Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳೆ ನೀರು ಒಳಚರಂಡಿ ಜಾಲಕ್ಕೆ ಬಿಟ್ಟರೆ...

ಮಳೆ ನೀರು ಒಳಚರಂಡಿ ಜಾಲಕ್ಕೆ ಬಿಟ್ಟರೆ ದಂಡ: ಮನಪಾ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ15 March 2025 6:14 PM IST
share
ಮಳೆ ನೀರು ಒಳಚರಂಡಿ ಜಾಲಕ್ಕೆ ಬಿಟ್ಟರೆ ದಂಡ: ಮನಪಾ ಎಚ್ಚರಿಕೆ

ಮಂಗಳೂರು, ಮಾ.15: ಪಾಲಿಕೆ ವ್ಯಾಪ್ತಿಯಲ್ಲಿ ಮನೆ, ಅಪಾರ್ಟ್‌ಮೆಂಟ್, ವ್ಯಾಪಾರಸ್ಥರು, ಕೈಗಾರಿಕೆ ಗಳಿಂದ ಒಳಚರಂಡಿ ಜಾಲಕ್ಕೆ ಮಳೆ ನೀರನ್ನು ಹರಿಯಬಿಟ್ಟರೆ ಕಾನೂನು ಕ್ರಮದ ಜತೆಗೆ ದಂಡ ವಿಧಿಸುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾ ಪ್ರಕಟನೆಯ ಮೂಲಕ ಈ ಬಗ್ಗೆ ತಿಳಿಸಿರುವ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕೆಲವೆಡೆ ಒಳಚರಂಡಿ ಜಾಲಕ್ಕೆ ಮಳೆ ನೀರು ಹರಿಯಬಿಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದಾಗಿ ಒಳಚರಂಡಿ ಜಾಲದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಳೆ ನೀರು ಹರಿದು ಮೆಶಿನ್ ಹೋಲ್‌ಗಳಿಂದ ಒಳಚರಂಡಿ ನೀರು ಹೊರ ಬಂದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ಈ ರೀತಿ ಒಳಚರಂಡಿ ಜಾಲಕ್ಕೆ ಮಳೆ ನೀರು ಹರಿಯ ಬಿಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗಾಗಿ ಅನಧಿಕೃತವಾಗಿ ಒಳಚರಂಡಿ ಜಾಲಕ್ಕೆ ಅಥವಾ ಮೆಶಿನ್ ಹೋಲ್‌ಗಳಿಗೆ ನೀಡಿರುವ ಕಟ್ಟಡದ ಮಳೆ ನೀರು ಸಂಪರ್ಕವನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು. ಪಾಲಿಕೆಯ ಅಧಿಕಾರಿ ಅಥವಾ ಸಿಬ್ಬಂದಿ ಅನಧಿಕೃತ ಜೋಡಣೆ ಬಗ್ಗೆ ಸ್ಥಳ ಪರಿಶೀಲನೆ ನಡೆಸುತ್ತಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸಂಬಂಧಿತ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಮೊದಲ ಬಾರಿಗೆ 5000 ರೂ. ದಂಡ ವಿಧಿಸ ಲಾಗುವುದು. ನೋಟೀಸು ನೀಡಿದ ಬಳಿಕವೂ ತೆರವುಗೊಳಿಸದಿದ್ದರೆ ಪ್ರತಿದಿನ 1000 ರೂ.