Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಸ್ಟಾರ್ಟಪ್‌ಗಳಿಗೆ...

ದ.ಕ.ಜಿಲ್ಲೆಯಲ್ಲಿ ಸ್ಟಾರ್ಟಪ್‌ಗಳಿಗೆ ಉತ್ತೇಜಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 April 2025 9:18 PM IST
share
ದ.ಕ.ಜಿಲ್ಲೆಯಲ್ಲಿ ಸ್ಟಾರ್ಟಪ್‌ಗಳಿಗೆ ಉತ್ತೇಜಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಮಂಗಳೂರು, ಎ.15: ಉದ್ಯಮ ಕ್ಷೇತ್ರದಲ್ಲಿ ನಾವೀನ್ಯತೆ ತರಲು ಸ್ಟಾರ್ಟಪ್‌ಗಳಿಗೆ ಹಣಕಾಸು ಬೆಂಬಲ ನೀಡುವ ವಿವಿಧ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇವುಗಳಿಗೆ ಹೆಚ್ಚು ಮಂದಿ ಯನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಸಾಕಷ್ಟು ವೃತ್ತಿಪರ ಶಿಕ್ಷಣ ಸಂಸ್ಥೆಗಳಿವೆ. ಆದರೂ, ಸ್ಟಾರ್ಟಪ್ ಯೋಜನೆಗಳಿಗೆ ಹೆಚ್ಚಿನ ಬೇಡಿಕೆ ಜಿಲ್ಲೆಯಲ್ಲಿ ಕಂಡುಬಂದಿಲ್ಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ವೃತ್ತಿಪರ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಯೋಜಿಸಿ ಸ್ಟಾರ್ಟಪ್ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮಾತನಾಡಿ, ವೃತ್ತಿಪರ ಶಿಕ್ಷಣ ಮುಗಿಸಿದ ವಿದ್ಯಾರ್ಥಿ ಗಳಿಗೆ ಸ್ಟಾರ್ಟಪ್ ಉದ್ಯಮಗಳಿಗೆ ಉತ್ತೇಜಿಸಲು ಈಗಾಗಲೇ ಇಂಜಿನಿಯರಿಂಗ್ ಕಾಲೇಜುಗಳೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎನ್‌ಐಟಿಕೆ ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿ, ಎನ್‌ಐಟಿಕೆಯನ್ನು ನೋಡಲ್ ಆಗಿ ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸ್ಟಾರ್ಟಪ್‌ಗಳು ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

‘ನ್ಯಾಯಾಲಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ’

ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ದಾಖಲಾಗಿರುವ ದಾವೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಪಾಲಿಸಲು ತ್ವರಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸದಿರುವುದರಿಂದ ಸರಕಾರವು ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಎದುರಿಸಬೇಕಾದ ಪ್ರಸಂಗಗಳು ಉಂಟಾಗಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಪ್ರಕರಣಗಳ ಮೇಲ್ವಿಚಾರಣೆ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.

ಕಂದಾಯ ಮತ್ತು ಅರಣ್ಯ ಜಮೀನುಗಳ ಬಗ್ಗೆ ದಾಖಲೆಗಳಲ್ಲಿ ಸರಿಯಾದ ನಮೂದು ಮಾಡಲು ಗಮನ ಹರಿಸಬೇಕು. ಇಲ್ಲದಿದ್ದಲ್ಲಿ ಜಮೀನುಗಳ ದಾಖಲೆ ಬಗ್ಗೆ ತಕರಾರುಗಳು ಉಂಟಾಗುತ್ತಿವೆ. ಪ್ರಸಕ್ತ ಹಣ ಕಾಸು ವರ್ಷದ ಮೊದಲ ತ್ರೈಮಾಸಿಕ ಅನುದಾನ ಬಿಡುಗಡೆಗೊಂಡಿದ್ದು, ಎಲ್ಲ ಇಲಾಖೆಗಳು ಮೇ ಅಂತ್ಯದೊಳಗೆ ಕ್ರಿಯಾ ಯೋಜನೆ ತಯಾರಿಸಬೇಕು. ಅನುದಾನವನ್ನು ವರ್ಷಾಂತ್ಯದವರೆಗೂ ಬಳಕೆ ಮಾಡದೆ, ಕೊನೆಯಲ್ಲಿ ತರಾತುರಿಯಲ್ಲಿ ವೆಚ್ಚ ಮಾಡುವ ಪ್ರಸಂಗ ಎದುರಾಗಬಾರದು ಎಂದು ತುಳಸಿ ಮದ್ದಿನೇನಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಆನಂದ್, ಅಪರ ಜಿಲ್ಲಾಧಿ ಕಾರಿ ಡಾ. ಸಂತೋಷ್ ಕುಮಾರ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X