾರಸುದಾರರಾದ ತಂದೆ ಮತ್ತು ಇಬ್ಬರು ಮಕ್ಕಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶಿಸಿದೆ.

*ಮಹತ್ವವಾದ ವೈದ್ಯಕೀಯ ಸಾಕ್ಷ್ಯ

ಶೈಮಾರ ಮೃತದೇಹದ ಪರೀಕ್ಷೆ ನಡೆಸಿದ ಆಸ್ಪತ್ರೆಯ ವಿಧಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವರ್ಷಾ ಎ.ಶೆಟ್ಟಿ ತಲೆಗೆ ಆದ ಗಂಭೀರ ಗಾಯದಿಂದ ಮೃತಪಟ್ಟಿರುತ್ತಾರೆಂದು ವರದಿ ನೀಡಿದ್ದರು. ಅದರ ಆಧಾರದ ಮೇಲೆ ಅದೇ ದಿನ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ವೈದ್ಯಾಧಿಕಾರಿ ಕೂಡ ನ್ಯಾಯಾಲಯದಲ್ಲಿ ಶವ ಪರೀಕ್ಷಾ ವರದಿಗೆ ಪೂರಕವಾಗಿ ಸಾಕ್ಷಿ ನುಡಿದಿದ್ದರು.

*ವ್ಯತಿರಿಕ್ತ ಸಾಕ್ಷಿ ನುಡಿದಿದ್ದ ಮಕ್ಕಳು

ಆರೋಪಿಯ 16 ಮತ್ತು 18 ವರ್ಷ ಪ್ರಾಯದ ಗಂಡು ಮಕ್ಕಳು ಘಟನೆ ನಡೆದ ದಿನ ತಾಯಿಯು ಕೋಣೆಗೆ ಹೋಗಿ ಚಿಲಕ ಹಾಕಿ ವಿಷ ಕುಡಿದು ಮೃತಪಟ್ಟಿರುತ್ತಾರೆಂದು ಸಾಕ್ಷಿ ನುಡಿದಿದ್ದರು. ಆದರೂ ಕೂಡ ಸಾಂದರ್ಭಿಕ ಹಾಗೂ ವೈದ್ಯಕೀಯ ಸಾಕ್ಷ್ಯದ ಆಧಾರದ ಮೇಲೆ ಅಭಿಯೋಜನೆಯು ಆರೋಪಿಯ ವಿರುದ್ಧದ ಆರೋಪವನ್ನು ರುಜುವಾತು ಮಾಡಿದೆ ಎಂದು ತೀರ್ಮಾನಕ್ಕೆ ಬಂದ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸರಕಾರದ ಪರವಾಗಿ ಮೋಹನ್ ಕುಮಾರ್ ಬಿ. ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X