ಸುಳ್ಯ: ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಮೃತ್ಯು

ಜೋಸೆಫ್
ಸುಳ್ಯ: ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೆಫ್ (74) ಅವರಿಗೆ ಗುದ್ದಿದ್ದ ರಭಸಕ್ಕೆ ಅವರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಸುಳ್ಯ ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ಅವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದೆ. ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಅರಣ್ಯ ಇಲಾಖೆಯಲ್ಲಿ ಪಂಜ, ಮಂಗಳೂರು ಹಾಗೂ ಸಂಪಾಜೆ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಂಪಾಜೆಯಲ್ಲಿ ರೇಂಜರ್ ಆಗಿ ನಿವೃತ್ತರಾಗಿದ್ದರು. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.
Next Story





