Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರಿಹಾರ ಮಂಜೂರಾತಿಗೆ ವಿಳಂಬ ಸಲ್ಲದು:...

ಪರಿಹಾರ ಮಂಜೂರಾತಿಗೆ ವಿಳಂಬ ಸಲ್ಲದು: ಸ್ಪೀಕರ್ ಯು.ಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ2 April 2025 8:17 PM IST
share
ಪರಿಹಾರ ಮಂಜೂರಾತಿಗೆ ವಿಳಂಬ ಸಲ್ಲದು: ಸ್ಪೀಕರ್ ಯು.ಟಿ ಖಾದರ್

ಕೊಣಾಜೆ: ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದರು.

ಅವರು ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಉಳ್ಳಾಲ ತಾಲೂಕು ಮಟ್ಟದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ ಅನಾವೃಷ್ಟಿ ಕುರಿತು ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಮಳೆಹಾನಿ, ಮನೆಕುಸಿತ, ಕಾಡುಪ್ರಾಣಿಗಳ ದಾಳಿ ಸೇರಿದಂತೆ ವಿವಿಧ ಪ್ರಾಕೃತಿಕ ಘಟನೆಗಳು ಸಂಭವಿಸಿ ದಾಗ ಸಂತ್ರಸ್ತರಿಗೆ ಪರಿಹಾರ ನೀಡಲು ದಾಖಲೆಗಳ ಕೊರತೆಯ ನೆಪದಲ್ಲಿ ಪರಿಹಾರ ವಿಳಂಬಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದೆ. ಘಟನೆಗಳು ನಡೆದಿರುವುದು ವಾಸ್ತವ ಆಗಿದ್ದರೂ ಸಾರ್ವಜನಿ ಕರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಘಟನೆಗಳ ಬಗ್ಗೆ ಆಯಾಯ ಸ್ಥಳಗಳಿಗೆ ಭೇಟಿ ನೀಡಿ ದೃಢೀಕರಿಸಿ ಪರಿಹಾರವನ್ನು ತ್ವರಿತವಾಗಿ ವಿತರಿಸಬೇಕು ಅವರು ಕಟ್ಟುನಿಟ್ಟಾಗಿ ಸೂಚಿಸಿದರು

ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಂದಾಯ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಸಂಶಯದ ಮೇಲೆ ಜನರಿಗೆ ಪರಿಹಾರ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಸ್ಪೀಕರ್ ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಪಂಚಾಯತ್ ಡೋರ್ ನಂಬರ್ ದಾಖಲೆಗಳನ್ನು ಸಲ್ಲಿಸಿದ ನಂತರವೂ ವಾಸ ಯೋಗ್ಯ ಪ್ರಮಾಣ ಪತ್ರ ನೀಡಲು ಕೇಳುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ಷೇಪಿಸುತ್ತಿದ್ದಾರೆ. ಇದರಿಂದ ವಿದ್ಯುತ್ ಸಂಪರ್ಕ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಮನೆ ನಿರ್ಮಿಸಿದ ನಂತರ ಗ್ರಾಮ ಪಂಚಾಯತ್ ಸಿಸಿ ಪಡೆದು ವಿದ್ಯುತ್ ಸಂಪರ್ಕ ನೀಡುವಂತೆ ಅವರು ಸೂಚಿಸಿದರು.

ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ತಂಡ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳ ಬಗ್ಗೆ ಪರಸ್ಪರ ಆರೋಪಿಸುವ ಬದಲು ಅದರ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಅವರು ಸೂಚಿಸಿದರು.

