Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಕ್ಫ್ ತಿದ್ದುಪಡಿ ಮಸೂದೆಗೆ ತೀವ್ರ...

ವಕ್ಫ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ: ಎಸ್‌ಐಒ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 April 2025 6:01 PM IST
share
ವಕ್ಫ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ: ಎಸ್‌ಐಒ ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದು ತಿದ್ದುಪಡಿ ಮಸೂದೆಯ ವಿರುದ್ಧ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ದಕ್ಷಿಣ ಕನ್ನಡ ಜಿಲ್ಲೆ ಘಟಕದ ನೇತೃತ್ವದಲ್ಲಿ ಶನಿವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ವಿವಿಧ ಸಾಮಾಜಿಕ ಮುಖಂಡರು ಹಾಗೂ ಸಂಘಟನೆಯ ಮುಖಂಡರು ಪಾಲ್ಗೊಂಡು, ಈ ವಿಧೇಯಕವು ಸಂವಿಧಾನ ಪರ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಸುವುದೆಂದು ಇದರ ಉದ್ದೇಶವಾಗಿದೆ ಆರೋಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಇಕ್ರಾ ಅರಬಿಕ್ ಇನ್‌ಸ್ಟಿಟ್ಯೂಟ್‌ನ ಪ್ರಾಂಶುಪಾಲ ಫರ್ಹಾನ್ ನದ್ವಿ ಅವರು, ‘‘ನಮ್ಮ ಪೂರ್ವಜರು ಅಲ್ಲಾಹನನ್ನು ಸಂತೃಪ್ತಪಡೆಸಲು, ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನು ಆಗಿದೆ ವಕ್ಫ್ . ವಕ್ಫ್‌ಗೆ ಸೇರಿರುವ ಜವೀನುಗಳು ಯಾರಿಂದಲೋ ಕಬಲಿಸಿದ ಜಮೀನಲ್ಲ ಅಲ್ಲ. ಯಾರಿಂದಲೋ ಕಬಲಿಸಿದ ಜಮೀನು ವಕ್ಫ್ ಆಗಲು ಸಾಧ್ಯವೂ ಇಲ್ಲ. ಧರ್ಮ ಗೋಡೆ ಯನ್ನು ಬದಿಯಲಿಟ್ಟು ಎಲ್ಲಾ ಭಾರತೀಯರು ನಮ್ಮ ಜೊತೆ ಕೈ ಜೋಡಿಸಬೇಕೆಂದು ನಾವು ಕೇಳುತ್ತೇವೆ. ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲಾ ಶೋಷಿತ ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಯಾಗಿ ಗುರಿಯಾಗುತ್ತವೆ ’’ ಎಂದು ಹೇಳಿದರು.

ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫಿಉದ್ದೀನ್ ಕುದ್ರೋಳಿ ಅವರು, ‘‘ನಮ್ಮ ಹೋರಾಟ ಹಿಂದೂ-ಮುಸ್ಲಿಂ ಹೋರಾಟವಲ್ಲ. ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರು ವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ. ಈ ಮಸೂದೆ ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಲಿಸುವ ಯತ್ನವಾಗಿದೆ,’’ ಎಂದು ನುಡಿದರು.

ಮಾಜಿ ಮೇಯರ್ ಅಶ್ರಫ್ ಅವರು , ‘‘ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ಈ ರೀತಿಯ ಕ್ರಮಗಳು ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿದೆ. ನಾವು ಇದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಈ ಮಸೂದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ಮಂಗಳೂರಿನಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ ’’ ಎಂದು ಎಚ್ಚರಿಕೆ ನೀಡಿದರು.

