Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಯುಸಿ ಫಲಿತಾಂಶ: ದ್ವಿತೀಯ...

ಪಿಯುಸಿ ಫಲಿತಾಂಶ: ದ್ವಿತೀಯ ಸ್ಥಾನಕ್ಕಿಳಿದ ದ.ಕ. ಜಿಲ್ಲೆ; ವಾಣಿಜ್ಯ, ವಿಜ್ಞಾನದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ8 April 2025 6:08 PM IST
share
ಪಿಯುಸಿ ಫಲಿತಾಂಶ: ದ್ವಿತೀಯ ಸ್ಥಾನಕ್ಕಿಳಿದ ದ.ಕ. ಜಿಲ್ಲೆ; ವಾಣಿಜ್ಯ, ವಿಜ್ಞಾನದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್

ಮಂಗಳೂರು, ಎ.8: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಳೆದ ಐದು ವರ್ಷಗಳಿಂದ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿರುವ ದ.ಕ. ಜಿಲ್ಲೆ ಈ ಬಾರಿ ಶೇ. 93.57 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಇದೇ ವೇಳೆ ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ತಲಾ 599 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ದಾಖಲಿಸಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ಕಳೆದ ಬಾರಿ ಪ್ರಥಮ ಸ್ಥಾನ ಪಡೆದಿದ್ದ ದ.ಕ. ಜಿಲ್ಲೆ, ಶೇ. 97.37 ಫಲಿತಾಂಶ ದಾಖಲಿಸಿತ್ತು. ಈ ಬಾರಿ ಪ್ರಥಮ ಸ್ಥಾನ ಪಡೆದಿರುವ ನೆರೆಯ ಉಡುಪಿ ಜಿಲ್ಲೆ ಶೇ. 93.90 ಫಲಿತಾಂಶ ವನ್ನು ದಾಖಲಿಸಿಕೊಂಡಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಗೆ ದ.ಕ. ಜಿಲ್ಲೆಯಿಂದ ಒಟ್ಟು 36043 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 32903 ಮಂದಿ ಉತ್ತೀರ್ಣರಾಗಿದ್ದಾರೆ. ಪ್ರಥಮ ಬಾರಿಗೆ ಪರೀಕ್ಷೆ ಬರೆದ 34186 ಅಭ್ಯರ್ಥಿಗಳಲ್ಲಿ 31989 ಮಂದಿ ಉತ್ತೀರ್ಣರಾಗದ್ದಿು, ಖಾಸಗಿಯಾಗಿ 1556 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ 833 ಮಂದಿ ಉತ್ತೀರ್ಣರಾಗಿದ್ದಾರೆ. ಇದೇ ವೇಳೆ ಪ್ರಸಕ್ತ ಸಾಲಿನಲ್ಲಿ 301 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 81 ಮಂದಿ ಉತ್ತೀರ್ಣರಾಗಿದ್ದಾರೆ.

ಬಾಲಕಿಯರದ್ದೇ ಮೇಲುಗೈ

ದ.ಕ. ಜಿಲ್ಲೆಯಲ್ಲಿ ಒಟ್ಟು 17852 ಪುರುಷ ಅಭ್ಯರ್ಥಿಗಳಲ್ಲಿ 15852 ಮಂದಿ ಉತ್ತೀರ್ಣರಾಗಿ ಶೇ. 88.8 ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದ 18191 ವಿದ್ಯಾರ್ಥಿನಿಯರಲ್ಲಿ 17051 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಶೇ. 93.73 ಫಲಿತಾಂಶ ದಾಖಲಾಗುವ ಮೂಲಕ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಆಂಗ್ಲ ಮಾಧ್ಯಮದಲ್ಲಿ 32195 ಮಂದಿ ಪರೀಕ್ಷೆ ಬರೆದಿದ್ದು, 29950 ಮಂದಿ ಉತ್ತೀರ್ಣರಾಗಿ ಶೇ. 93.03 ಫಲಿತಾಂಶ ದಾಖಲಾಗಿದೆ. ಕನ್ನಡ ಮಾಧ್ಯಮದಲ್ಲಿ 3848 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ 2953 ಮಂದಿ ಉತ್ತೀರ್ಣರಾಗಿ ಶೇ. 76.74 ಫಲಿತಾಂಶ ದಾಖಲಾಗಿದೆ.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 2265 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 2000 ಮಂದಿ ಉತ್ತೀರ್ಣರಾಗಿ ಶೇ. 88.3 ಫಲಿತಾಂಶ ದಾಖಲಾಗಿದೆ. ಪರಿಶಿಷ್ಟ ಪಂಗಡದ 1354 ಅಭ್ಯರ್ಥಿಗಳಲ್ಲಿ 1224 ಮಂದಿ ಉತ್ತೀರ್ಣರಾಗಿ ಶೇ. 90.4 ಫಲಿತಾಂಶ ದಾಖಲಾಗಿದೆ.

ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿರುವ ಜತೆಗೆ ಶೇಕಡಾವಾರು ಫಲಿತಾಂಶದಲ್ಲಿಯೂ ಅಗ್ರಸ್ಥಾನವನ್ನು ವಿಜ್ಞಾನ ವಿಭಾಗ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 17598 ವಿದ್ಯಾರ್ಥಿಗಳಲ್ಲಿ 16869 ಮಂದಿ ಉತ್ತೀರ್ಣರಾಗಿ ಶೇ. 95.86 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 14510 ಮಂದಿಯಲ್ಲಿ 12852 ಮಂದಿ ಉತ್ತೀರ್ಣರಾಗಿ ಶೇ. 88.57 ಫಲಿತಾಂಶ ದೊರಕಿದೆ.

ಕಲಾ ವಿಭಾಗದಲ್ಲಿ 3935 ಮಂದಿ ಪರೀಕ್ಷೆ ಬರೆದಿದ್ದು, 3182 ಉತ್ತೀರ್ಣರಾಗಿದ್ದು, ಶೇ. 80.86 ಫಲಿತಾಂಶ ದೊರಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X