Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಪಕ್ಷಿಕೆರೆ’ಯಲ್ಲಿ ಸಮೃದ್ಧಗೊಂಡ ಕೊಳವೀಗ...

‘ಪಕ್ಷಿಕೆರೆ’ಯಲ್ಲಿ ಸಮೃದ್ಧಗೊಂಡ ಕೊಳವೀಗ ಪ್ರಾಣಿ ಪಕ್ಷಿಗಳ ಆಶ್ರಯ ತಾಣ

ವಾರ್ತಾಭಾರತಿವಾರ್ತಾಭಾರತಿ14 April 2025 7:27 PM IST
share
‘ಪಕ್ಷಿಕೆರೆ’ಯಲ್ಲಿ ಸಮೃದ್ಧಗೊಂಡ ಕೊಳವೀಗ ಪ್ರಾಣಿ ಪಕ್ಷಿಗಳ ಆಶ್ರಯ ತಾಣ

ಮಂಗಳೂರು, ಎ. 14: ಸಾರ್ವಜನಿಕರ ಸಹಭಾಗಿತ್ವದಲ್ಲಿ ನೈಸರ್ಗಿಕವಾಗಿ ಅಭಿವೃದ್ಧಿಪಡಿಸಲಾದ ಪಕ್ಷಿಕೆರೆಯ ಕೊಳ ಬಿರು ಬೇಸಿಗೆಯಲ್ಲಿಯೂ ಸುತ್ತಮುತ್ತಲೂ ಹಚ್ಚ ಹಸಿರಿನೊಂದಿಗೆ ಪ್ರಾಣಿ ಪಕ್ಷಿಗಳಿಗೆ ಭರಪೂರ ನೀರೊದಗಿಸುವ, ಆಶ್ರಯ ತಾಣವಾಗಿಯೂ ಮಾರ್ಪಟ್ಟಿದೆ.

ನಗರದ ಹೊರವಲಯದ ಕೆಮ್ರಾಲ್ ಗ್ರಾ.ಪಂನ ಪಕ್ಷಿಕೆರೆ ಗ್ರಾಮದ ಸರಕಾರಿ ಕೆರೆಯನ್ನು ಪೇಪರ್ ಸೀಡ್ ಸಂಸ್ಥೆಯು ಸ್ಥಳೀಯರ ಸಹಕಾರದೊಂದಿಗೆ ಹೂಳೆತ್ತಿ ಶುಚಿಗೊಳಿಸಿ ಕೊಳದ ಸುತ್ತ ಗಿಡಗಳನ್ನು ನೆಟ್ಟು ಪೋಷಿಸಿದ್ದರು. ಬೇಸಿಗೆಯಲ್ಲೂ ಅಲ್ಪಸ್ವಲ್ಪ ನೀರಿನಿಂದ ಕೂಡಿರುತ್ತಿದ್ದ ಕೊಳವೀಗ ತುಂಬಿದ್ದು, ಇಲ್ಲಿಗೆ ಹಿಂದಿಗಿಂದಲೂ ಹೆಚ್ಚಿನ ಸಂಖ್ಯೆಯ ಪ್ರಾಣಿ ಪಕ್ಷಿಗಳು ಬರಲಾರಂಭಿಸಿವೆ.