ಲೋಕೋಪಯೋಗಿ ರಸ್ತೆಗಳ ಬದಿಗಳಲ್ಲಿ ತಾತ್ಕಲಿಕವಾಗಿ ಚಪ್ಪರ, ಶೀಟ್ ಹಾಕಿ ವ್ಯಾಪಾರ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಆದರೆ ತಳ್ಳುಗಾಡಿ ಅಥವಾ ಅಂದಂದೇ ಸರಕುಗಳನ್ನು ತಂದು ಹೋಗುವ ವ್ಯಾಪಾರಿಗಳಿಗೆ ತೊಂದರೆ ಕೊಡದಂತೆ ಅವರು ಪಿ.ಡಬ್ಲ್ಯು.ಡಿ ಅಧಿಕಾರಿಗಳಿಗೆ ಸೂಚಿಸಿದರು.

ಐದು ವರ್ಷಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಈ ತಿಂಗಳಲ್ಲಿ ಆರಂಭವಾಗಲಿದ್ದು, ಎಲ್ಲಾ ಪ್ರಮುಖ ರಸ್ತೆಗಳನ್ನು ಸುಸಜ್ಜಿತಗೊಳಿಸಬೇಕು. ದೇಶದ ವಿವಿಧ ಕಡೆಗಳಿಂದ ಭಕ್ತಾದಿಗಳು ಬರುವುದರಿಂದ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ತೊಕ್ಕೊಟ್ಟು - ಮುಡಿಪು ರಸ್ತೆಯ ಚತುಷ್ಪಥ ಕಾಮಗಾರಿ ಮುಗಿದ ನಂತರ ಚರಂಡಿ, ಫುಟ್‍ಪಾತ್ ಮತ್ತಿ ತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಸಜಿಪ-ತುಂಬೆ ನಡುವೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಕೈಗೆತ್ತಿಕೊಳ್ಳಲು ಯು.ಟಿ. ಖಾದರ್ ಅಧಿಕಾರಿಗೆ ಸೂಚಿಸಿದರು.

ಕುಡಿಯುವ ನೀರಿನ ಯೋಜನೆಗಳನ್ನು ಭವಿಷ್ಯದ 30 ವರ್ಷಗಳ ಜನಸಂಖ್ಯೆಯ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು. ಯಾವುದೇ ಕುಡಿಯುವ ನೀರಿನ ಯೋಜನೆಯಲ್ಲಿ ಮನೆ ಮನೆಗೆ ನಳ್ಳಿ ನೀರಿನ ಸಂಪರ್ಕ ನೀಡಲು ಸಾರ್ವಜನಿಕರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಸ್ಪೀಕರ್ ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್‍ಲೈನ್ ಅಳವಡಿಕೆ ಮತ್ತು ಟ್ಯಾಂಕ್ ನಿರ್ಮಾಣ ಕಾಮಗಾರಿಯಲ್ಲಿ ಕಂಡು ಬಂದಿರುವ ಎಲ್ಲಾ ಸಮಸ್ಯೆಗೆ ಮುಂದಿನ 15 ದಿನಗಳೊಳಗೆ ಅಧಿಕಾರಿಗಳು ಗ್ರಾಮ ಪಂಚಾಯತ್‍ಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಅವರು ಗ್ರಾಮೀಣ ಕುಡಿ ಯುವ ನೀರಿನ ಅಧಿಕಾರಿಗಳಿಗೆ ಸೂಚಿಸಿದರು.

ಮುಂಬರುವ ಮಳೆಗಾಲದಲ್ಲಿ ಸಂಭವನೀಯ ಗುಡ್ಡ ಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ನದಿತೀರ ಮುಳುಗಡೆ ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿಧಾನ ಸಭೆ ಸ್ಪೀಕರ್ ಸೂಚಿಸಿದರು.

ಗ್ರಾಮ ಪಂಚಾಯತ್‍ಗಳು ಬೀದಿ ನಾಯಿಗಳ ಸಮೀಕ್ಷೆ ಮಾಡಿ ಅವುಗಳ ನಿರ್ವಹಣೆಗೆ ಪ್ರತ್ಯೇಕ ನಿಧಿ ಮೀಸಲಿಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ತೆರವುಗೊಳಿಸಬೇಕು. ಮಳೆಗಾಲದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸ ಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಳ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ, ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು, ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಒಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X