Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೇವಲ ಭಾಷಣ ಬಿಗಿಯುವುದು ಹಿಂದುತ್ವವಲ್ಲ,...

ಕೇವಲ ಭಾಷಣ ಬಿಗಿಯುವುದು ಹಿಂದುತ್ವವಲ್ಲ, ಪುಣ್ಯ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವುದು ಹಿಂದುತ್ವ: ಶಾಸಕ ಅಶೋಕ್ ರೈ

ವಿಜಯ- ವಿಕ್ರಮ ಜೋಡುಕರೆ ಕಂಬಳ ಸಭಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 March 2025 10:47 PM IST
share
ಕೇವಲ ಭಾಷಣ ಬಿಗಿಯುವುದು ಹಿಂದುತ್ವವಲ್ಲ, ಪುಣ್ಯ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವುದು ಹಿಂದುತ್ವ: ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಕೇವಲ ಭಾಷಣ ಬಿಗಿಯುವುದು ಹಿಂದುತ್ವವಲ್ಲ. ಪುಣ್ಯ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವುದು ಹಿಂದುತ್ವ. ಅದನ್ನು ಓರ್ವ ಶಾಸಕನಾಗಿ ನಾನು ಮಾಡಿ ತೋರಿಸುತ್ತೇನೆ. ಪುರಾಣ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯಕ್ಕೆ 352 ಕೋ. ರೂ. ಅನುದಾನವನ್ನು ತಾನು ತಂದಿದ್ದು, ಉಪ್ಪಿನಂಗಡಿ ಸಂಗಮ ಕ್ಷೇತ್ರವನ್ನು ಕೂಡಲ ಸಂಗಮದಂತೆ ಅಭಿವೃದ್ಧಿ ಪಡಿಸಲಾಗು ವುದು ಎಂದು ಶಾಸಕ, ಉಪ್ಪಿನಂಗಡಿ ವಿಜಯ- ವಿಕ್ರಮ ಕಂಬಳ ಸಮಿತಿಯ ಅಧ್ಯಕ್ಷರೂ ಆದ ಅಶೋಕ್ ಕುಮಾರ್ ಕೋಡಿಂಬಾಡಿ ತಿಳಿಸಿದರು.

