Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ಯೆ ಉಂಟಾದಾಗ ಮಾತುಕತೆಯ ಮೂಲಕ...

ಸಮಸ್ಯೆ ಉಂಟಾದಾಗ ಮಾತುಕತೆಯ ಮೂಲಕ ಪರಿಹರಿಸಿ: ಪ್ರಸನ್ನ ಎಂ.ಎಸ್

ಕನ್ನಂಗಾರ್ ಉರೂಸ್‍ ವತಿಯಿಂದ ಸೌಹಾರ್ದ ಸಂಗಮ

ವಾರ್ತಾಭಾರತಿವಾರ್ತಾಭಾರತಿ13 April 2025 6:15 PM IST
share
ಸಮಸ್ಯೆ ಉಂಟಾದಾಗ ಮಾತುಕತೆಯ ಮೂಲಕ ಪರಿಹರಿಸಿ: ಪ್ರಸನ್ನ ಎಂ.ಎಸ್

ಪಡುಬಿದ್ರಿ: ಯಾವುದೇ ಸಮಸ್ಯೆಗಳು ಉಂಟಾದಾಗ ಸಂಘರ್ಷಗಳಿಗೆ ಅವಕಾಶ ನೀಡಿದೆ ಊರಿನ ಹಿರಿಯರು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು. ಈ ಮೂಲಕ ಬಲಿಷ್ಠ ಸಮಾಜ ನಿರ್ಮಾಣ ವಾದಲ್ಲಿ ಸೌಹಾರ್ದತೆಯ ಭಾರತವೂ ನಿರ್ಮಾಣವಾಗುತ್ತದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಕರೆ ನೀಡಿದರು.

ಅವರು ಹೆಜಮಾಡಿಯ ಕನ್ನಂಗಾರ್ ಜುಮ್ಮಾ ಮಸೀದಿಯ ಮುಂಭಾಗದಲ್ಲಿರುವ ಶೈಖುನಾ ಸಿರಾಜುದ್ದೀನ್ ವಲಿಯುಲ್ಲಾಹಿ ದರ್ಗಾ ಶರೀಫ್ ಕನ್ನಂಗಾರ್ ಉರೂಸ್ ಸಮಾರಂಭದ ಪ್ರಯುಕ್ತ ರವಿವಾರ ಆಯೋಜಿಸಿದ ಸೌಹಾರ್ದ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜುಮಾ ಮಸೀದಿ ಮುದರ್ರಿಸ್ ಅಶ್ರಫ್ ಸಖಾಫಿ ಕಿನ್ಯ ಮಾತನಾಡಿ, ಜಗತ್ತಿನ ಯಾವುದೇ ಧರ್ಮವೂ ಅಶಾಂತಿಯನ್ನು ಬಯಸದೆ ಪರಿಸ್ಪರ ಶಾಂತಿ, ಸೌಹಾರ್ದತೆಯ ಬದುಕು ನಡೆಸಲು ಬೋಧಿಸಿದೆ. ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳಿಂದಾಗಿ ಇಂದು ಮನುಷ್ಯರು ಪರಸ್ಪರ ಅಪನಂಬಿಕೆಯಿಂದ ಬದುಕುವಂತಹ ಸನ್ನಿವೇಶ ನಿರ್ಮಾಣವಾಗಿದೆ. ಇದನ್ನು ದೂರ ಮಾಡುವ ಮೂಲಕ ಸೌಹಾರ್ದತೆಯ ನಾಡನ್ನು ಕಟ್ಟಬೇಕಾಗಿದೆ ಎಂದು ಕರೆ ನೀಡಿದರು.

ಇದೇ ಸಂದರ್ಭ ಮುಖ್ಯಮಂತ್ರಿ ಪದಕ ಸ್ವೀಕರಿಸಿದ ಪಡುಬಿದ್ರಿ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರನ್ನು ಸನ್ಮಾನಿಸಲಾಯಿತು.

ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್‍ ಚಂದ್ರ ಜೆ. ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ದಲಿತ ಮುಖಂಡ ಶೇಖರ್ ಹೆಜಮಾಡಿ, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ರೋಲ್ಫಿ ಡಿಕೋಸ್ತ, ಉಡುಪಿ ಜಿಲ್ಲಾ ಮೀನುಗಾರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ಅಮೀನ್, ಕನ್ನಂಗಾರ್ ಜುಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ದಯಾನಂದ, ಕಾಂಗ್ರೆಸ್ ಮುಖಂಡ ಅಬ್ದುಲ್ ಅಝೀಝ್ ಹೆಜಮಾಡಿ, ಹೆಜಮಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಪಾಂಡುರಂಗ ಕರ್ಕೇರ, ಶರಣ್ ಮಟ್ಟು, ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ಮಯ್ಯದ್ದಿ, ಕನ್ನಂಗಾರ್ ಜುಮಾ ಮಸೀದಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಮಿಲಾಫ್ ಉಪಸ್ಥಿತರಿದ್ದರು.

ಉರೂಸ್ ಸಮಿತಿ ಕಾರ್ಯದರ್ಶಿ ರಕೀಬ್ ಕನ್ನಂಗಾರ್ ಕಾರ್ಯಕ್ರಮ ನಿರೂಪಿಸಿದರು.

ರಕ್ತದಾನ ಶಿಬಿರ: ಇದೇ ಸಂದರ್ಭ ಶ್ರೀನಿವಾಸ ಆಸ್ಪತ್ರೆ ಸುರತ್ಕಲ್ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ 75 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ವೈದ್ಯಕೀಯ ಶಿಬಿರ: ವೈದ್ಯಕೀಯ ಶಿಬಿರದಲ್ಲಿ 300ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ಕಣ್ಣಿನ ತಪಾಸಣೆ ಸಹಿತ ವಿವಿಧ ವಿಭಾಗಗಳಲ್ಲಿ ತಪಾಸಣೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X