Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಡಿಪು: 'ಎಂಟರಿಂದ ಹತ್ತು ಹೀಗಿತ್ತು'...

ಮುಡಿಪು: 'ಎಂಟರಿಂದ ಹತ್ತು ಹೀಗಿತ್ತು' ಕಾರ್ಯಕ್ರಮದಲ್ಲಿ ಜೊತೆಯಾದ ಹಳೆ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ1 April 2025 5:18 PM IST
share
ಮುಡಿಪು: ಎಂಟರಿಂದ ಹತ್ತು ಹೀಗಿತ್ತು ಕಾರ್ಯಕ್ರಮದಲ್ಲಿ ಜೊತೆಯಾದ ಹಳೆ ವಿದ್ಯಾರ್ಥಿಗಳು

ಕೊಣಾಜೆ: 1987-90ರ ವರ್ಷದಲ್ಲಿ ಮುಡಿಪುವಿನ ಕುರ್ನಾಡು ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಯಿಂದ ಹತ್ತನೇ ತರಗತಿಯವರೆಗೆ ಒಟ್ಟಾಗಿ ಕಲಿತ ಆ ಎಲ್ಲಾ ಹಳೆಯ ವಿದ್ಯಾರ್ಥಿಗಳು, ʼಎಂಟರಿಂದ ಹತ್ತು.. ಹೀಗಿತ್ತು.." ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಖುಷಿಯ ಕ್ಷಣಗಳಿಗೆ ಜತೆಯಾದರು ಮತ್ತು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ 50ರ ಹರೆಯದ ಆಸುಪಾಸಿನವರು. ವಿಶೇಷ ಎಂದರೆ, ಇಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿ ರುವ, ಗೃಹಿಣಿಯರಾಗಿ ಸಂಸಾರ ಜವಾಬ್ದಾರಿ ಹೊತ್ತಿರುವ ಸುಮಾರು 25 ಮಂದಿ ಮಧ್ಯ ವಯಸ್ಕರು ಬಾಲಕ ಬಾಲಕಿಯರಾಗಿ ರಾರಾಜಿಸಿದರು. ಮೂರು ವರ್ಷಗಳ ಹೈಸ್ಕೂಲ್‌ ಜೀವನದಲ್ಲಿ ಒಟ್ಟಾಗಿ ಕಲಿತ ಅಷ್ಟೂ ಸಹಪಾಠಿಗಳು ಅದೇ ಶಿಕ್ಷಣ ಸಂಸ್ಥೆಯ ಕಿರು ಸಭಾಂಗಣದಲ್ಲಿ ಇಡೀ ದಿನ ಕಳೆ ದರು. ತಮ್ಮ ತುಂಟಾಟ, ಮುಗ್ಧತೆ, ರಸವತ್ತಾದ ಕ್ಷಣಗಳನ್ನು ಸ್ಮರಿಸಿ ಸಂತಸ ಪಟ್ಟರು.

ಹಳೆಯ ವಿದ್ಯಾರ್ಥಿಗಳ ಜೊತೆಗೆ ಅವರಿಗೆ ಕಲಿಸಿ, ಈಗ ನಿವೃತ್ತ ಜೀವನವನ್ನು ಕಳೆಯುತ್ತಿರುವ ಶಿಕ್ಷಕರೂ ತಮ್ಮ ಅಧ್ಯಾಪನ ವೃತ್ತಿಯ ನೆನಪುಗಳನ್ನು ಮೆಲುಕು ಹಾಕಿದರು. ಈ ವಿಶೇಷ ಕಾರ್ಯಕ್ರಮದಲ್ಲಿ "ಹೈಸ್ಕೂಲ್‌ ಫ್ರೆಂಡ್ಸ್‌ʼ ಜತೆ ಸೇರಿದರೆ, ಶಿಕ್ಷಕರಾಗಿದ್ದ ದೈಹಿಕ ಶಿಕ್ಷಕರಾದ‌ ಶೀನ ಶೆಟ್ಟಿ ಗಣಿತ ಶಿಕ್ಷಕರಾದ ಅಪ್ಪಣ್ಣ ನಾಯಕ್‌, ಗಣಿತ ಶಿಕ್ಷಕ ಜಯರಾಮ ಶೆಟ್ಟಿ, ಕನ್ನಡ ಸಮಾಜ ಶಿಕ್ಷಕ ಬಸವರಾಜ ಪಲ್ಲಕಿ, ಕನ್ನಡ ಶಿಕ್ಷಕಿ ಸುಮನಾ ಗಾಂವ್ಕರ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆರುಗು ತಂದರು.