ನಂತೆ ಹೆಚ್ಚುವರಪಿ ದಂಡ ವಿಧಿಸಲಾಗುವುದು. ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು. ಅನಧಿಕೃತ ಜೋಡಣೆಯನ್ನು ಪಾಲಿಕೆ ವತಿಯಿಂದ ತೆರವುಗೊಳಿಸಿ ಕಾರ್ಯಾಚರಣೆಗೆ ತಗಲುವ ಮೊತ್ತವನ್ನು ಕಟ್ಟಡದ ಮಾಲಕರಿಂದ ದಂಡ ವಿಧಿಸಿ ಹೆಚ್ಚುವರಿ 25,000 ರೂ. ದಂಡ ವಿಧಿಸಲಾಗುವುದು. ಈ ಬಗ್ಗೆ ಸಾರ್ವಜನಿ ಕರು ಸಹಕರಿಸಬೇಕು. ಅನಧಿಕೃತ ಜೋಡಣೆ ಕಂಡು ಬಂದಲ್ಲಿ ಸಾರ್ವಜನಿಕರುಕೂಡಾ 0824- 2220306 , ವಾಟ್ಸಾಪ್ ಸಂ. 9449007722ಗೆ ಮಾಹಿತಿ ನೀಡಿ ಮಂಗಳೂರು ನಗರ ಸ್ವಚ್ಛ ನಗರವನ್ನಾಗಿಸಲು ಪಾಲಿಕೆಯೊಂದಿಗೆ ಕೈಜೋಡಿಸಬೇಕು ಎಂದು ಪಾಲಿಕೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಳೆ ನೀರಿನ ಚರಂಡಿಗೆ ಒಳಚರಂಡಿ ನೀರು ಹರಿಸಿದರೂ ದಂಡ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲವು ಮನೆಗಳು, ಅಪಾರ್ಟ್‌ಮೆಂಟ್‌ಗಳು, ವ್ಯಾಪಾರ ಸ್ಥರು, ಕೈಗಾರಿಕೆಗಳವರು ಮಳೆಯ ನೀರಿನ ಚರಂಡಿಗೆ ಒಳಚರಂಡಿ ನೀರು ಹರಿಸುತ್ತಿರುವುದು ಕೂಡಾ ಪಾಲಿಕೆಯ ಗಮನಕ್ಕೆ ಬಂದಿದೆ. ಇದರಿಂದ ನೀರಿನ ಮೂಲಕ ಕಲುಷಿತಗೊಂಡು ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಅಕ್ರಮ ಕಡ್ಡಯವಾಗಿ ನಿಷೇಧಿಸಲ್ಪಟ್ಟಿದ್ದು, ಅಧಿಕಾರಿ ಅಥವಾ ಸಿಬ್ಬಂದಿಯ ಪರಿಶೀಲನೆಯ ವೇಳೆ ನಿಯಮ ಉಲ್ಲಂಘನೆ ಕಂಡು ಬಂದರೆ ಕ್ರಮ ವಹಿಸಲಾಗು ತ್ತದೆ. ಮಳೆ ನೀರನ್ನು ಒಳಚರಂಡಿಗೆ ಬಿಡುವವರ ವಿರುದ್ಧ ಕೈಗೊಳ್ಳಲಾಗುವ ಕ್ರಮವನ್ನು ಇಂತಹ ಪ್ರಕರಣಗಳಲ್ಲಿಯೂ ಮಾಡಲಾಗುತ್ತದೆ. ಮಾತ್ರವಲ್ಲದೆ ಒಳಚರಂಡಿ ನೀರನ್ನು ಮಳೆ ನೀರು ಚರಂಡಿಗೆ ನೀಡಿರುವುದು ಕಂಡು ಬಂದಲಲಿ ಮಾಲಿನ್ಯ ನಿಯಂತ್ರಣ ತಡೆ ಕಾಯ್ದೆಯಡಿ ಕಟ್ಟಡ ಮಾಲಕರಿಗೆ 1 ಲಕ್ಷ ರೂ. ದಂಡ ಹಾಗೂ 6 ವರ್ಷದವರೆಗೆ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ. ಮಾತ್ವರಲ್ಲದೆ ಪರಿಸರ ಸಂರಕ್ಷಣೆ ಕಾಯ್ದೆಯಡಿ 1 ಲಕ್ಷ ರೂ. ದಂಡ ಹಾಗೂ 5 ವರ್ಷ ಜೈಲು ಶಿಕ್ಷೆಗೆ ಒಳಪಡಿಸಬಹುದು ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X