ಡಾ. ಅರುಣ್ ಕುಮಾರ್ ಶೆಟ್ಟಿಗೆ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

ಮಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಕೊಡಲ್ಪಡುವ ರಾಜ್ಯ ಮಟ್ಟದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ದ.ಕ. ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ ಆಯುಕ್ತರಾಗಿ ಮತ್ತು ಮೂಡುಬಿದಿರೆ ತಾಪಂ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಎ.21ರ ಸರ್ಕಾರಿ ನೌಕರರ ದಿನಾಚರಣೆಯಂದು ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ಪ್ರಕಟನೆ ತಿಳಿಸಿದೆ.
Next Story