ಸುಮಾರು ಎರಡು ವರ್ಷಗಳ ಹಿಂದೆ ಯುವಜನರು ಸೇರಿದಂತೆ ಸ್ಥಳೀಯರಲ್ಲಿ ಪರಿಸರದ ಜಾಗೃತಿಗಾಗಿ ಪಚ್ಚನಾಡಿಯಿಂದ ಪಕ್ಷಿಕೆರೆಯ ಪೇಪರ್ ಸೀಡ್ ವಿಲೆಜ್‌ರೆಗೆ ಹಮ್ಮಿಕೊಳ್ಳಲಾಗಿದ್ದ ಕಾಲ್ನಡಿಗೆ ಜಾಥಾ ಸಂದರ್ಭ ಸ್ಥಳೀಯರು ಇಲ್ಲಿನ ‘ಪಕ್ಷಿ’ ಹಾಗೂ ‘ಕೆರೆ’ (ಕೊಳ)ಗಳನ್ನು ಉಳಿಸುವ ಬಗ್ಗೆ ಸ್ಥಳೀಯರು ಧ್ವನಿ ಎತ್ತಿದ್ದರು. ಈ ಮೂಲಕ ರೂಪುಗೊಂಡ ಯೋಜನೆಯಡಿ ಇಲ್ಲಿನ ‘ಕಾಟಿ ಪಳ್ಳ’ (ಕಾಡು ಎಮ್ಮೆಗಳು ನೀರು ಕುಡಿಯುತ್ತಿದ್ದ ಜಾಗ) ಎಂದು ಕರೆಯುವ ಕೊಳವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಸಲಾಗಿದ್ದು, ಅದಕ್ಕೆ ಪಕ್ಷಿಕೆರೆ ಎಂದೇ ಮರು ನಾಮಕರಣ ಮಾಡಲಾಗಿದೆ.

ಕೆಸರು ಮತ್ತು ಮಣ್ಣಿನಿಂದ ಹೂತು ಹೋಗಿದ್ದ ಕೊಳವನ್ನು ಅಗಲಗೊಳಿಸಿ ಹೂಳು ತೆಗೆದು, ಕೊಳಕ್ಕೆ ಹರಿದು ಬರುವ ಒಸರನ್ನು ಪತ್ತೆ ಹಚ್ಚಿ ಅದಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವ, ಎತ್ತರ ಪ್ರದೇಶಗಳಿಂದ ಆ ಕೊಳಕ್ಕೆ ಹೂಳು ತುಂಬದಂತೆ, ಪ್ರವಾಹ ನೀರು ಹರಿದು ಹೋಗಲು ಸೂಕ್ತ ವೈಜ್ಞಾನಿಕ ವ್ಯವಸ್ಥೆಯನ್ನು ಪ್ರಾಜೆಕ್ಟ್ ಪಕ್ಷಿಕೆರೆ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿತ್ತು.

ಇದೀಗ ಇಲ್ಲಿಗೆ ಮುಳ್ಳುಹಂದಿ, ಕಾಡು ಹಂದಿ, ಕಾಡುಬೆಕ್ಕು, ವಿವಿಧ ಜಾತಿಯ ಪಕ್ಷಿಗಳ ಜತೆಗೆ ಇತ್ತೀಚೆಗೆ ಜಿಂಕೆಯೊಂದು ನೀರು ಕುಡಿದಿರುವ ದೃಶ್ಯವೂ ಇಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಿರ್ಲಕ್ಷ ಒಳಗಾಗಿ ಕಟ್ಟಡ ತ್ಯಾಜ್ಯ, ಕಸದ ಕೊಂಪೆಯಾಗಿದ್ದ ಈ ತಾಣವನ್ನು ಪೇಪರ್ ಸೀಡ್ ಸಂಸ್ಥೆ ಯವರು ಸ್ಥಳೀಯರ ಸಹಕಾರದೊಂದಿಗೆ ಅಭಿವೃದ್ಧಿಪಡಿಸಿದ್ದು, ಎಂಸಿಎಫ್‌ನ ಸಿಎಸ್‌ಆರ್ ನಿಧಿಯ ನೆರವೂ ದೊರಕಿ ಕಾಮಗಾರಿ ಉತ್ತಮವಾಗಿ ನಡೆಸಲು ಸಹಕಾರಿಯಾಗಿದೆ ಎಂದು ಪೇಪರ್ ಸೀಡ್ ಸಂಸ್ಥೆಯ ಮುಖ್ಯಸ್ಥ ನಿತಿನ್‌ವಾಸ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X