ಮಂಗಳೂರು: ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ದ.ಕ. ಜಿಲ್ಲಾಧಿಕಾರಿ ಭೇಟಿ

ಮಂಗಳೂರು,ಮಾ.12: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಮೂರು ಕೇಂದ್ರಗಳಿಗೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಬುಧವಾರ ನಗರದ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಬಳಿಕ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥ ರೊಂದಿಗೆ ಪರೀಕ್ಷಾ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆಗಳ ಮಾಹಿತಿ ಪಡೆದರು. ಈ ಸಂದರ್ಭ ಮಂಗಳೂರು ಉಪಭಾಗಾಧಿಕಾರಿ ಹಷರ್ವರ್ಧನ ಉಪಸ್ಥಿತರಿದ್ದರು.
Next Story