ಎಸ್‌ಐಒ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಸಿಫ್ ಡಿ.ಕೆ. ಮಾತನಾಡಿ ‘‘ಇದು ಕೇವಲ ಕಾನೂನು ಪ್ರಶ್ನೆ ಯಲ್ಲ. ಇದು ಮುಸ್ಲಿಮರ ಆಸ್ತಿಗಳ ಮೇಲೆ ಕಣ್ಣಿಟ್ಟು ನಮ್ಮ ಅಸ್ತಿತ್ವದ ಮೇಲೆ ದಾಳಿ ಮಾಡುವ ಪ್ರಯತ್ನ. ವಖ್ಫ್ ಬೋರ್ಡ್ ನಲ್ಲಿ ಮುಸ್ಲಿಮೇತರರಿಗೆ ಏನು ಕೆಲಸ? ಮುಸ್ಲಿಮರ ಸಾಂವಿಧಾನಿಕ ಹಕ್ಕನ್ನು ಪಡೆದು ಕೊಳ್ಳುವುದಕ್ಕೆ ಎಲ್ಲಾ ಸಂಘಟನೆ ಗಳನ್ನು ಒಟ್ಟು ಸೇರಿಸಿ ಎಸ್‌ಐಒ ಪ್ರತಿಭಟನೆಯನ್ನು ಮುಂದುವರಿ ಸಲಿದೆ’’ ಎಂದರು.

ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಮಾತನಾಡಿ, ‘‘ಈ ಹಿಂದೆ ವಕ್ಫ್ ಕಾನೂನಿಗೆ ತಂದ ತಿದ್ದು ಪಡಿಗಳಿಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿರಲಿಲ್ಲ. ಆದರೆ ಇದೀಗ ಮುಸ್ಲಿಮರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ನಡೆಯುತ್ತಿದೆ. ಮಡಿಲ ಮಾಧ್ಯಮಗಳು ಅದಕ್ಕೆ ಬೆಂಬಲ ನೀಡುತ್ತಿದೆ. ಇದು ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ,’’ ಎಂದು ಹೇಳಿದರು.

ಸಾಲಿಡಾರಿಟಿ ಯೂಥ್ ಮೂಮೆಂಟ್‌ನ ಜಿಲ್ಲಾ ಅಧ್ಯಕ್ಷ ಅಸ್ಲಂ ಉಪ್ಪಿನಂಗಡಿ ಅವರು, ‘‘ ಈ ವಿಧೇಯಕವು ದೇಶದ ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ತಿರುಗಿಸಲು ಸರಕಾರದ ಯತ್ನವಾಗಿದೆ. ಅಲ್ಪಸಂಖ್ಯಾತರ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವುದಾದರೆ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದರೆ ವಿಜಯವು ನಿಶ್ಚಿತವಾಗಿದೆ. ನಾವು ಶಾಂತಿಯುತ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಈ ಹೋರಾಟವನ್ನು ಮುಂದುವರಿ ಸುತ್ತೇವೆ,’’ ಎಂದು ಹೇಳಿದರು.

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರಾಧ್ಯಕ್ಷ ಕೆ ಎಂ ಅಶ್ರಫ್ ಅವರು, ‘‘ಬಹುಸಂಸ್ಕೃತಿ ಹೊಂದಿರುವ ದೇಶಗಳಲ್ಲಿ ಕಂಡುಬರುವ ಪ್ರಗತಿ ಏಕಸಂಸ್ಕೃತಿ ದೇಶಗಳಲ್ಲಿಲ್ಲ. ಇಂದಿನ ಸರಕಾರ ದಲ್ಲಿರುವ ಪಕ್ಷ ಮತ್ತು ಅದರ ಮಾತೃ ಸಂಘಟನೆ ಭಾರತದ ಬಹುಸಂಸ್ಕೃತಿಗೆ ವಿರುದ್ಧವಾಗಿದೆ. ಒಂದು ಸಮುದಾಯವನ್ನು ವೈರಿಗಳಂತೆ ಮಾಡಿ ಅವರನ್ನು ಗುರಿಯಾಗಿಸಿ ಸರಕಾರ ಕಾನೂನು ತರುತ್ತಿವೆ. ಮುಸ್ಲಿಮರಿಗೆ ತಮ್ಮ ಧರ್ಮದನುಸಾರ ನಡೆದುಕೊಳ್ಳುವ ಅಧಿಕಾರವನ್ನು ಸಂವಿಧಾನ ನೀಡಿದೆ. ಈ ವಕ್ಫ್ ಮಸೂದೆಯು ಆ ಅಧಿಕಾರಗಳಿಗೆ ವಿರುದ್ಧವಾಗಿದೆ,’’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X