ದುಬೈಯಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವಾರ್ಷಿಕ ಮಹಾಸಭೆ

ಮಂಗಳೂರು, ಎ.22: ದುಬೈಯಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವಾರ್ಷಿಕ ಮಹಾಸಭೆ ಎ.19ರಂದು ದುಬೈಯಲ್ಲಿ ನಡೆಯಿತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಹಾಗೂ ಪ್ರಾಧಿಕಾರದ ಸದಸ್ಯ ಡಾ. ಸಂಜೀವ ಕುಮಾರ ಅತಿವಾಲೆ, ಶಿವರೆಡ್ಡಿ ಖ್ಯಾಡೆದ್ ಸಭೆಯಲ್ಲಿ ಭಾಗವಹಿಸಿದ್ದರು.
ವಾರ್ಷಿಕ ಮಹಾಸಭೆಯಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಜಿಸಿಸಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಅಶ್ರಫ್ ಶಾ ಮಾಂತೂರ್ ಆಯ್ಕೆಯಾದರು. ಯುಎಇ ಘಟಕದ ಗೌರವ ಅಧ್ಯಕ್ಷರನ್ನಾಗಿ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲೆ, ಅಧ್ಯಕ್ಷರನ್ನಾಗಿ ಅಮರ್ ಕಲ್ಲುರಾಯ, ಪ್ರಧಾನ ಕಾರ್ಯ ದರ್ಶಿಯನ್ನಾಗಿ ಇಬ್ರಾಹೀಂ ಬಾಜೂರಿ, ಕೊಶಾಧಿಕಾರಿಯನ್ನಾಗಿ ಅಶ್ರಫ್ ಬಾಯಾರ್ ಇವರನ್ನು ನೇಮಿಸಲಾಯಿತು.
ಗಡಿನಾಡು ಸಾಂಸ್ಕೃತಿಕ ಅಕಾಡೆಮಿ ಕೇಂದ್ರ ಸಮಿತಿಯ ಕೋಶಾಧಿಕಾರಿ ಝೆಡ್.ಎ.ಕಯ್ಯಾರ್ ಹಾಗೂ ಉದ್ಯಮಿ ಶಿವಶಂಕರ ನೆಕ್ರಾಜೆ, ಯೂಸುಫ್ ಶೇಣಿ, ಪಿ ಪಿ, ಮಂಜುನಾಥ ಕಾಸರಗೋಡು,ಅಲಿ ಸಾಗ್ ವಿಜಯಕುಮಾರ ಶೆಟ್ಟಿ ಗಾಣದಮೂಲೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಯುಎಇ ಪ್ರವಾಸದಲ್ಲಿರುವ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರನ್ನು ಹಾಗೂ ಪ್ರಾಧಿಕಾರದ ಸದ್ಯಸರನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯು.ಎ.ಇ. ಘಟಕದ ವತಿಯಿಂದ ಸನ್ಮಾನಿಸಲಾಯಿತು.







