Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ : ಸಿಪಿಎಂ ಹಾಗೂ ಡಿವೈಎಫ್‌ಐ...

ಸುರತ್ಕಲ್ : ಸಿಪಿಎಂ ಹಾಗೂ ಡಿವೈಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ‌

ವಾರ್ತಾಭಾರತಿವಾರ್ತಾಭಾರತಿ21 April 2025 10:12 PM IST
share
ಸುರತ್ಕಲ್ : ಸಿಪಿಎಂ ಹಾಗೂ ಡಿವೈಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ‌

ಸುರತ್ಕಲ್ : ನಿರ್ಮಾಣ ಹಂತದಲ್ಲೇ ಸ್ಥಗಿತಗೊಂಡಿರುವ ಸುರತ್ಕಲ್ ಇಡ್ಯಾ ಗ್ರಾಮದ ಜನತಾ ಕಾಲನಿ ಯಲ್ಲಿನ ವಸತಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಬೇ ಕೆಂದು ಒತ್ತಾಯಿಸಿ ಸಿಪಿಎಂ ಮಂಗಳೂರು ನಗರ ಉತ್ತರ ಸಮಿತಿ ಹಾಗೂ ಡಿವೈಎಫ್ ಐ ಸುರತ್ಕಲ್ ವಲಯ ಸಮಿತಿಯ ನೇತೃತ್ವದಲ್ಲಿ ಫಲಾನುಭವಿಗಳು ಸೋಮವಾರ ಜನತಾಕಾಲನಿಯ ನಿರ್ಮಾಣ ಹಂತದ ವಸತಿ ಸಮುಚ್ಚಯದ ವಠಾರದಲ್ಲಿ ಪ್ರತಿಭಟನೆ‌ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಮನೆ, ನಿವೇಶನ ರಹಿತ ಬಡವರಿದ್ದಾರೆ. ನಗರ ಪಾಲಿಕೆ ಬಡವರಿಗೆ ನಿವೇಶನ ವಿತರಿಸಲು ಪಾಲಿಕೆಯಲ್ಲಿ ಯಾವುದೇ ಯೋಜನೆಯಿಲ್ಲ. ಇರುವಂತಹಾ ಒಂದು ಜಿ+4 ವಸತಿ ಸಮುಚ್ಚಯ ಜನಪ್ರತಿನಿದಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಯೋಜನೆ ನನೆಗುದಿಗೆ ಬಿದ್ದಿದೆ. ಶ್ರೀಮಂತ ಬಿಲ್ಡರುಗಳ ವಸತಿ ಸಂಕೀರ್ಣದ ಭೂಮಿ ಪೂಜೆಗೆ ಹೋಗುವ ಶಾಸಕರುಗಳು ಕಳೆದ 25ವರ್ಷಗಳಿಂದ ಬಡವರಿಗೆ ವಸತಿ ಸೌಕರ್ಯಗಳು ದೊರಕಿಸಿ ಕೊಡಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಬಡವರಿಗೆ ಕೂಡಲೇ ಮನೆ ವಿತರಿಸದಿದ್ದರೆ ವಸತಿ ಸಮುಚ್ಚಯಕ್ಕೆ ಅಕ್ರಮ ಪ್ರವೆಶ ಮಾಡಿ ಫಲಾನುಭವಿಗಳೊಂದಿಗೆ ವಾಸ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು.

ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ ಮಾತನಾಡಿ, ಜನರಿಗೆ ವಸತಿ ನೀಡುವುದು ಭಿಕ್ಷೆಯಲ್ಲ ಅದು ನಮ್ಮ ಸಂವಿಧಾನ ಬದ್ದ ಹಕ್ಕಾಗಿದೆ. ನಗರಪಾಲಿಕೆ ವ್ಯಾಪ್ತಿಯೊಳಗಿನ ನಿವೇಶನ ರಹಿತರ ಸಮಸ್ಯೆ ಗಂಭೀರವಾಗಿದೆ. ಧ್ವೇಷ ರಾಜಕೀಯದಲ್ಲಿ ತೊಡಗಿರುವ ಶಾಸಕರ ನೇತೃತ್ವದ ಆಶ್ರಯ ಸಮಿತಿ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಅವರು ಆರೋಪಿಸಿದರು.

ಸಿಪಿಎಂ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ನಗರಪಾಲಿಕೆ ವ್ಯಾಪ್ತಿಯ ಎಲ್ಲಾ ನಿವೇಶನ ರಹಿತರನ್ನು ಸಂಘಟಿಸಿ ಮೇ 4ರಂದು ಸಮಾವೇಶ ನಡೆಸಲು ಸಿದ್ಧತೆಗಳು ನಡೆಯುತ್ತಿವೆ. ನಮ್ಮ ಪ್ರತಿಭಟನೆಗಳಿಗೆ ಮನಪಾ ಮತ್ತು ಜನಪ್ರತಿನಿಧಿಗಳು ಬಗ್ಗದೇ ಇದ್ದಲ್ಲಿ ಫಲಾನುಭವಿಗಳೊಂದಿಗೆ ಮನಪಾ ಮತ್ತು ಜನಪ್ರತಿನಿಧಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಎಚ್ವರಿಕೆ ನೀಡಿದರು‌.

ಈ ಸಂದರ್ಭ ಐ‌. ಮುಹಮ್ಮದ್, ಸಲೀಮ್ ಶಾಡೋ, ಡಿವೈಎಫ್ಐ ಮುಖಂಡರಾದ ಬಿ.ಕೆ. ಮಕ್ಸೂದ್, ನವಾಝ್ ಕುಳಾಯಿ, ಇಲ್ಯಾಸ್ ಕೃಷ್ಣಾಪುರ, ಇಮ್ತಿಯಾಝ್ ಕುಳಾಯಿ, ಹನೀಫ್ ಕುಳಾಯಿ, ಸಾದಿಕ್ ಕಿಲ್ಪಾಡಿ, ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡರಾದ ಲಕ್ಷ್ಮೀಶ್ ಅಂಚನ್, ಬಷೀರ್ ಕಾನ, ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡರಾದ ಬಾಲಾಕೃಷ್ಣ ಕುಳಾಯಿ, ಭವ್ಯಾ ಪಂಜಿ ಮೊಗರು, ಜೈನಾಬ್, ದಿಲ್ ದಾರ್, ಹಸೀನಾ, ನೌಸೀನಾ, ಮರಿಯಮ್ಮ ಮೊದಲಾದವರು ಉಪಸ್ಥಿತರಿದ್ದರು.

ಸಿಪಿಎಂ ಮುಖಂಡರಾದ ಶ್ರೀನಾಥ್ ಕುಲಾಲ್ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X