ಉಪ್ಪಿನಂಗಡಿಯ ಕೂಟೇಲುವಿನ ಬಳಿ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರ ಚಾಲನೆ ಪಡೆದ ವಿಜಯ- ವಿಕ್ರಮ ಜೋಡುಕರೆ ಕಂಬಳದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾನೊಬ್ಬ ಹಿಂದೂ ಎಂದು ಎದೆ ತಟ್ಟಿ ಹೇಳುತ್ತೇನೆ. ನಾನು ನನ್ನ ದೈವ- ದೇವರುಗಳನ್ನು ಆರಾಧಿಸುವು ದರೊಂದಿಗೆ ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾನು ಯಾವುದೇ ಧರ್ಮ, ಜಾತಿಯ ವಿರೋಧಿ ಯಲ್ಲ. ಧರ್ಮ, ಜಾತಿಯ ಬೇಧ ಬಿಟ್ಟು ಒಗ್ಗೂಡಿ, ಒಂದೇ ತಾಯಿಯ ಮಕ್ಕಳಂತೆ ಬದುಕಿದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ. ಹಿಂದುತ್ವದ ಬಗ್ಗೆ ಭಾಷಣಕ್ಕೆ ಮಾತ್ರ ಸೀಮಿತರಾದವರು ಮಾಡದ ಕೆಲಸವನ್ನು ನಾನು ಶಾಸಕನಾಗಿ ಮಾಡಿದ್ದೇನೆ. ಉಪ್ಪಿನಂಗಡಿ ದೇವಾಲಯದ ಅಭಿವೃದ್ಧಿಗೆ 352 ಕೋ.ರೂ. ಅನುದಾನ ದೊರೆತ್ತಿದ್ದು, ಇದರಲ್ಲಿ ನೇತ್ರಾವತಿ ನದಿಗೆ ಅಣೆಕಟ್ಟು ಕಟ್ಟಿ, ನದಿಯಲ್ಲಿರುವ ಉದ್ಭವ ಲಿಂಗಕ್ಕೆ ತೆರಳಿ ಪೂಜೆ ಸಲ್ಲಿಸಲು ಕೂಡಲ ಸಂಗಮದಂತೆ ವ್ಯವಸ್ಥೆಗಳನ್ನು ಮಾಡಲಾಗುವುದು. ಈ ಪುಣ್ಯ ಕ್ಷೇತ್ರವನ್ನು ಧಾರ್ಮಿಕ ಕೇಂದ್ರವಾಗಿಯೂ ನದಿಯ ಪರಿಸರವನ್ನು ಪ್ರವಾಸೋದ್ಯಮ ಕೇಂದ್ರ ವಾಗಿಯೂ ಪರಿವರ್ತಿಸಲಾಗುವುದು. ನೇತ್ರಾವತಿ ನದಿಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು. 15 ಕೋ.ರೂ.ನಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಲಾಗುವುದು. ನದಿ ಬದಿಯಲ್ಲಿ ರಸ್ತೆ ಮಾಡಿ ಅಲ್ಲಿ ವ್ಯಾಪಾರ ಕೇಂದ್ರಗಳಿಗೆ ಅವಕಾಶ ಮಾಡಿಕೊಡಲಾಗುವುದು. 10 ಕೋ.ರೂ. ವೆಚ್ಚದಲ್ಲಿ ಪಿಂಡ ಪ್ರಧಾನಕ್ಕೆ ಬೇಕಾದ ಕಟ್ಟಡಗಳನ್ನು ನಿರ್ಮಿಸಲಾಗುವುದು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಪುಣ್ಯ ಕ್ಷೇತ್ರಗಳ ಅಭಿವೃದ್ಧಿಯ ಮೂಲಕ ನಾನು ನನ್ನ ಹಿಂದುತ್ವ ವನ್ನು ತೋರಿಸುತ್ತೇನೆ ಎಂದರು.

ರೋಡ್ ಮತ್ತು ತೋಡುಗಳನ್ನು ಯಾರೂ ಕೂಡಾ ಮಾಡಬಹುದು. ಆದರೆ ನಾನು ದೂರದೃಷ್ಟಿಯ ಯೋಜನೆಗಳನ್ನು ಹಾಕುತ್ತೇನೆ. ತಾನು ಶಾಸಕನಾಗಿ ಒಂದು ವರ್ಷ ಏಳು ತಿಂಗಳು ಆಗುವುದರೊಳಗೆ ಉದ್ಯೋಗವಕಾಶ ಹೆಚ್ಚಳಕ್ಕೆ ಪುತ್ತೂರಿನಲ್ಲಿ ಕೆಎಂಎಫ್‍ಗೆ ಜಾಗ ನೀಡಿದ್ದೇನೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಒಂದು ಸಾವಿರದ ಹತ್ತು ಕೋಟಿ ರೂ. ಅನುದಾನ ತಂದಿದ್ದೇನೆ. ಕ್ರೀಡಾಂಗಣಕ್ಕೆ 32 ಕೋ. ರೂ. ಅನುದಾನ ತಂದಿದ್ದೇನೆ. ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಬಜೆಟ್‍ನಲ್ಲಿ ಅನು ಮೋದನೆ ಸಿಕ್ಕಿದೆ. ಮೆಡಿಕಲ್ ಕಾಲೇಜು ಬಗ್ಗೆ ಟೀಕೆ ಮಾಡುವವರಿಗೆ ಅಧಿಕಾರವಿದ್ದಾಗ ಯಾಕೆ ಬಜೆಟ್‍ ನಲ್ಲಿ ಮೆಡಿಕಲ್ ಕಾಲೇಜನ್ನು ಬರೆಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು, ನನ್ನ ಕ್ಷೇತ್ರದ ಅಭಿವೃದ್ಧಿಯಷ್ಟೇ ನನ್ನ ಗುರಿ. ಅಭಿವೃದ್ಧಿಯಲ್ಲಿ ನಾನು ಯಾವುದೇ ತಾರತಮ್ಯ ಮಾಡಲ್ಲ. ರಾಜಕಾರಣ ಮಾಡಲ್ಲ ಎಂದರಲ್ಲದೇ, ಉಪ್ಪಿನಂಗಡಿ ದೇವಾಲಯದ ಬಳಿ ಅಣೆಕಟ್ಟು ನಿರ್ಮಾಣವಾದರೆ ಕಂಬಳ ಇನ್ನು ಇಲ್ಲಿ ನಡೆಯಲು ಸಾಧ್ಯವಿಲ್ಲ. ಅದಕ್ಕೂ ಈಗಾಗಲೇ ಹಿರೇಬಂಡಾಡಿಯಲ್ಲಿ 25 ಎಕ್ರೆ ಜಾಗವನ್ನು ನೋಡಿ ಆಗಿದೆ ಎಂದರು.

