Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು...

ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ17 April 2025 10:24 PM IST
share
ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಬೆಂಗಳೂರು, ಎ.17: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಗುರುವಾರ ಭೇಟಿಯಾದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲ ಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಹತ್ವದ ಚರ್ಚೆ ನಡೆಸಿದ್ದಾರೆ.

ವಿಧಾನಸೌಧದ ಮುಖ್ಯ ಕಾರ್ಯದರ್ಶಿ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ಮಂಗಳೂರು - ಬೆಂಗಳೂರು ನಡುವಿನ ಮುಖ್ಯ ಸಂಪರ್ಕವಾಗಿರುವ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲು ಹಳಿ ಸುಧಾರಣೆ ಸಂಬಂಧ ಡಿಪಿಆರ್ ತಯಾರಿ ಪ್ರಕ್ರಿಯೆ ನಡೆಯುತ್ತಿದೆ. ರಾಜಧಾನಿ ಬೆಂಗಳೂರಿನಿಂದ ಕರಾವಳಿ ನಗರಗಳಿಗೆ ಪ್ರಮುಖ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಈಗ ಇರುವ ರಸ್ತೆಗೆ ಹೆಚ್ಚುವರಿ ದ್ವಿಪಥ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ತಯಾರಿಗೆ ಮುಂದಾಗಿದೆ. ಇದಲ್ಲದೇ ಶಿರಾಡಿ ಘಾಟ್‌ನಲ್ಲಿ ಪ್ರತ್ಯೇಕ ರೈಲು ಮಾರ್ಗ ರಚಿಸಲು ರೈಲ್ವೆ ಇಲಾಖೆ ಕೂಡ ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ. ಆದರೆ ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ. ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ ಮೇಲಾ ಗುವ ಪರಿಣಾಮವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ ಸಂಯೋಜಿತ ಯೋಜನೆ ರೂಪಿಸು ವುದರಿಂದ ಇಲಾಖೆಗಳ ಅನುಮೋದನೆ ಪಡೆಯುವುದು ಸುಲಭವಾಗುತ್ತದೆ. ಅದಕ್ಕಿಂತಲೂ ಮುಖ್ಯವಾಗಿ ಅರಣ್ಯ ಇಲಾಖೆಯ ಅನುಮತಿ ಪಡೆಯುವುದಕ್ಕೂ ಅನುಕೂಲವಾಗಲಿದೆ ಎಂದು ಇದೇ ವೇಳೆ ಸಂಸದರು ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿದ್ದಾರೆ.

ಮಂಗಳೂರು ಬಂದರು ಹಾಗೂ ಕರಾವಳಿ ಅಭಿವೃದ್ದಿ ದೃಷ್ಟಿಯಿಂದ ಶಿರಾಡಿ ಘಾಟಿ ಹೆದ್ದಾರಿಯನ್ನು ಮೇಲ್ದರ್ಜೆ ಗೇರಿಸುವುದು ಅತ್ಯವಶ್ಯಕವಾಗಿದೆ. ಅದೇ ರೀತಿ ಕರಾವಳಿ ಭಾಗಕ್ಕೆ ಹೆಚ್ಚಿನ ರೈಲು ಸಂಪರ್ಕ ವನ್ನು ಆರಂಭಿಸುವುದಕ್ಕೆ ಶಿರಾಡಿ ಘಾಟಿ ಭಾಗದಲ್ಲಿ ರೈಲ್ವೇ ಮೂಲಸೌಕರ್ಯವನ್ನು ಕೂಡಾ ಹೆಚ್ಚಿಸಬೇ ಕಾಗಿದೆ. ರೈಲು ಹಾಗೂ ಹೆದ್ದಾರಿಗಳು ಒಟ್ಟಿಗೆ ಅಭಿವೃದ್ದಿಯಾದರೆ ಮಂಗಳೂರಿನ ವಾಣಿಜ್ಯ ಚಟುವಟಿಕೆ ಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ ಹಾಗೂ ಸರಕು ಸಾಗಾಟ ಮತ್ತಷ್ಟು ಸುಗಮವಾಗಲಿದೆ. ಹೀಗಾಗಿ ಶಿರಾಡಿ ಘಾಟಿಯಲ್ಲಿ ರಸ್ತೆ ಮತ್ತು ರೈಲ್ವೇ ಅಭಿವೃದ್ದಿ ಹಿನ್ನಲೆಯಲ್ಲಿ ಸಂಯೋಜಿತ ಡಿಪಿಆರ್ ತಯಾರಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಈಗಾಗಲೇ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿ ಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಹೀಗಿರುವಾಗ ಎರಡೂ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಒಂದಕ್ಕೊಂದು ಪೂರಕ ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಚೌಟ ಕೋರಿದ್ದಾರೆ.

ರಸ್ತೆ ಹಾಗೂ ರೈಲು ಮೂಲಸೌಕರ್ಯ ಹೆಚ್ಚಿಸುವುದಕ್ಕೆ ಸಂಬಂಧಪಟ್ಟ ಇಲಾಖೆಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಕೇಂದ್ರದ ಏಜೆನ್ಸಿಗಳಿಗೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವುದಾಗಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X