Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನರ ಬದುಕಿನ ಕುರಿತು ಧ್ವನಿ‌ ಎತ್ತುವುದು,...

ಜನರ ಬದುಕಿನ ಕುರಿತು ಧ್ವನಿ‌ ಎತ್ತುವುದು, ಹೋರಾಟಗಳನ್ನು ಸಂಘಟಿಸುವುದೇ ನಿಜವಾದ ರಾಜಕಾರಣ: ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ21 April 2025 10:38 PM IST
share
ಜನರ ಬದುಕಿನ ಕುರಿತು ಧ್ವನಿ‌ ಎತ್ತುವುದು, ಹೋರಾಟಗಳನ್ನು ಸಂಘಟಿಸುವುದೇ ನಿಜವಾದ ರಾಜಕಾರಣ: ಮುನೀರ್ ಕಾಟಿಪಳ್ಳ

ಕೊಣಾಜೆ: ಜನರ ಬದುಕಿನ ಕುರಿತು ಧ್ವನಿ ಎತ್ತುವುದು, ಹೋರಾಟಗಳನ್ನು ಸಂಘಟಿಸುವುದು ನಿಜವಾದ ರಾಜಕಾರಣ. ಆದರೆ, ತುಳುನಾಡು ಅದಕ್ಕೆ ವಿರುದ್ಧವಾಗಿ ಚಲಿಸುತ್ತಿದೆ. ಇಲ್ಲಿನ ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಅಬ್ಬರದ ಕಂಬಳ, ಹುಲಿ ಕುಣಿತ, ಹೊನಲು ಬೆಳಕಿನ ಕ್ರೀಡಾಕೂಟ ಗಳನ್ನು ಹಮ್ಮಿಕೊಂಡು ಜನರ ಗಮನ ಸೆಳೆಯುವುದೇ ರಾಜಕಾರಣವನ್ನಾಗಿಸಿವೆ. ಇದರಿಂದ ಜನ ಸಾಮಾನ್ಯರ ಬದುಕಿನ ಬೇಡಿಕೆಗಳ ಧ್ವನಿ ಕಳೆದುಕೊಂಡಿವೆ. ಸಿಪಿಐಎಂ ಪಕ್ಷ ಮಾತ್ರ ಇದಕ್ಕೆ ವಿರುದ್ದವಾಗಿ ನಿಜವಾದ ಜನ ರಾಜಕಾರಣ ಮಾಡುತ್ತಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ವಸತಿಯ ಹಕ್ಕುಗಳಿಗಾಗಿ ನಿರಂತರ ಧ್ವನಿ ಎತ್ತುತ್ತಾ ಬಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳರವರು ಹೇಳಿದರು.

ಅವರು ಸಿಪಿಐಎಂ ಉಳ್ಳಾಲ ಮತ್ತು ಮುಡಿಪು ವಲಯ ಸಮಿತಿಗಳು ಎಪ್ರಿಲ್ 29 ರಂದು ದೇರಳಕಟ್ಟೆ ಯಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ಧಿಯ ಬೇಡಿಕೆಗಳ ಮೇಲಿನ ಹಕ್ಕೊತ್ತಾಯ ಸಮಾವೇಶದ ಪ್ರಚಾರಾರ್ಥವಾಗಿ ಹಮ್ಮಿಕೊಂಡಿರುವ ಎರಡು ದಿನಗಳ ವಾಹನ ಜಾಥಾವನ್ನು ಮುಡಿಪು ಜಂಕ್ಷನ್ ನಲ್ಲಿ ಉದ್ಘಾಟಿಸಿ ಮಾತನಾಡಿದರು.