ತುಳುವನ್ನು ರಾಜ್ಯದ ಹೆಚ್ಚುವರಿ ಭಾಷೆಯಾಗಿ ತೆಗೆದುಕೊಳ್ಳಬೇಕೆಂಬ ನನ್ನ ಹೋರಾಟ ನಿರಂತರ ನಡೆಯುತ್ತಿದ್ದು, ಇನ್ನು 3-4 ತಿಂಗಳಲ್ಲಿ ಮೊದಲಾಗಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಳಿಕ ರಾಜ್ಯದಲ್ಲಿ ಅದು ಆಗಲಿದೆ. ಬೆಂಗಳೂರಿನಲ್ಲಿ ಈಗಾಗಲೇ ತುಳು ಭವನಕ್ಕಾಗಿ 5 ಎಕರೆ ಜಾಗವನ್ನು ರಾಜ್ಯ ಸರಕಾರ ನೀಡಿದ್ದು, ಮುಂದೆ ಪಿಲಿಕುಳದಲ್ಲಿಯೂ ತುಳು ಭವನ ನಿರ್ಮಿಸಲಾಗುವುದು. ಇದರೊಂದಿಗೆ ಕಂಬಳ ಉಳಿವಿಗಾಗಿಯೂ ನನ್ನ ಕಾನೂನು ಹೋರಾಟ ನಿರಂತರ ಸಾಗುತ್ತಿದೆ. ನಮ್ಮ ಕಂಬಳಕ್ಕೆ ಅಳಿವಿಲ್ಲ. ತುಳು ಭಾಷೆ, ತುಳುನಾಡು, ತುಳುವರು ಇರುವಷ್ಟು ದಿನ ಕಂಬಳವೆನ್ನುವುದು ನಿರಂತರವಾಗಲಿದೆ ಎಂದರು.