ಈ ಅಪರೂಪದ ಕಾರ್ಯಕ್ರಮದಲ್ಲಿ ಶಿಕ್ಷಕರು, ಅಷ್ಟೂ ಹಳೆ ವಿದ್ಯಾರ್ಥಿಗಳು ಇನ್ನೂ ಜೀವನದಲ್ಲಿ ಸಾಧಿಸು ವಂತೆ ಹಾರೈಸಿದರು, ಜತೆಗೆ, ಬಾಲಕ-ಬಾಲಕಿಯರಂತಾಗಿದ್ದ 50ರ ಹರೆಯದ ಹಳೆಯ ವಿದ್ಯಾರ್ಥಿಗಳು ವಿಧೇಯರಾಗಿ ತಮ್ಮ ಪ್ರೀತಿಯ ಶಿಕ್ಷಕರ ಮಾತುಗಳನ್ನು ಆಲಿಸಿದರು.

ಜತೆಗೆ, ಆ ಎಲ್ಲಾ ಶಿಕ್ಷಕರು ತಮ್ಮ ಜೀವನದಲ್ಲಿ ಯಾವ ರೀತಿಯಲ್ಲಿ ಬದಲಾವಣೆ ತಂದರು, ಬೆತ್ತದ ರುಚಿ ತೋರಿಸಿ ತಮ್ಮನ್ನು ಯಾವ ರೀತಿಯ ತಿದ್ದಿ ತೀಡಿದರು, ಕಬ್ಬಿಣದ ಕಡಲೆಯಾದ ಗಣಿತವನ್ನು ಅದು ಹೇಗೆ ಸುಲಭ ಸಾಧ್ಯವಾಗಿಸಿದರು.. ಎಂಬುದನ್ನೆಲ್ಲಾ ಅಷ್ಟೂ ʼಬಾಲಕ-ಬಾಲಕಿʼಯರು ಹಂಚಿಕೊಂಡರು.

ಆ ಕಾಲದಲ್ಲಿ ಶಾಲಾ ಆರಂಭ ಗೀತೆಯಾಗಿದ್ದ "ಜ್ಯೋತಿ ಬೆಳಗಿ ಬರಲಿ, ಜ್ಞಾನದ ಜ್ಯೋತಿ ಬೆಳಗಿ ಬರಲಿ," ಎಂಬ ಹಾಡನ್ನು ಹಳೆಯ ವಿದ್ಯಾರ್ಥಿನಿಯರು ಹಾಡಿದರು.

ಬೆಂಗಳೂರು, ಮಂಗಳೂರು, ದುಬೈ, ಚೆನ್ನೈ ಮತ್ತಿತರ ಊರುಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ತತ್ಪರರಾಗಿರುವ ಈ ಎಲ್ಲಾ ಹಳೆಯ ವಿದ್ಯಾರ್ಥಿಗಳು "ಎಂಟರಿಂದ ಹತ್ತು.. ಹೀಗಿತ್ತು" ಎಂಬ ವಿಶೇಷ ಕಾರ್ಯಕ್ರಮಕ್ಕೆ ಬಂದು ಸ್ನೇಹ ಸಮ್ಮಿಲನಕ್ಕೆ ಸಾಕ್ಷಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X