ಉಳ್ಳಾಲ ತಾಲೂಕು ಉಳ್ಳವರ, ಖಾಸಗಿ ಶಿಕ್ಷಣ, ಆರೋಗ್ಯದ ಲಾಭಿಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಮರಳು ಹಾಗೂ ಕೆಂಪು ಮಣ್ಣು ಮಾಫಿಯಾಗಳು ಇಡೀ ಉಳ್ಳಾಲವನ್ನು ತಮ್ಮ ಕಪಿ ಮುಷ್ಟಿಯಲ್ಲಿ ಇಟ್ಟು ಕೊಂಡಿವೆ. ಸ್ಥಳೀಯರ ಮಕ್ಕಳು ಶಿಕ್ಷಣ ಪಡೆಯಲು ಒಂದು ಸರಕಾರಿ ಪದವಿ ಕಾಲೇಜೂ ಇಲ್ಲದ ದುಸ್ಥಿತಿ ಇಲ್ಲಿನದು. ಬಡವರಿಗೆ ವಸತಿ ಒದಗಿಸುವುದನ್ನು ಆಡಳಿತ ಪೂರ್ತಿ ಮರೆತು ಬಿಟ್ಟಿದೆ. ತಾಲೂಕು ರಾಜಕಾರಣ ಪೂರ್ತಿಯಾಗಿ ಬಲಿಷ್ಟ ಲಾಭಿಗಳಿಗೆ ಶರಣಾಗಿವೆ. ಇಂತಹ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಸ್ಥಳೀಯ ಸಮಿತಿಗಳು ಜನ ಸಾಮಾನ್ಯರ ಬೇಡಿಕೆಗಳ ಪರವಾಗಿ ಧ್ವನಿ ಎತ್ತಲು ಮುಂದಾಗಿರುವುದು ಅಭಿನಂದನೀಯಎಂದು ಹೇಳಿದರು.

ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾ ಡುತ್ತಾ, ಉಳ್ಳಾಲ ತಾಲೂಕು ಆಗಿ ಐದು ವರ್ಷಗಳು ದಾಟಿದರೂ ಸುಸಜ್ಜಿತ ತಾಲೂಕು ಕಚೇರಿ ಕನಸಾ ಗಿಯೆ ಉಳಿದಿದೆ. ಹೊಸ ತಾಲೂಕಿಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳನ್ನು ಪಡೆಯಲು ಹಾಗೂ ಜನ ಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬ್ರಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೊಟು, ಬಿ‌ ಎಂ ಭಟ್, ಜಿಲ್ಲಾ ಸಮಿತಿ ಸದಸ್ಯರಾದ ರಫೀಕ್ ಹರೇಕಳ, ಈಶ್ವರೀ ಬೆಳ್ತಂಗಡಿ, ಶೇಖರ್ ಕುಂದರ್, ಉಭಯ ವಲಯ ಸಮಿತಿ ಮುಖಂಡರಾದ ಸುಂದರ ಕುಂಪಲ, ಪ್ರಮೋದಿನಿ ಕಲ್ಲಾಪು, ರಿಜ್ವಾನ್ ಹರೇಕಳ, ರೋಹಿದಾಸ್ ಭಟ್ನಗರ, ಪದ್ಮನಾಭ ಕುಂಪಲ, ರಜಾಕ್ ಮುಡಿಪು, ರಜಾಕ್ ಮೊಂಟೆಪದವು, ಸಾಮಾಜಿಕ ಹೋರಾಟಗಾರರಾದ ಅಬೂಬಕ್ಕರ್ ಜೆಲ್ಲಿ, ಹಿರಿಯ ಮುಖಂಡರಾದ ಮೊಯಿದಿನಬ್ಬ,ಮಹಿಳಾ ಮುಖಂಡರಾದ ಅಸುಂತ ಡಿಸೋಜ,ಫ್ಲೇವಿ ಕ್ರಾಸ್ತಾ, ಯೋಗಿತಾ,ಮಾಲತಿ, ಯುವಜನ ನಾಯಕರಾದ ಇರ್ಫಾನ್ ಇರಾ,ರಫೀಕ್ ಮೊಂಟೆಪದವು,ಫಾರೂಕ್ ಕೋಣಾಜೆ,ಮುಸ್ತಾಫ ಸುರತ್ಕಲ್,ಕಾರ್ಮಿಕ ಮುಖಂಡರಾದ ಕಲಂದರ್ ಕೋಟೆಕಾರ್,ಸಲೀಂ ಕಿನ್ಯಾ, ವಿದ್ಯಾರ್ಥಿ ನಾಯಕರಾದ ಅಮೀನ್ ಮೊಂಟೆಪದವು ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X