Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವ-ಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ...

ಸ್ವ-ಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ವಾರ್ತಾಭಾರತಿವಾರ್ತಾಭಾರತಿ19 April 2025 10:35 PM IST
share
ಸ್ವ-ಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ ಮಂಗಳೂರು ತಾಲೂಕುಪಂಚಾಯತ್ ಆವರಣದಲ್ಲಿ ಶನಿವಾರ ನಡೆಯಿತು.

ದ.ಕ.ಜಿ.ಪಂ.ನ ಯೋಜನಾ ನಿರ್ದೇಶಕ ಕೆ.ಇ.ಜಯರಾಂ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗ್ರಾಮೀಣ ಪ್ರದೇಶದ ಸ್ವಸಹಾಯ ಗುಂಪಿನ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಸಂಜೀ ವಿನಿ ಎನ್‌ಆರ್‌ಎಲ್‌ಎಮ್ ಸಂಸ್ಥೆ ಉತ್ತಮ ವೇದಿಕೆ ಕಲ್ಪಿಸುತ್ತಿದೆ. ಗುಂಪಿನ ಮಹಿಳೆಯರು ಇದರ ಸದುಪ ಯೋಗ ಪಡೆದುಕೊಳ್ಳುವುದರ ಜೊತೆಗೆ, ಆಹಾರ ಗುಣಮಟ್ಟ ಹಾಗೂ ಸುರಕ್ಷತೆಯ ಪ್ರಮಾಣಪತ್ರ ಹಾಗೂ ಉದ್ದಿಮೆ ನೋಂದಣಿ ಪ್ರಮಾಣ ಪತ್ರ ಪಡೆಯಲು ಪ್ರೋತ್ಸಾಹದ ಸದುಪಯೋಗ ಪಡೆದುಕೊಳ್ಳುವಂತೆೆ ಅವರು ಸಲಹೆ ನೀಡಿದರು.

ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ. ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಳಿಗೆಗಳನ್ನು ಉದ್ಘಾಟಿಸಿ, ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಿದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಗುಂಪುಗಳ ಮಳಿಗೆಗಳೇ ಉದಾಹರಣೆ ಎಂದರು. ತಾ.ಪಂ. ಸಹಾಯಕ ನಿರ್ದೇಶಕ ಮಹೇಶ್ , ಸಾನಿಧ್ಯ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಜಿಲ್ಲೆಯ ಸಂಜೀವಿನಿ ಒಕ್ಕೂಟಗಳ ಕಾರ್ಯಚಟುವಟಿಕೆಯನ್ನು ಗುರುತಿಸಿ ಬಹುಮಾನ ನೀಡಲಾಗಿದ್ದು, ಗುತ್ತಿಗಾರು ಅಮರ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟಕ್ಕೆ ಅತ್ಯುತ್ತಮ ಒಕ್ಕೂಟ ಪ್ರಶಸ್ತಿ ಹಾಗೂ ೧ ಲಕ್ಷ ರೂ.ನಗದು , ಗೋಳ್ತಮಜಲು ಆಶೀರ್ವಾದ ಸಂಜೀವಿನಿ ಗ್ರಾ.ಪಂ. ಒಕ್ಕೂಟಕ್ಕೆ ಪ್ರಶಸ್ತಿ ಪತ್ರ ಹಾಗೂ ೭೫ಸಾವಿರ ರೂ.ನಗದು ಹಾಗೂ ಬಲ್ನಾಡು ಸಮೃದ್ಧಿ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟಕ್ಕೆ ಪ್ರಶಸ್ತಿ ಪತ್ರ ಹಾಗೂ ೫೦ಸಾವಿರ ರೂ.ನಗದು ಬಹುಮಾನ ವಿತರಿಸಲಾಯಿತು.

ಕ್ರಿಯಾಶೀಲ ಸ್ವಸಹಾಯ ಗುಂಪುಗಳ ಪೈಕಿ ಗೋಳ್ತಮಜಲು ಶ್ರೀ ಸಿದ್ಧಿವಿನಾಯಕ ಸ್ವಸಹಾಯ ಗುಂಪು ೭೫ ಸಾವಿರರೂ. ನಗದು, ತಣ್ಣೀರು ಪಂಥ ಲಕ್ಷ್ಮೀ ಸಂಜೀವಿನೀ ಒಕ್ಕೂಟ 50 ಸಾವಿರ ರೂ.ನಗದು, ಕೋಡಿಂಬಾಡಿ ವಿಜಯ ಶ್ರೀ ಸ್ವಸಹಾಯ ಸಂಘಕ್ಕೆ 25 ಸಾವಿರ ರೂ. ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಜಿಲ್ಲೆಯ ವಿವಿಧ ಗುಂಪು ಒಕ್ಕೂಟಗಳ 30 ಮಳಿಗೆಗಳಲ್ಲಿ 70ಕ್ಕೂ ಅಧಿಕ ಉತ್ಪನ್ನಗಳು ಗಮನಸೆಳೆದವು.

ನಲ್ಮ್ ಜಿಲ್ಲಾ ಅಭಿಯಾನ ವ್ಯವಸ್ಥಾಪಕ ಐರಿನ್ ರೆಬೆಲ್ಲೋ ಸ್ವಾಗತಿಸಿ, ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ವಂದಿಸಿದರು. ಜಯಾನಂದ ಬೆಳ್ತಂಗಡಿ ಕಾರ್ಯಕ್ರಮ ನಿರ್ವಹಿಸಿದರು. ಅಪರಾಹ್ನದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೀವಿನಿ ಜಿಲ್ಲಾ ವ್ಯವಸ್ಥಾಪಕಿ ವಾಣಿಶ್ರೀ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X