Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ...

ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಶಿಕ್ಷಣ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸಬೇಕು: ತಾರಾನಾಥ ಗಟ್ಟಿ

ವಾರ್ತಾಭಾರತಿವಾರ್ತಾಭಾರತಿ22 March 2025 9:52 PM IST
share
ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಶಿಕ್ಷಣ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸಬೇಕು: ತಾರಾನಾಥ ಗಟ್ಟಿ

ಮಂಗಳೂರು ಮಾ. 22 : ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವುದಕ್ಕೆ ಮಾತ್ರ ಸೀಮಿತವಾಗದೆ ಭವಿಷ್ಯದ ಉತ್ತಮ ಪ್ರಜೆಗಳನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಹೊಂದಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯವನ್ನು ಶಾಲಾ ಕಾಲೇಜುಗಳು ವಹಿಸಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಹೇಳಿದ್ದಾರೆ.

ಅವರು ಶನಿವಾರ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ-ವಿಚಾರ ಸಂಕಿರಣವನ್ನು ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.

ಮಾದಕ ವ್ಯಸನಗಳ ಪ್ರಕರಣಗಳು ನಗರದಲ್ಲಿ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಕೇವಲ ಓದುವ ಕಡೆಗೆ ಗಮನ ಕೊಡಬೇಕು. ಮಾದಕ ವ್ಯಸನ ರೂಪಿಸಲು ಅನೇಕ ಜಾಲಗಳಿವೆ. ಅಂತಹ ಯಾವುದೇ ರೀತಿಯ ಹಾದಿ ತಪ್ಪಿಸುವ ದುಶ್ಚಟಗಳಿಗೆ ಒಳಗಾಗಬಾರದು ಎಂದು ಅವರು ಹೇಳಿದರು.

ಇತ್ತೀಚೆಗೆ ಮಂಗಳೂರು ನಗರ ಪೊಲೀಸರು ಬೃಹತ್ ಮಟ್ಟದ ಡ್ರಗ್ಸ್ ವಶಪಡಿಸುವ ಮೂಲಕ ನಗರದಲ್ಲಿ ಮಾದಕವಸ್ತು ಹಂಚಿಕೆಯನ್ನು ತಡೆಗಟ್ಟಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂಧಿಸುವುದಾಗಿ ಅವರು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಮಾತನಾಡಿ, ಮಾದಕ ವ್ಯಸನಗಳು ತೀವ್ರವಾಗಿ ಹಬ್ಬುತ್ತಿದೆ. ಯುವಕರು ಬೇಗನೆ ಮಾದಕ ದ್ರವ್ಯಗಳನ್ನು ಬಳಸಲು ಪ್ರಾರಂಭಿಸಿದರೆ, ಅವರು ಅವುಗಳನ್ನು ಬಳಸುವು ದನ್ನು ಮುಂದುವರೆಸುವ ಮತ್ತು ನಂತರದ ಜೀವನದಲ್ಲಿ ವ್ಯಸನಿಯಾಗುವ ಸಾಧ್ಯತೆಗಳಿವೆ. ಯುವಜನರ ಮೆದುಳು 20ರ ಹರೆಯದವರೆಗೂ ಬೆಳೆಯುತ್ತಲೇ ಇರುತ್ತದೆ.ಕೆಲವೊಂದು ಕೆಟ್ಟ ದುಶ್ಚಟದ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ, ಕುತೂಹಲ ಇರುತ್ತದೆ. ಆದರೆ ಅದರ ಪರಿಣಾಮದ ಅರಿವು ಯುವಜನತೆಗೆ ಇರುವು ದಿಲ್ಲ. ಯುವಕರಿಗೆ ಒಳ್ಳೆ ಸಂದೇಶಗಳನ್ನು ನೀಡಬೇಕು. ನಮ್ಮ ಮನಸ್ಸನ್ನು ಕೆಟ್ಟ ವಿಚಾರಗಳಿಂದ ತುಂಬಬಾರದು. ಅನೇಕ ಜನ ತಮ್ಮ ಸಂಪಾದನೆಯನ್ನು ಡ್ರಗ್ಸ್, ಮದ್ಯಪಾನ, ಧೂಮಪಾನ ಮುಂತಾದ ಕೆಟ್ಟ ಚಟುವಟಿಕೆಗಳಿಗೆ ಖರ್ಚು ಮಾಡುತ್ತಿದ್ದಾರೆ. ಯುವಜನತೆ ಒಳ್ಳೆ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು.ತಮ್ಮ ಅಮೂಲ್ಯ ವಾದ ಜೀವನದ ಸಮಯವನ್ನು ಯಾವುದೇ ಕೆಟ್ಟ ಚಟುವಟಿಕೆಗೆ ವ್ಯಯ ಮಾಡಬಾರದು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯ ಕಾಲೇಜು ಪ್ರಾಂಶುಪಾಲ ಪ್ರೊ. ಗಣಪತಿ ಗೌಡ. ಎಸ್ ಮಾತ ನಾಡಿ, ಮಾದಕ ವ್ಯಸನಗಳಂತಹ ಕಾನೂನು ಬಾಹಿರ ಘಟನೆಗಳನ್ನು ಹತ್ತಿಕ್ಕಬೇಕು. ದುಶ್ಚಟಗಳಿಗೆ ಒಳಗಾಗದೆ ಜವಾಬ್ದಾರಿಯುತವಾದ ಕಾರ್ಯಗಳನ್ನು ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿ. ವಿ ಕಾಲೇಜು ಎನ್. ಎಸ್. ಎಸ್ ಅಧಿಕಾರಿ ಡಾ. ಗಾಯತ್ರಿ ಎನ್ ಉಪಸ್ಥಿತರಿದ್ದರು.

ಜಿಲ್ಲಾ ವಾರ್ತಾಧಿಕಾರಿ ಬಿ. ಎ ಖಾದರ್ ಶಾ ಸ್ವಾಗತಿಸಿ, ವಿ. ವಿ ಕಾಲೇಜು ಎನ್.ಎಸ್.ಎಸ್ ಅಧಿಕಾರಿ ಡಾ. ಸುರೇಶ್ ವಂದಿಸಿದರು. ಹಿರಿಯ ಕಲಾವಿದ ಗಿರೀಶ್ ನಾವಡ ನಿರೂಪಿಸಿದರು. ಇದಕ್ಕೂ ಮೊದಲು ಮಾದಕವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಕಲಾ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X