Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ದೇಶದ ಮೊದಲ...

ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಯೋಜನೆ

ಒಪ್ಪಿಗೆ ಪ್ರಕ್ರಿಯೆ ತ್ವರಿತಗೊಳಿಸಲು ರಕ್ಷಣಾ ಕಾರ್ಯದರ್ಶಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ವಾರ್ತಾಭಾರತಿವಾರ್ತಾಭಾರತಿ25 March 2025 10:26 PM IST
share
ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಯೋಜನೆ

ಮಂಗಳೂರು, ಮಾ.25: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ಬಾಕಿ ಒಪ್ಪಿಗೆ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತು ವರ್ಜಿ ವಹಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಮಂಗಳವಾರ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ಹೊಸದಿಲ್ಲಿಯಲ್ಲಿ ಸಿಂಗ್ ಅವರನ್ನು ಭೇಟಿಯಾದ ಸಂಸದರು, ಕರಾವಳಿ ತೀರದ ಕಣ್ಗಾವಲು, ಭದ್ರತೆ ನೌಕಾ ಪಡೆಗೆ ಪ್ರತ್ಯೇಕ ವಿಶ್ವದರ್ಜೆಯ ತರಬೇತಿಗಾಗಿ 2017ರಲ್ಲಿ ಮಂಗಳೂರಿನಲ್ಲಿ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಮಂಜೂರಾತಿ ದೊರೆತಿತ್ತು. ಈ ಅಕಾಡೆಮಿಗಾಗಿ ಕೆಂಜಾರಿನಲ್ಲಿ ಕೆಐಎಡಿಬಿಯಿಂದ ಈಗಾಗಲೇ 159.03 ಎಕರೆ ಜಮೀನು ಮಂಜೂರಾಗಿದ್ದು, ಭೂ ಹಸ್ತಾಂತರ ಪ್ರಕ್ರಿಯೆ ಕೂಡ ನಡೆದಿದೆ. ಅಲ್ಲದೆ ಅಕಾಡೆಮಿ ಸ್ಥಾಪಿಸುವುದಕ್ಕೆ ವಿಸ್ತೃತ ಯೋಜನಾ ವರದಿ ಕೂಡ ರಕ್ಷಣಾ ಸಚಿವಾಲಯಕ್ಕೆ ಸಲ್ಲಿಕೆಯಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಪಾಲಿಗೆ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೋಸ್ಟ್‌ ಗಾರ್ಡ್ ಅಕಾಡೆಮಿ ಸ್ಥಾಪಿಸುವುದಕ್ಕೆ ಬಾಕಿರುವ ಆಡಳಿತಾತ್ಮಕ ಒಪ್ಪಿಗೆಯನ್ನು ತ್ವರಿತಗೊಳಿಸುವುದಕ್ಕೆ ಮುತುವರ್ಜಿ ವಹಿಸಬೇಕೆಂದು ಚೌಟ ಅವರು ರಕ್ಷಣಾ ಕಾರ್ಯದರ್ಶಿಯನ್ನು ಕೋರಿದ್ದಾರೆ.

ಮಂಗಳೂರಿನಲ್ಲಿ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಬಹುತೇಕ ಆಡಳಿತಾತ್ಮಕ ಮಂಜೂರಾತಿ ಪ್ರಕ್ರಿಯೆಗಳು ಪೂರ್ಣಗೊಂಡಿದೆ. ಸುಮಾರು 1,385 ಕೋಟಿ ರೂ.ಗಳ ಈ ಯೋಜನೆಗೆ ಸದ್ಯ ರಕ್ಷಣೆ ಕುರಿತ ಸಂಪುಟ ಸಮಿತಿಯ ಒಪ್ಪಿಗೆಯಷ್ಟೇ ಬಾಕಿಯಿದೆ. ಹೀಗಾಗಿ, ಈ ಸಂಪುಟ ಸಮಿತಿಯಿಂದ ಆದಷ್ಟು ಬೇಗ ಒಪ್ಪಿಗೆ ಪಡೆದು ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ ಯೋಜನೆಯನ್ನು ಕಾರ್ಯಗತಗೊಳಿಸುವುದಕ್ಕೆ ಎಲ್ಲ ರೀತಿಯ ಸಹಕಾರ ನೀಡುವಂತೆ ಚೌಟ ಅವರು ಇದೇ ಸಂದರ್ಭ ರಾಜೇಶ್ ಕುಮಾರ್ ಸಿಂಗ್ ಅವರಲ್ಲಿ ಮನವಿ ಮಾಡಿದ್ದಾರೆ.

ರಕ್ಷಣಾ ಕಾರ್ಯದರ್ಶಿಗಳು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಶ್ವದರ್ಜೆಯ ಕೋಸ್ಟ್ ಗಾರ್ಡ್ ಅಕಾಡೆಮಿಯು ಭಾರತದಲ್ಲಿ ಅದರಲ್ಲೂ ನಮ್ಮ ಮಂಗಳೂರಿನಲ್ಲಿ ಸ್ಥಾಪನೆಯಾಗುತ್ತಿರುವುದು ನಮಗೆ ಬಹಳ ಹೆಮ್ಮಯ ಸಂಗತಿ. ನಮ್ಮ ದೇಶದ ಈ ಮೊತ್ತ ಮೊದಲ ಅಕಾಡೆಮಿ ಸ್ಥಾಪನೆಯಾದ ಬಳಿಕ ತಟ ರಕ್ಷಣಾ ಪಡೆಗೆ ಸೇರುವ ದೇಶದೆಲ್ಲೆಡೆಯ ಯುವಜನರಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಕಡಲ ನಿರ್ವಹಣೆ, ರಕ್ಷಣೆಗೆ ಸಂಬಂಧಿಸಿದ ಕೆಲವೊಂದು ಅತ್ಯಾಧುನಿಕ ತರಬೇತಿಯನ್ನು ವಿದೇಶದಲ್ಲಿ ಪಡೆಯಲಾಗುತ್ತಿದ್ದು, ಮಂಗಳೂರಿನಲ್ಲಿ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆಯಾದರೆ ಮೆರಟೈಮ್ ಕ್ಷೇತ್ರದಲ್ಲಿ ಹೊರದೇಶಗಳ ಅವಲಂಬನೆ ತಪ್ಪಲಿದೆ. ಅಷ್ಟೇಅಲ್ಲದೆ, ಅರಬಿ ಸಮುದ್ರ ಮತ್ತು ಕರಾವಳಿಯ ಭದ್ರತೆಗೂ ಇದು ಪೂರಕ. ನಮ್ಮ ಕರಾವಳಿಯ ಆರ್ಥಿಕ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡಬಲ್ಲುದು ಎಂದು ಹೇಳಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X