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಕಂಬಳಕ್ಕೆ ಪೇಟಾದಿಂದ ಅಡೆತಡೆಗಳು ಬಂದಾಗ ಒಂದು ಶಕ್ತಿಯಾಗಿ, ಕಂಬಳದ ಉಳಿವಿಗೆ ಬೆನ್ನೆಲಬಾಗಿ ನಿಂತವರು. ಶಾಸಕರಾದ ಅಶೋಕ್ ಕುಮಾರ್ ರೈಯವರು. ಶಾಸಕರಾದ ಬಳಿಕವೂ ಅವರು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದು, ಹಲವು ಯೋಜನೆಗಳನ್ನು ತನ್ನ ಕ್ಷೇತ್ರಕ್ಕೆ ತಂದಿದ್ದಾರೆ. ಆದ್ದರಿಂದ ರಾಜ್ಯವೇ ಅವರನ್ನು ತಿರುಗಿ ನೋಡುವಂತೆ ಆಗಿದೆ. ಮುಂದಿನ ಕಂಬಳಕ್ಕಾಗುವಾಗ ಅವರಿಗೆ ಸಚಿವರಾಗುವ ಭಾಗ್ಯ ದೇವರು ಕರುಣಿಸಲಿ ಎಂದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಉಪ್ಪಿನಂಗಡಿಯ ದೊಡ್ಡ ಜಾತ್ರೆಯೆಂದರೆ ಅದು ಮಖೆಜಾತ್ರೆ. ಎರಡನೇ ಜಾತ್ರೆ ಉಬಾರ್ ಕಂಬಳೋತ್ಸವವಾಗಿದೆ. ಅಶೋಕ್ ಕುಮಾರ್ ರೈ ಶಾಸಕರಾದ ಅತ್ಯಲ್ಪ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 38 ಎಕರೆ ಜಾಗದಲ್ಲಿ 14 ಎಕರೆ ಜಾಗ ಮಾತ್ರ ದೇವಸ್ಥಾನದ ಸ್ವಾಧೀನದಲ್ಲಿತ್ತು. ಈವರೆಗೆ ಯಾರಿಗೂ ಒಂದಿಂಚು ಭೂಮಿಯನ್ನು ದೇವಸ್ಥಾನಕ್ಕೆ ಸ್ವಾಧೀನ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಅಶೋಕ್ ಕುಮಾರ್ ರೈಯವರು ಶಾಸಕರಾದ ಮೇಲೆ ಈ ಎಲ್ಲಾ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾ ಯಿತು. ಇದು ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವರೇ ಪ್ರೇರಣೆ ಕೊಟ್ಟಿದ್ದಾರೆ ಕಾಣಬೇಕು ಎಂದರಲ್ಲದೆ, ದೇವಾಲಯದ ಜಾಗದ ವಿಷಯದಲ್ಲಿ ಹಿಂದುತ್ವ ಎಂದು ಬೊಬ್ಬೆ ಹೊಡೆಯುತ್ತಿದ್ದ ಇಬ್ಬರು ಇದೀಗ ನ್ಯಾಯಾಲಯದ ಮೆಟ್ಟಿಲನ್ನು ಏರಿದ್ದಾರೆ. ಅಲ್ಲಿಯೂ ದೇವಾಲಯದ ಪರವಾಗಿಯೇ ಜಯ ಸಿಗಲಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಚಲನಚಿತ್ರ ನಟ ವಿನುತ್ ಕುಮಾರ್, ನಟಿ ಸಮಂತಾ ಅಮೀನ್ ಮಾತನಾಡಿ ಶುಭ ಹಾರೈಸಿದರು.

ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ., ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್‍ನ ಸದಸ್ಯರಾದ ಶಿವನಾಥ ರೈ ಮೇಗಿನಗುತ್ತು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋ ದ್ಧಾರ ಸಮಿತಿಯ ಅಧ್ಯಕ್ಷರಾದ ದಾಸಪ್ಪ ಗೌಡ, ಆಡಳಿತ ಮೊಕ್ತೇಸರರಾದ ಯೋಗೀಶ ಪೂಜಾರಿ ಕಡ್ತಿಲ, ಎಚ್.ಆರ್.ಪಿ. ನರ್ಸಿಂಗ್ ಕಾಲೇಜಿನ ಅಧ್ಯಕ್ಷರಾದ ಹರಿಪ್ರಸಾದ್ ರೈ ಮಠಂತಬೆಟ್ಟು, ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ.ಎಸ್. ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಕಂಬಳ ತೀರ್ಪುಗಾರರಾದ ಗುಣಪಾಲ ಕಡಂಬ, ವೈದ್ಯ ಡಾ. ರಘು ಬೆಳ್ಳಿಪ್ಪಾಡಿ, ಉದ್ಯಮಿಗಳಾದ ರಮೇಶ್ ರೈ ಡಿಂಬ್ರಿ, ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ರಾಜೀವ ಶೆಟ್ಟಿ ಕೇದಗೆ, ನಿಹಾಲ್ ಶೆಟ್ಟಿ, ನಿಶಿತ್ ಶೆಟ್ಟಿ ಕಂಗ್ವೆ, ಯು. ರಾಮ, ಶಾಸಕರ ತಾಯಿ ಗಿರಿಜಾ ಸಂಜೀವ ರೈ, ಪತ್ನಿ ಸುಮಾ ಅಶೋಕ್ ರೈ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೃಷ್ಣ ಜಿ. ರಾವ್ ಆರ್ತಿಲ, 34 ನೆಕ್ಕಿಲಾಡಿ ಕಾಂಗ್ರೆಸ್ ವಲಯಾಧ್ಯಕ್ಷೆ ಅನಿ ಮಿನೇಜಸ್, ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಯುನಿಕ್, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷ ಸುದರ್ಶನ್ ನಾಯ್ಕ್ ಕಂಪ, ಭೂನ್ಯಾಯ ಮಂಡಳಿ ಸದಸ್ಯ ಎಂ. ಮಂಜುನಾಥ್ ಕೆಮ್ಮಾಯಿ, ಸದಸ್ಯ ರಂಜಿತ್ ಬಂಗೇರ, ಪ್ರಮುಖರಾದ ನಯನ ರೈ, ಪ್ರಜ್ವಲ್ ರೈ ಪಾತಾಜೆ, ಮಹಾಬಲ ಶೆಟ್ಟಿ, ರಿತೇಶ್ ಶೆಟ್ಟಿ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜತೀಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಬೊಳ್ಳಾವು, ನವೀನ್ ಕಲ್ಯಾಟೆ, ದಿನೇಶ್ ಬೊಳ್ವಾರು, ವಿಕ್ರಂ ಶೆಟ್ಟಿ ಅಂತರ, ಸಂದೀಪ್ ಕುಪ್ಟೆಟ್ಟಿ, ಉದ್ಯಮಿ ಚಿದಾನಂದ ರೈ ಎಸ್., ಯು.ಕೆ. ಮುಹಮ್ಮದ್ ಅಶ್ರಫ್ ಶುಕ್ರಿಯಾ, ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ವಿದ್ಯಾಧರ ಜೈನ್ ಪದ್ಮವಿದ್ಯಾ, ನಟೇಶ್ ಪೂಜಾರಿ, ರಾಮಚಂದ್ರ ಮಣಿಯಾಣಿ, ಸುದೇಶ್ ಶೆಟ್ಟಿ ಶಾಂತಿನಗರ, ಉಮಾನಾಥ ಶೆಟ್ಟಿ ಪೆರ್ನೆ, ಜಗನ್ನಾಥ ಶೆಟ್ಟಿ ನಡುಮನೆ, ಮೋನಪ್ಪ ಗೌಡ ಪಮ್ಮನಮಜಲು, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಕರಾಯ, ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಎಸ್. ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ದಿಲೀಪ್ ಶೆಟ್ಟಿ ಕರಾಯ, ವಿಜಯ ಪೂಜಾರಿ ಚೀಮುಳ್ಳು, ಸಹ ಸಂಚಾಲಕರಾದ ಕುಮಾರನಾಥ ಪಲ್ಲತ್ತಾರು ಮತ್ತಿತರರು ಉಪಸ್ಥಿತರಿದ್ದರು.

ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿದರು. ಕಂಬಳ ಸಮಿತಿಯ ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

130 ಜೊತೆ ಕೋಣಗಳು

ಉಪ್ಪಿನಂಗಡಿಯ ವಿಜಯ- ವಿಕ್ರಮ ಕಂಬಳದಲ್ಲಿ ನೇಗಿಲು ಕಿರಿಯ, ಹಗ್ಗ ಹಿರಿಯ, ನೇಗಿಲು ಹಿರಿಯ ಹಗ್ಗ ಹಿರಿಯ, ಅಡ್ಡಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಟ್ಟು 131 ಜೊತೆ ಕೋಣಗಳು ಭಾಗವಹಿಸಿದವು.

ಸನ್ಮಾನ

ಕಂಬಳದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕಂಬಳ ಕೋಣಗಳ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಹಾಗೂ ಹಿರಿಯ ಕಂಬಳ ಕೋಣಗಳ ಓಟಗಾರ ಮಹಾಬಲ ಶೆಟ್ಟಿ ಬಾಲಾಜೆ ಗುತ್ತು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X