Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ: ದೋಷಪೂರಿತ ಲ್ಯಾಪ್‌ಟಾಪ್‌;...

ಕೊಣಾಜೆ: ದೋಷಪೂರಿತ ಲ್ಯಾಪ್‌ಟಾಪ್‌; ಬಡ್ಡಿ ಸಹಿತ ಖರೀದಿ ಮೌಲ್ಯ, ವ್ಯಾಜ್ಯ ಮೊತ್ತ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ4 April 2025 5:34 PM IST
share
ಕೊಣಾಜೆ: ದೋಷಪೂರಿತ ಲ್ಯಾಪ್‌ಟಾಪ್‌; ಬಡ್ಡಿ ಸಹಿತ ಖರೀದಿ ಮೌಲ್ಯ, ವ್ಯಾಜ್ಯ ಮೊತ್ತ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

ಕೊಣಾಜೆ: ವೈದ್ಯರೊಬ್ಬರು ಖರೀದಿಸಿದ ಲ್ಯಾಪ್‌ಟಾಪ್‌ನಲ್ಲಿ ದೋಷ ಕಂಡುಬಂದರೂ ಸೂಕ್ತವಾಗಿ ಸ್ಪಂದಿಸದ ಲ್ಯಾಪ್‌ಟಾಪ್‌ ತಯಾರಿ ಕಂಪನಿಗೆ ಉತ್ಪನ್ನದ ಖರೀದಿ ಮೌಲ್ಯವನ್ನು ಶೇ.6ರ ಬಡ್ಡಿದರ ಸಹಿತ 45 ದಿನಗಳೊಳಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.

ತಪ್ಪಿದಲ್ಲಿ ಕಂಪನಿ ಮೇಲೆ ಸಿವಿಲ್‌ ಮತ್ತು ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಉಳ್ಳಾಲ ತಾಲೂಕು ಮುಡಿಪಿನ ವೈದ್ಯ ಡಾ.ಅರುಣ್‌ ಪ್ರಸಾದ್‌ ಏಸುಸ್‌ ಕಂಪನಿಯ 1,09,990 ರೂ. ಮೌಲ್ಯದ ಲ್ಯಾಪ್‌ಟಾಪ್‌ ಖರೀದಿಸಿದ್ದರು. ಇದಕ್ಕೆ ಒಂದು ವರ್ಷದ ವಾರಂಟಿ ಜೊತೆಗೆ ರೂ. 3498 ಮೌಲ್ಯದ ಎಕ್ಸ್‌ಟೆಂಡೆಡ್‌ ವಾರಂಟಿ ಪಡೆದಿದ್ದರು. ಖರೀದಿಸಿದ 6 ತಿಂಗಳಿನೊಳಗೆ ಲ್ಯಾಪ್‌ಟಾಪ್‌ನಲ್ಲಿ ನಿರಂತರ ತಾಂತ್ರಿಕ ದೋಷ, ಎಲ್‌ಸಿಡಿ ಮಾನಿಟರ್‌ ಗಾಜು ಒಡೆಯುವುದು ಮತ್ತಿತರ ಸಮಸ್ಯೆಗಳು ಕಂಡುಬಂದವು. ಸಂಬಂಧಿಸಿದ ಸಂಸ್ಥೆಯವರಿಗೆ ದೂರವಾಣಿ, ಇಮೇಲ್‌, ಟ್ವೀಟ್‌ ಮತ್ತಿತರ ಮಾಧ್ಯಮಗಳ ಮೂಲಕ ಸಾಕಷ್ಟು ಬಾರಿ ದೂರು ಸಲ್ಲಿಸಿದರು. ಆದರೂ, ಲ್ಯಾಪ್‌ಟಾಪ್‌ ರಿಪೇರಿ, ಖರೀದಿಸಿದ ಮೌಲ್ಯ ಹಿಂತಿರುಗಿಸಲು ಕಂಪನಿ ಮುಂದಾಗಲಿಲ್ಲ.

ದೂರುದಾರರ ಟ್ವಿಟ್ಟರ್ ಅಕೌಂಟ್‌ನ್ನು ಕಂಪನಿ ಬ್ಲಾಕ್ ಮಾಡಿತು. ಇದರಿಂದ ರೋಸಿದ ವೈದ್ಯ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೊರೆ ಹೋದರು. ದೂರುದಾರರು ಮತ್ತು ಪ್ರತಿವಾದಿಗಳ ಸಾಕ್ಷಿ ವಿಚಾರಣೆ ನಂತರ ವಾದ ಆಲಿಸಿದ ಗ್ರಾಹಕ ನ್ಯಾಯಾಲಯ ಸದ್ರಿ ಲ್ಯಾಪ್‌ಟಾಪ್‌ನಲ್ಲಿ ತಯಾರಿಕಾ ದೋಷ ಇದೆ ಎಂಬ ದೂರುದಾರರ ವಾದ ಎತ್ತಿ ಹಿಡಿದಿದೆ. ಲ್ಯಾಪ್‌ಟಾಪ್‌ ಖರೀದಿಸಿದ ಮೌಲ್ಯ1,09,990 ರೂ. ಮತ್ತು ಶೇ.6ರ ಬಡ್ಡಿ ದರದಲ್ಲಿ 45 ದಿನಗಳೊಳಗಾಗಿ ಹಿಂತಿರುಗಿಸುವಂತೆ ಆದೇಶ ನೀಡಿದೆ. ಪ್ರತಿವಾದಿಗಳು ದೂರುದಾರರಿಗೆ ಸೇವಾ ನ್ಯೂನತೆ, ಮಾನಸಿಕ ತೊಂದರೆಗಾಗಿ 30 ಸಾವಿರ ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10 ಸಾವಿರ ರು.ನೀಡಲು ಆದೇಶ ನೀಡಿದೆ. ತಪ್ಪಿದಲ್ಲಿ ಕಂಪನಿಯ ಮೇಲೆ ಸಿವಿಲ್‌ ಮತ್ತು ಕ್ರಿಮಿನಲ್ ಮುಖದ್ದಮೆ ದಾಖಲಿಸುವಂತೆ ನ್ಯಾಯಾಲಯವು ಸೂಚಿಸಿದೆ. ದೂರುದಾರರ ಪರವಾಗಿ ಮಂಗಳೂರಿನ ಅಪೆಕ್ಸ್ ಜ್ಯೂರಿಸ್ ನ್ಯಾಯವಾದಿ ಅರವಿಂದ ವಿ. ವಾದಿಸಿದರು. ಸುಳ್ಯದ ಶಾಂತಿ ಇನ್ಫೋಟೆಕ್‌ನ ಪ್ರಶಾಂತ ಎಸ್‌ಟಿ ತಜ್ಞರ ಅಭಿಮತ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X