Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹನಿಟ್ರ್ಯಾಪ್‌ ಆರೋಪ| ಸಿಎಂ ಸಿದ್ದರಾಮಯ್ಯ...

ಹನಿಟ್ರ್ಯಾಪ್‌ ಆರೋಪ| ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 March 2025 10:04 PM IST
share
ಹನಿಟ್ರ್ಯಾಪ್‌ ಆರೋಪ| ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

ಮಂಗಳೂರು: ರಾಜ್ಯದ ಹಿರಿಯ ಸಚಿವರೊಬ್ಬರು ಹನಿಟ್ರ್ಯಾಪ್‌ಗೆ ಒಳಗಾದ ಬಗ್ಗೆ ವಿಧಾನಸಭೆಯಲ್ಲೇ ಹೇಳಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ತನಿಖೆ ಆರಂಭಿಸಿಲ್ಲ. ಅನೈತಿಕತೆಯನ್ನು ಬೆಂಬಲಿಸುವ ಸರಕಾರ ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ, ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಚಿತ್ರದುರ್ಗ ಸಂಸದ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭ್ರಷ್ಟ ಮತ್ತು ಅನೈತಿಕ ಸರಕಾರವಾಗಿದೆ ಎಂದು ಆರೋಪಿಸಿದರು.

ಅಹಿಂದ ನಾಯಕ ಎಂದು ಬಡಾಯಿ ಕೊಚ್ಚಿಕೊಳ್ಳುವ ಸಿದ್ದರಾಮಯ್ಯ 23-24ನೇ ಸಾಲಿನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಬಳಕೆಯಾಗಬೇಕಿದ್ದ 11,144 ಕೋಟಿ ರೂ. ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದರು.

2024-25ನೇ ಸಾಲಿನಲ್ಲಿ 14 ಸಾವಿರ ಕೋಟಿ ಎಸ್‌ಸಿ ಎಸ್‌ಟಿ ಅನುದಾನವನ್ನು ದುರ್ಬಳಕೆ ಮಾಡಿ ದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 42 ಸಾವಿರ ಕೋಟಿ ರೂ. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಮೀಸಲಿಡ ಲಾಗಿದೆ ಎಂದು ಹೇಳಿದ್ದಾರೆ. ಆದರೆ, ಈ ಪೈಕಿ 7 ಸಾವಿರ ಕೋಟಿ ಮಾತ್ರ ದೊರೆಯುತ್ತಿದೆ. 42 ಸಾವಿರ ಕೋಟಿ ರೂ. ಪೈಕಿ ಶೇ.50ರಷ್ಟು ಇಲಾಖೆಗಳಿಗೆ ಹಂಚಿಕೆಯಾಗುತ್ತಿದೆ. ಉಳಿದ 21 ಸಾವಿರ ಕೋಟಿ ರೂ. ಪೈಕಿ 14 ಸಾವಿರ ಕೋಟಿ ಗ್ಯಾರಂಟಿಗೆ ಬಳಕೆಯಾಗಲಿದೆ. 1.5 ಕೋಟಿ ದಲಿತರಿಗೆ 7 ಸಾವಿರ ಕೋಟಿ ರೂ. ಮಾತ್ರ ಉಳಿಯುತ್ತದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಇದು ಅಭಿವೃದ್ಧಿ ಶೂನ್ಯ ಸರಕಾರವಾಗಿದೆ. ಸಮರ್ಪಕ ಆಡಳಿತವನ್ನೂ ನೀಡುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಪ್ರತಿದಿನ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ. ಜನರ ಜೀವನಕ್ಕೆ ಈ ಸರಕಾರ ಹೊರೆಯಾಗಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಭಾರತಿ ಶೆಟ್ಟಿ, ಕಿಶೋರ್‌ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಅಸಂಘಟಿಕ ಪ್ರಕೋಷ್ಠದ ರಾಜೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್, ಮುಖಂಡರಾದ ಸುಲೋಚನಾ ಭಟ್, ಪೂಜಾ ಪೈ, ಸಂಜಯ ಪ್ರಭು ಉಪಸ್ಥಿತರಿದ್ದರು.

ರಾಜ್ಯ ಸರಕಾರದ ದುರಾಡಳಿತ, ತಪ್ಪು ನಿರ್ಧಾರ ಪ್ರಶ್ನಿಸಿದ ಬಿಜೆಪಿ 18 ಮಂದಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಖಂಡನೀಯ. ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕ ರಾಗಿದ್ದ ವೇಳೆ ಸದನದಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದರು. ಸದನದ ಬಾಗಿಲಿಗೆ ಒದ್ದಿದ್ದರು. ಆಸನದ ಮೇಲೆ ಏರಿ ಕುಣಿದಿದ್ದರು. ಕಾಂಗ್ರೆಸ್ ಸದಸ್ಯರು ಸಭಾಪತಿ ಅವರನ್ನು ಎಳೆದಾಡಿದ್ದರು. ಈ ಎಲ್ಲದರ ವಿಡಿಯೋವನ್ನು ಸಿದ್ದರಾಮಯ್ಯ ಅವರು ಮತ್ತೊಮ್ಮೆ ನೋಡಲಿ. ಆಗ ಬಿಜೆಪಿ ಸರಕಾರ ಇಂತಹ ಕ್ರಮ ಕೈಗೊಂಡಿರಲಿಲ್ಲ. ಈಗ ಅಧಿಕಾರದ ಮದದಿಂದ ಬಿಜೆಪಿ ಸದಸ್ಯರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ದಿನದ ಮಟ್ಟಿಗೆ, ಒಂದು ಅಥವಾ ಎರಡು ದಿನ ಅಮಾನತು ಮಾಡುವುದು ಸೂಕ್ತ. ಆದರೆ, ಆರು ತಿಂಗಳು ಅಮಾನತು ಮಾಡುವ ಮೂಲಕ ಸಿದ್ದರಾಮಯ್ಯ ಸರಕಾರ ನೈತಿಕತೆ ಕಳೆದುಕೊಂಡಿದೆ ಎಂದು ಕಾರಜೋಳ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X